ಶಿಲ್ಪಾನಾಗ್ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

ಮೈಸೂರು, ಜೂ.3: ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ತಮ್ಮ ವೈಫಲ್ಯ ಮರೆಮಾಚಲು ತಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆರೋಪಿಸಿದ್ದಾರೆ.
ನಗರಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಆರೋಪಕ್ಕೆ ಪತ್ರಿಕಾ ಹೇಳಿಕೆ ಮೂಲಕ ತಿರುಗೇಟು ನೀಡಿರುವ ಅವರು, ನನ್ನ ಮೇಲೆ ಹೊರಿಸಿರುವ ಆರೋಪಗಳು ಸತ್ಯಕ್ಕೆ ದೂರವಾದುದು. ನಾನು ಯಾರಿಗೂ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಆಯಕ್ತೆ ಶಿಲ್ಪಾನಾಗ್ ಅವರು ಜಿಲ್ಲಾಡಳಿತ ಏನು ಕೆಲಸ ಮಾಡುತ್ತಿಲ್ಲ ಎಂಬ ರೀತಿಯಲ್ಲಿ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದರು. ನಗರದಲ್ಲಿ ಕೋವಿಡ್ ಸೆಂಟರ್ ಪ್ರಾರಂಭಿಸಲು ಜಿಲ್ಲಾಡಳಿತದಿಂದ ನಮಗೆ ನೆರವು ಸಿಗುತ್ತಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಈ ಮೂಲಕ ಮಾಧ್ಯಮಗಳಿಗೆ ತಪ್ಪು ಮಾಹಿತಿ ನೀಡಿದ್ದಾರೆ. ತಮ್ಮ ವೈಫಲ್ಯವನ್ನು ಜಿಲ್ಲಾಡಳಿತದ ಮೇಲೆ ಹೊರಿಸಲು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.
Next Story





