ಶಾಸಕ ವೇದವ್ಯಾಸ ಕಾಮತ್ ಗೆ ಕೊರೋನ ಪಾಸಿಟಿವ್

ಮಂಗಳೂರು, ಜೂ.4: ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರಿಗೆ ಕೊರೋನ ಸೋಂಕು ಪಾಸಿಟಿವ್ ಆಗಿದೆ.
ಶುಕ್ರವಾರ ಈ ಬಗ್ಗೆ ಟ್ವೀಟ್ ಮಾಡಿದ ಅವರು ‘ನನಗೆ ಸ್ವಲ್ಪ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆಗೊಳಪಟ್ಟಿದ್ದೆ. ನನಗೆ ಕೋವಿಡ್ ದೃಢಪಟ್ಟಿದ್ದು, ಪಾಸಿಟಿವ್ ಆಗಿರುತ್ತದೆ. ನಾನು ಹೋಂ ಐಸೋಲೇಶನ್ ಆಗಿದ್ದೇನೆ ಮತ್ತು ಆರೋಗ್ಯವಾಗಿದ್ದೇನೆ. ಸಾರ್ವಜನಿಕರೂ ಆರೋಗ್ಯದ ಕಡೆ ಗಮನ ಹರಿಸಿ, ಕೋವಿಡ್ ವಿರುದ್ಧದ ಹೋರಾಟದಲ್ಲಿ ಅಂತಿಮ ಗೆಲುವು ನಮ್ಮದೇ ಆಗಲಿದೆ’ ಎಂದು ತಿಳಿಸಿದ್ದಾರೆ.

Next Story





