ಶಿಲ್ಪಾನಾಗ್ ರಾಜೀನಾಮೆಯನ್ನು ಸರಕಾರ ಅಂಗೀಕಾರ ಮಾಡುವುದಿಲ್ಲ: ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು,ಜೂ.3: ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶಿಲ್ಪಾನಾಗ್ ಅವರು ಅತ್ಯಂತ ದಕ್ಷತೆಯಿಂದ ಪ್ರಾಮಾಣಿಕತೆಯಿಂದ ಮೈಸೂರಿನಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಅವರ ರಾಜೀನಾಮೆಯನ್ನು ಸರಕಾರ ಯಾವ ಕಾರಣಕ್ಕೂ ಅಂಗೀಕಾರ ಮಾಡುವುದಿಲ್ಲ. ಈ ವಿಚಾರವಾಗಿ ಮಾನ್ಯ ಮುಖ್ಯಮಂತ್ರಿಯವರೊಂದಿಗೂ ಮಾತನಾಡುತ್ತೇನೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ.ಟಿ.ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ.
ಈ ಸಂಬಂಧ ಗುರುವಾರ ಮಾಧ್ಯಮ ಹೇಳಿಕೆ ನೀಡಿರುವ ಅವರು, ಶಿಲ್ಪಾ ನಾಗ್ ಅವರು ಸೇವೆಯಲ್ಲಿ ಮುಂದುವರಿಯುವಂತೆ ಮನವೊಲಿಸಲಾಗುವುದು. ಅವರೊಂದಿಗೆ ದೂರವಾಣಿ ಮೂಲಕ ಮಾತನಾಡುತ್ತೇನೆ. ಶುಕ್ರವಾರ ನಾನು ಮೈಸೂರು ಪ್ರವಾಸ ಕೈಗೊಂಡಿದ್ದು, ಆ ವೇಳೆ ಖುದ್ದು ಭೇಟಿಯಾಗಿ ಮಾತನಾಡುತ್ತೇನೆ ಎಂದಿದ್ದಾರೆ.
Next Story





