ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ರಾಜೀನಾಮೆ ಪತ್ರ ನನಗೆ ತಲುಪಿಲ್ಲ: ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್

ಮೈಸೂರು, ಜೂ.4: ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ರಾಜೀನಾಮೆ ಪತ್ರ ನನಗೆ ತಲುಪಿಲ್ಲ ಎಂದು ಸರಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ತಿಳಿಸಿದರು.
ನಗರದ ಎಟಿಐ ಆವರಣದಲ್ಲಿ ಶುಕ್ರವಾರ ಕೋವಿಡ್ ನಿಯಂತ್ರಣ ಸಂಬಂಧ ಸಭೆಗೂ ಮುನ್ನ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಹಲವು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಶಿಲ್ಪಾನಾಗ್ ರಾಜೀನಾಮೆ ವಿಚಾರ ನನಗೆ ಗೊತ್ತಿಲ್ಲ. ಅದು ನನಗೆ ತಲುಪಿಲ್ಲ. ನಾನು ಬಂದಿರುವುದು ಕೊರೋನ ನಿಯಂತ್ರಣ ಕುರಿತು ಕೈಗೊಳ್ಳಲಾಗಿರುವ ಮಾಹಿತಿ ಪಡೆಯಲು ಎಂದು ಹೇಳಿದರು.
Next Story





