Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭಾರತವನ್ನು ಅರಿಯದೆ ಸಂವಿಧಾನ ಅರ್ಥ...

ಭಾರತವನ್ನು ಅರಿಯದೆ ಸಂವಿಧಾನ ಅರ್ಥ ಮಾಡಿಕೊಳ್ಳುವುದು ಕಷ್ಟ: ನ್ಯಾ.ನಾಗಮೋಹನ ದಾಸ್

ವಾರ್ತಾಭಾರತಿವಾರ್ತಾಭಾರತಿ3 Jun 2021 10:31 PM IST
share
ಭಾರತವನ್ನು ಅರಿಯದೆ ಸಂವಿಧಾನ ಅರ್ಥ ಮಾಡಿಕೊಳ್ಳುವುದು ಕಷ್ಟ: ನ್ಯಾ.ನಾಗಮೋಹನ ದಾಸ್

ಬೆಂಗಳೂರು, ಜೂ.3: ಭಾರತವನ್ನು ಅರಿಯದೆ ಸಂವಿಧಾನವನ್ನು ಅರ್ಥ ಮಾಡಿಕೊಳ್ಳುವುದು ಕಷ್ಟ. ಸಮಾಜದಲ್ಲಿರುವ ದುರ್ಬಲರು, ಬಡತನದಿಂದ ಬಳಲುತ್ತಿರುವವರು, ಅನಕ್ಷರಸ್ಥರು, ಭೂಹೀನರು, ರೋಗಗ್ರಸ್ತರು, ನಿರುದ್ಯೋಗಿಗಳು, ಹಿಂದುಳಿದ ವರ್ಗದವರನ್ನು ಮುಂದೆ ತಂದು ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುವುದೇ ಸಂವಿಧಾನದ ಬಹುಮುಖ್ಯ ಉದ್ದೇಶವೆಂದು ವಿಶ್ರಾಂತ ನ್ಯಾಯಮೂರ್ತಿ ನಾಗಮೋಹನ ದಾಸ್ ಅಭಿಪ್ರಾಯಿಸಿದ್ದಾರೆ.

ಬೆಂವಿವಿ ರಾಷ್ಟ್ರೀಯ ಸೇವಾ ಯೋಜನೆ ಕೋಶ ವತಿಯಿಂದ ಆಯೋಜಿಸಿದ್ದ ಉಪನ್ಯಾಸ ಮಾಲಿಕೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಾಮಾಜಿಕ ನ್ಯಾಯವನ್ನು ಮಾನವ ಹಕ್ಕುಗಳ ವ್ಯಾಖ್ಯಾನದ ಅಡಿಯಲ್ಲಿ ತಂದು ಹಲವರ ಹಕ್ಕುಗಳನ್ನು ರಕ್ಷಣೆ ಮಾಡಬೇಕಾಗಿದೆ. ಮೀಸಲಾತಿ ಒಂದೇ ಸಾಮಾಜಿಕ ನ್ಯಾಯ ವ್ಯಾಪ್ತಿಯಡಿಯಲ್ಲಿ ಬರುವುದಲ್ಲ ಹಾಗೂ ಸಾಮಾಜಿಕ ನ್ಯಾಯವೆಂದರೆ ಕೇವಲ ಮೀಸಲಾತಿ ಸಿದ್ಧಾಂತಕ್ಕೆ ಒಳಪಡಿಸುವದಲ್ಲವೆಂದು ತಿಳಿಸಿದ್ದಾರೆ.

ಇಂದಿನ ದಿನಗಳಲ್ಲಿ ಮೀಸಲಾತಿ ತನ್ನ ಮಹತ್ವವನ್ನೇ ಕಳೆದುಕೊಂಡಿದೆ. ಸರಕಾರಗಳು ಸಾರ್ವಜನಿಕ ವಲಯಗಳನ್ನು ಖಾಸಗಿ ವಲಯಗಳಾಗಿ ಮಾರ್ಪಡಿಸಿದ ಸಂದರ್ಭದಲ್ಲಿ ಸಾಮಾಜಿಕ ನ್ಯಾಯದ ಗುರಿ ಉದ್ದೇಶಗಳನ್ನ ವಿಫಲ ಮಾಡಿದಂತೆ. ಸರಕಾರ ಸಂಸ್ಥೆಗಳಲ್ಲಿ ಕಾಲಕಾಲಕ್ಕೆ ಆಗಬೇಕಾದ ನೇಮಕಾತಿಗಳನ್ನು ಮುಂದೂಡಿ, ಇಂದಿಗೂ ಒಪ್ಪಂದ ಹಾಗೂ ಹೊರಗುತ್ತಿಗೆಯಲ್ಲಿ ಜನರಿಗೆ ಉದ್ಯೋಗವನ್ನು ನೀಡುತ್ತಿರುವುದು ಸಾಮಾಜಿಕ ನ್ಯಾಯದ ಉದ್ದೇಶಗಳನ್ನು ಬುಡಮೇಲು ಮಾಡಿದಂತಾಗಿದೆ ಎಂದು ಅವರು ತಿಳಿಸಿದ್ದಾರೆ.

ಹಿಂದೆ ರೈತರು ಗ್ರಾಮಗಳಲ್ಲಿ ಜನರಿಗೆ ಉದ್ಯೋಗ ನೀಡುತ್ತಿದ್ದರು. ಆದರೆ ಇಂದಿನ ಸರಕಾರಗಳ ಅವೈಜ್ಞಾನಿಕ ಹಾಗೂ ಅಸಮಂಜಸ ಕೃಷಿ ನೀತಿಗಳಿಂದ ರೈತರು ಕಂಗಾಲಾಗಿ ಮೀಸಲಾತಿಯನ್ನು ಕೇಳುವಂತಾಗಿದೆ. ಆರ್ಥಿಕ ಆಧಾರದ ಮೇಲೆ ಶೇ.10ರಷ್ಟು ಕೊಟ್ಟಿರುವ ಮೀಸಲಾತಿ ಅಸಂವಿಧಾನ ಹಾಗೂ ಇದರ ಬಗ್ಗೆ ಯಾವುದೇ ಆಯೋಗಗಳನ್ನು ರಚಿಸಿದೆ ತರಾತುರಿಯಲ್ಲಿ ಯಾವುದೇ ಚರ್ಚೆಗೆ ಒಳಪಡಿಸದೆ ಸಂವಿಧಾನ ತಿದ್ದುಪಡಿ ಮಾಡಿರುವುದು ನಿಜಕ್ಕೂ ಆತಂಕಕಾರಿ ಎಂದು ಅವರು ವಿಷಾದಿಸಿದರು.

ಈ ವೇಳೆ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವೇಣುಗೋಪಾಲ್. ಕಾರ್ಯಕ್ರಮದಲ್ಲಿ ರಾಜ್ಯ ಎನ್ನೆಸ್ಸೆಸ್ ಅಧಿಕಾರಿ ಪ್ರತಾಪ್ ಲಿಂಗಯ್ಯ, ಸಂಯೋಜನಾಧಿಕಾರಿ ಡಾ. ಎನ್. ಸತೀಶ್ ಗೌಡ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X