ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ಜಯಾ ನಿಧನ

ಬೆಂಗಳೂರು, ಜೂ.3: ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ಜಯಾ (75) ಅವರು ಗುರುವಾರ ಮಧ್ಯಾಹ್ನ ನಿಧನರಾಗಿದ್ದಾರೆ.
ತಿಂಗಳ ಹಿಂದೆ ಪಾರ್ಶ್ವವಾಯುಗೆ ತುತ್ತಾಗಿದ್ದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಇಹಲೋಕ ತ್ಯಜಿಸಿದರು.
ಬಿ.ಜಯಾ ಕನ್ನಡ ಚಿತ್ರರಂಗದ ಮೊದಲ ತಲೆಮಾರಿನ ಜನಪ್ರಿಯ ಹಾಸ್ಯನಟಿ. ನರಸಿಂಹರಾಜು ಮತ್ತು ದ್ವಾರಕೀಶ್ ಜೋಡಿಯಾಗಿ ಅವರ ಪಾತ್ರಗಳು ಬಹು ಜನಪ್ರಿಯ. ಮೂರು ತಲೆಮಾರಿನ ನಟ, ನಟಿಯರೊಂದಿಗೆ ಅಭಿನಯಿಸಿರುವ ಹೆಗ್ಗಳಿಕೆ ಹೊಂದಿರುವ ನಟಿ ಬಿ.ಜಯಾ, 350ಕ್ಕೂ ಹೆಚ್ಚು ಸಿನಿಮಾಗಳು, ಹತ್ತಾರು ಧಾರಾವಾಹಿಗಳ ಸಾವಿರಾರು ಸಂಚಿಕೆಗಳಲ್ಲಿ ಅಭಿನಯಿಸಿದ್ದಾರೆ.
Next Story





