Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಶೇಷ ಭತ್ಯೆ ನೀಡಲು ಒತ್ತಾಯ: 3...

ವಿಶೇಷ ಭತ್ಯೆ ನೀಡಲು ಒತ್ತಾಯ: 3 ದಿನಗಳಿಂದ ಕಪ್ಪು ಪಟ್ಟಿ ಧರಿಸಿ ಕರ್ತವ್ಯದಲ್ಲಿ ತೊಡಗಿರುವ ಆಯುಷ್ ವೈದ್ಯರು

ವಾರ್ತಾಭಾರತಿವಾರ್ತಾಭಾರತಿ3 Jun 2021 3:53 PM IST
share
ವಿಶೇಷ ಭತ್ಯೆ ನೀಡಲು ಒತ್ತಾಯ: 3 ದಿನಗಳಿಂದ ಕಪ್ಪು ಪಟ್ಟಿ ಧರಿಸಿ ಕರ್ತವ್ಯದಲ್ಲಿ ತೊಡಗಿರುವ ಆಯುಷ್ ವೈದ್ಯರು

ಶಿವಮೊಗ್ಗ, ಜೂ.3: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯಾಧಿಕಾರಿಗಳಿಗೆ ನೀಡಲಾಗುತ್ತಿರುವ ವಿಶೇಷ ಭತ್ಯೆಯನ್ನು ಆಯುಷ್ ವೈದ್ಯಾಧಿಕಾರಿಗಳಿಗೂ ವಿಸ್ತರಿಸಬೇಕೆಂದು ವೈದ್ಯರು ಕಳೆದ ಮೂರು ದಿನಗಳಿಂದ ಕಪ್ಪು ಪಟ್ಟಿ ಧರಿಸಿ ಕರ್ತವ್ಯದಲ್ಲಿ ತೊಡಗಿದ್ದಾರೆ.

ಸರ್ಕಾರಿ ವೈದ್ಯಾಧಿಕಾರಿಗಳಿಗೆ ಕೊರೋನ ಸಂದರ್ಭದಲ್ಲಿ ವಿಶೇಷ ಭತ್ಯೆ ನೀಡಲು ಆದೇಶಿಸಲಾಗಿತ್ತು. ಕಾಲ ಕಾಲಕ್ಕೆ ನೀಡಲಾಗುವ ವೇತನ, ಭತ್ಯೆ ಹಾಗೂ ಸ್ಥಾನಮಾನಗಳನ್ನು ಆಯುಷ್ ವೈದ್ಯಾಧಿಕಾರಿಗಳಿಗೂ ವಿಸ್ತರಿಸಬೇಕೆಂದು ಸಚಿವ ಸಂಪುಟದಲ್ಲಿ ನಿರ್ಣಯಿಸಲಾಗಿದೆ. ಹೀಗಿದ್ದೂ ಆಯುಷ್ ವೈದ್ಯಾಧಿಕಾರಿಗಳನ್ನು ಹೊರತು ಪಡಿಸಿ ವಿಶೇಷ ಭತ್ಯೆ ನೀಡಿರುವುದು ಅಸಮಂಜಸ, ಅಸಮರ್ಥನೀಯ ಎಂದು ಮನವಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೊರೋನ ಹಾವಳಿಯ ಸಂದರ್ಭದಲ್ಲಿ ಸರ್ಕಾರವು ಪ್ರತಿಯೊಬ್ಬ ಅಲೋಪತಿ, ಆಯುಷ್ ವೈದ್ಯಾಧಿಕಾರಿಗಳನ್ನು ವಿವಿಧ ಜವಾಬ್ದಾರಿಗಳ ನಿರ್ವಹಣೆಗೆ ನಿಯೋಜಿಸಿದೆ. ಯಾವೊಬ್ಬ ಆಯುಷ್ ವೈದ್ಯಾಧಿಕಾರಿಯು ಹಿಂಜರಿಯದೆ ತಮ್ಮ ಕರ್ತವ್ಯವನ್ನು ಅತ್ಯಂತ ನಿಷ್ಠೆಯಿಂದ ನಿಭಾಯಿಸುತ್ತಿದ್ದಾರೆ. ಕೋವಿಡ್ ಕೇರ್ ಕೇಂದ್ರ, ತಪಾಸಣಾ ಕೇಂದ್ರ, ಚಿಕಿತ್ಸಾ ಕೇಂದ್ರದಲ್ಲಿ ಅತ್ಯಂತ ದಕ್ಷತೆಯಿಂದ ಸೇವೆ ಸಲ್ಲಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಕೋವಿಡ್ ಹಾವಳಿಯ ನಿಯಂತ್ರಣದಲ್ಲಿ ಆಯುಷ್ ವೈದ್ಯಾಧಿಕಾರಿಗಳು, ಅರ್ಹನೀಯ ಕರ್ತವ್ಯ ನಿರ್ವಹಿಸಿರುವುದಕ್ಕೆ ದಾಖಲೆಗಳು ಇವೆ. ಹೀಗಿರುವಾಗ ಪ್ರತಿ ಹಂತದಲ್ಲಿಯೂ ಕೆಲಸ ಕಾರ್ಯಗಳಿಗೆ ಆಯುಷ್ ವೈದ್ಯರನ್ನು ಬಳಸಿಕೊಂಡು ವಿಶೇಷ ಭತ್ಯೆಯ ಪರಿಷ್ಕರಣೆಯಲ್ಲಿ ಮಾತ್ರ ಕೈ ಬಿಟ್ಟು ಆದೇಶ ಹೊರಡಿಸಿರುವುದು ತಾರತಮ್ಯ ನೀತಿಯಾಗಿದೆ. ಆಯುಷ್ ವೈದ್ಯರು ಕೇವಲ ಕರ್ತವ್ಯ ನಿರ್ವಹಣೆಗೆ ಮಾತ್ರ ಬೇಕು. ಆರ್ಥಿಕ ಸೌಲಭ್ಯಗಳಿಗೆ ಮಾತ್ರ ಬೇಡ ಎನ್ನುವುದು ನಿಜಕ್ಕೂ ನೋವಿನ ಸಂಗತಿ ಎಂದು ತಿಳಿಸಿದ್ದಾರೆ.

ರಾಜ್ಯ ಆಯುಷ್ ವೈದ್ಯಾಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಜೆ.ಈರಣ್ಣ, ಡಾ.ಸಿ.ಎ.ಹಿರೇಮಠ್, ಡಾ.ಕುಮಾರ್ ಸಾಗರ್, ಡಾ.ಸತೀಶ್ ಆಚಾರ್ಯ, ಡಾ.ಶಶಿಕಾಂತ್, ಡಾ.ಎ.ಎಸ್.ಪುಷ್ಪ, ಡಾ.ಎಸ್.ರಾಘವೇಂದ್ರ, ಡಾ.ಸತೀಶ್, ಡಾ.ಕಾಂತ್‌ರಾಜ್, ಡಾ.ರವಿರಾಜ್, ಡಾ.ಹರ್ಷಪುತ್ರಾಯ, ಡಾ.ಎಸ್.ಹೆಚ್.ಲಿಂಗರಾಜ್, ಡಾ.ಸುರೇಂದ್ರ ಸೇರಿದಂತೆ ಅನೇಕ ವೈದ್ಯರು ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗುವ ಮೂಲಕ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X