Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭೂಮಿ ಹಡೀಲು ಬಿಟ್ಟರೆ ಸರಕಾರದಿಂದಲೇ...

ಭೂಮಿ ಹಡೀಲು ಬಿಟ್ಟರೆ ಸರಕಾರದಿಂದಲೇ ಕೃಷಿ: ಸಚಿವ ಕೋಟ

ಗಂಜಿಮಠ: ‘ಹಡೀಲು ಗದ್ದೆಯಲ್ಲಿ ಭತ್ತ ಬೆಳೆಯೋಣ’ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ3 Jun 2021 9:07 PM IST
share
ಭೂಮಿ ಹಡೀಲು ಬಿಟ್ಟರೆ ಸರಕಾರದಿಂದಲೇ ಕೃಷಿ: ಸಚಿವ ಕೋಟ

ಗುರುಪುರ, ಜೂ.3: ಗುರುಪುರ-ಸುರತ್ಕಲ್ ಹೋಬಳಿಯಲ್ಲಿ ಸುಮಾರು 263 ಹೆಕ್ಟೇರು ಹಡೀಲು ಭೂಮಿಯನ್ನು ಗುರುತಿಸಲಾಗಿದೆ. ಆ ಪೈಕಿ 172 ಹೆಕ್ಟೇರು ಭೂಮಿ ಮರುಕೃಷಿಗೆ ಅನುಕೂಲವಾಗಿದೆ. ಕೃಷಿ ಭೂಮಿಯನ್ನು ಯಾವ ಕಾರಣಕ್ಕೂ ಹಡೀಲು ಬಿಡುವಂತಿಲ್ಲ. ಒಂದೋ ಭೂ ಮಾಲಕರು ಕೃಷಿ ಮಾಡಬೇಕು. ಇಲ್ಲದಿದ್ದರೆ ಕಾನೂನಿನ ಪ್ರಕಾರ ಸರಕಾರವೇ ಹಡೀಲು ಭೂಮಿಯಲ್ಲಿ ಕೃಷಿ ನಡೆಸಲಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಗುರುಪುರ-ಸುರತ್ಕಲ್ ಹೋಬಳಿಯಲ್ಲಿ ಕೆಲವು ವರ್ಷಗಳಿಂದ ಹಡೀಲು ಬಿದ್ದಿರುವ ಕೃಷಿ ಭೂಮಿಯಲ್ಲಿ ಸರಕಾರದ ಕೃಷಿ ನೀತಿ ‘ಹಡೀಲು ಗದ್ದೆಯಲ್ಲಿ ಭತ್ತ ಬೆಳೆಯೋಣ’ ಕಾರ್ಯಕ್ರಮದಡಿ ಗಂಜಿಮಠ ಗ್ರಾಪಂ ಹಾಗೂ ಕೃಷಿ ಇಲಾಖೆಯ ಸಹಯೋಗದಲ್ಲಿ ರೈತರು, ಅಧಿಕಾರಿಗಳು ಮತ್ತು ಜನಪ್ರತಿ ನಿಧಿಗಳೊಂದಿಗೆ ಗುರುವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕೃಷಿಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಭೌಗೋಳಿಕ ಅನುಕೂಲಕ್ಕೆ ತಕ್ಕಂತೆ ಭತ್ತ ಅಥವಾ ಪರ್ಯಾಯ ಬೆಳೆಗೆ ಮುಂದಾಗಬೇಕು. ಹಡೀಲು ಭೂಮಿ ಇತರರಿಗೆ ನೀಡಿದರೆ ಭೂಮಿ ಕೈತಪ್ಪಿ ಹೋಗುವ ಸಾಧ್ಯತೆ ಇದೆ ಎಂಬ ಭೀತಿ ಬೇಡ. ಇನ್ನಾದರೂ ಸರಕಾರದ ಪ್ರಯೋಜನ ಪಡೆದು ಕೃಷಿ ಮಾಡಲು ಭೂಮಾಲಕರಿಗೆ ಅವಕಾಶವಿದೆ. ಇಲ್ಲವಾದಲ್ಲಿ ಗ್ರಾಮ ಮಟ್ಟದಲ್ಲಿ ಸೂಚಿಸಲ್ಪಡುವ ಅಧಿಕೃತರು ಕೃಷಿ ಮಾಡಲಿದ್ದಾರೆ. ಈ ಹಂತದಲ್ಲಿ ಎಲ್ಲ ಲಾಭ-ನಷ್ಟ ಅಧಿಕೃತರಿಗೆ ಮೀಸಲಾಗಿರುತ್ತದೆ. ಲಾಭದಲ್ಲಿ ಹಡೀಲು ಭೂಮಾಲಕರಿಗೆ ಒಂದಂಶ ಸಿಗಲಿದೆ. ಆದರೆ ಇದೊಂದು ಸವಾಲಿನ ಕೆಲಸವಾಗಿದೆ ಎಂದು ಸಚಿವ ಕೋಟ ಅಭಿಪ್ರಾಯಪಟ್ಟರು.

ಭೂಮಾಲಕರ ಮನವೊಲಿಸುವ ಮತ್ತಿತರ ಕಾನೂನಾತ್ಮಕ ಜವಾಬ್ದಾರಿ ಗ್ರಾಪಂ ಪಿಡಿಒ, ವಿಎ, ಕೃಷಿ ಇಲಾಖೆ ಅಧಿಕಾರಿಗಳ ಮೇಲಿದೆ. ಹಡೀಲು ಭೂಮಿಯಲ್ಲಿ ಗರಿಷ್ಠ ಪ್ರಮಾಣದಲ್ಲಿ ಭತ್ತದ ಬೇಸಾಯ ಮಾಡುವ ಮುಂಚೆ ಉಳುಮೆ, ಬೀಜ, ಬಿತ್ತನೆ, ಯಂತ್ರೋಪಕರಣಗಳ ಬಗ್ಗೆ ಖಾತ್ರಿ ಮಾಡಿಕೊಳ್ಳಬೇಕು ಎಂದು ಸಚಿವ ಕೋಟ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ, ಗಂಜಿಮಠ ಗ್ರಾಪಂ ಅಧ್ಯಕ್ಷ ನೋಣಯ್ಯ ಕೋಟ್ಯಾನ್, ಉಪಾಧ್ಯಕ್ಷೆ ಕುಮುದಾ ನಾಕ್, ತಹಶೀಲ್ದಾರ್ ಗುರುಪ್ರಸಾದ್, ದ.ಕ. ಜಂಟಿ ಕೃಷಿ ನಿರ್ದೇಶಕಿ ಸೀತಾ, ಕೃಷಿ ಉಪ ನಿರ್ದೇಶಕ ಭಾನುಪ್ರಕಾಶ್, ಸಹಾಯಕ ಕೃಷಿ ನಿರ್ದೇಶಕಿ (ಎಡಿ) ವೀಣಾ, ರೈತ ಮುಖಂಡ ಮನೋಹರ ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X