Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 209 ಸೂಕ್ಷ್ಮ, ಅತಿಸೂಕ್ಷ್ಮ ಸ್ಥಳಗಳಲ್ಲಿ...

209 ಸೂಕ್ಷ್ಮ, ಅತಿಸೂಕ್ಷ್ಮ ಸ್ಥಳಗಳಲ್ಲಿ ಶಾಶ್ವತ ಪರಿಹಾರ ರೂಪಿಸಲು ಯಡಿಯೂರಪ್ಪ ನಿರ್ದೇಶನ

ಬೆಂಗಳೂರು ನಗರದಲ್ಲಿ ಮಳೆ ವಿಕೋಪ ತಡೆಯಲು ಪೂರ್ವ ಸಿದ್ಧತೆ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ3 Jun 2021 7:12 PM IST
share
209 ಸೂಕ್ಷ್ಮ, ಅತಿಸೂಕ್ಷ್ಮ ಸ್ಥಳಗಳಲ್ಲಿ ಶಾಶ್ವತ ಪರಿಹಾರ ರೂಪಿಸಲು ಯಡಿಯೂರಪ್ಪ ನಿರ್ದೇಶನ

ಬೆಂಗಳೂರು, ಜೂ. 3: `ಬೆಂಗಳೂರು ನಗರದಲ್ಲಿ ಮಳೆ ವಿಕೋಪ ತಡೆಗಟ್ಟಲು ಈಗಾಗಲೇ ಗುರುತಿಸಲಾಗಿರುವ 209 ಸೂಕ್ಷ್ಮ ಮತ್ತು ಅತಿಸೂಕ್ಷ್ಮ ತಗ್ಗು ಪ್ರದೇಶಗಳಲ್ಲಿ ಶಾಶ್ವತ ಪರಿಹಾರ ಕಲ್ಪಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ನಿರ್ದೇಶನ ನೀಡಿದ್ದಾರೆ.

ಗುರುವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಬೆಂಗಳೂರು ನಗರದಲ್ಲಿ ಮಳೆ ವಿಕೋಪ ತಡೆಯಲು ಕೈಗೊಳ್ಳಲಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು. ನಗರದ ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ ಸೇರಿದಂತೆ 8 ವಲಯಗಳಲ್ಲಿ ಶಾಶ್ವತ ನಿಯಂತ್ರಣ ಕೊಠಡಿಗಳಿದ್ದು, 63 ತಾತ್ಕಾಲಿಕ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ.

ದಿನದ 24 ಗಂಟೆಯೂ ಈ ನಿಯಂತ್ರಣ ಕೊಠಡಿಗಳು ಕಾರ್ಯನಿರ್ವಹಿಸಲಿದ್ದು, ಅನ್-ಸ್ಕಿಲ್ಡ್ ಕೂಲಿಗಳು, ಮೇಲ್ವಿಚಾರಕರು, ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಅಗತ್ಯ ಸಲಕರಣೆಗಳನ್ನು ಸಂಗ್ರಹಿಸಲು ಕ್ರಮ ವಹಿಸಲಾಗುತ್ತಿದೆ. ರಸ್ತೆ ಬದಿ ಮಳೆನೀರು ಚರಂಡಿಗಳ ಹೂಳು ತೆರವುಗೊಳಿಸುವುದು, ಅಡ್ಡ ಮೋರಿಗಳ(ಚರಂಡಿ) ಹೂಳು ತೆಗೆಯುವುದು, ರಾಜ ಕಾಲುವೆಗೆ ಸಂಪರ್ಕಿಸುವ ಚರಂಡಿಗಳನ್ನು ಗುರುತಿಸಿ ಸುಸ್ಥಿತಿಯಲ್ಲಿಡಲು ಕ್ರಮ ವಹಿಸಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.

ದೊಡ್ಡ ಕಾಲುವೆಗಳಲ್ಲಿ 26 ವಾಟರ್ ಲೆವೆಲ್ ಸೆನ್ಸರ್ ಗಳನ್ನು ಅಳವಡಿಸಲಾಗಿದೆ. ಬೆಂಗಳೂರು ಮೇಘ ಸಂದೇಶ ಆ್ಯಪ್‍ನಲ್ಲಿ ಮಳೆಯ ಪ್ರಮಾಣದ ಮಾಹಿತಿ ಲಭ್ಯ. ನೀರು ಸಂಗ್ರಹವಾಗಿರುವ ಸ್ಥಳಗಳು, ಜನರಿಗೆ ಸುರಕ್ಷಿತ ಮಾರ್ಗ ಬಳಕೆಯ ಕುರಿತು ಮಾಹಿತಿ ನೀಡುತ್ತದೆ. 58 ಅತಿಸೂಕ್ಷ್ಮ, 151 ಸೂಕ್ಷ್ಮ ತಗ್ಗು ಪ್ರದೇಶಗಳೆಂದು ಗುರುತಿಸಿದ್ದು, ಈ ಪ್ರದೇಶಗಳಲ್ಲಿ ಪ್ರವಾಹ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ರೂಪಿಸುವಂತೆ ಸೂಚಿಸಿದರು.

ಬೆಂಗಳೂರು ನಗರದಲ್ಲಿ ತಡೆಗೋಡೆ ಇರುವ 440 ಕಿ.ಮೀ. ಉದ್ದದ ರಾಜಕಾಲುವೆ ಪ್ರದೇಶಗಳ ವಾರ್ಷಿಕ ನಿರ್ವಹಣೆಗೆ ಕ್ರಮ ವಹಿಸಲಾಗಿದೆ. ನಗರದ ಕೆರೆಗಳನ್ನು ದೈನಂದಿನ ಆಧಾರದಲ್ಲಿ ನಿರ್ವಹಿಸಲಾಗುತ್ತಿದ್ದು, ಮಳೆ ನೀರು ರಾಜಕಾಲುವೆಗಳ ಮೂಲಕ ಕೆರೆಗಳಿಗೆ ಹರಿಯುವಂತೆ ಮಾಡುವುದರಿಂದ ಪ್ರವಾಹ ತಪ್ಪಿಸಬಹುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ, ಅಧಿಕಾರಿಗಳಿಗೆ ಸಲಹೆ ನೀಡಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಕಂದಾಯ ಸಚಿವ ಆರ್.ಅಶೋಕ್, ವಸತಿ ಸಚಿವ ವಿ.ಸೋಮಣ್ಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ, ಅಬಕಾರಿ ಸಚಿವ ಕೆ.ಗೋಪಾಲಯ್ಯ, ಸಿಎಂ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಬಿಬಿಎಂಪಿ ಆಡಳಿತಾಧಿಕಾರಿ ಹಾಗೂ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X