Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಶಿಕ್ಷಣ, ಆರೋಗ್ಯ ಕ್ಷೇತ್ರದ...

ರಾಜ್ಯದಲ್ಲಿ ಶಿಕ್ಷಣ, ಆರೋಗ್ಯ ಕ್ಷೇತ್ರದ ಬಲವರ್ಧನೆಗೆ ಕ್ರಮ: ಮುಖ್ಯಮಂತ್ರಿ ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ4 Jun 2021 8:34 PM IST
share
ರಾಜ್ಯದಲ್ಲಿ ಶಿಕ್ಷಣ, ಆರೋಗ್ಯ ಕ್ಷೇತ್ರದ ಬಲವರ್ಧನೆಗೆ ಕ್ರಮ: ಮುಖ್ಯಮಂತ್ರಿ ಯಡಿಯೂರಪ್ಪ

ಬೆಳಗಾವಿ, ಜೂ. 4: ಕೋವಿಡ್ ಸಮರ್ಪಕ ನಿರ್ವಹಣೆ ಆಕ್ಸಿಜೆನ್, ಲಸಿಕೆ ಪೂರೈಕೆಗೆ ಸರಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳ ಬಲವರ್ಧನೆಗೆ ಹೆಚ್ಚಿನ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಅಭಯ ನೀಡಿದ್ದಾರೆ.

ಶುಕ್ರವಾರ ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಕೋವಿಡ್ ನಿರ್ವಹಣೆ ಮತ್ತು ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆಗಳನ್ನು ಒದಗಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆಯ ಸಚಿವರ ಜತೆ ಚರ್ಚಿಸಿ ಸೂಚನೆ ನೀಡಲಾಗಿದೆ. ಕೋವಿಡ್ ನಿರ್ವಹಣೆ ಸೇರಿದಂತೆ ಜಿಲ್ಲೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಶಾಸಕರು ಜಿಲ್ಲೆಯ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಚರ್ಚಿಸಿ ಸ್ಥಳೀಯವಾಗಿ ಬಗೆಹರಿಸಿಕೊಳ್ಳುವುದು ಪರಿಣಾಮಕಾರಿಯಾಗಲಿದೆ. ಆದುದರಿಂದ ಏನೇ ಅಹವಾಲು ಅಥವಾ ಸಮಸ್ಯೆಗಳು ಇದ್ದರೆ ಉಸ್ತುವಾರಿ ಸಚಿವರ ಜತೆ ಚರ್ಚಿಸಬೇಕು ಎಂದು ಹೇಳಿದರು.

ಮನೆಹಾನಿ: ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ್ದು, ಅಧಿಕಾರಿಗಳು ಮುನ್ನಚ್ಚರಿಕೆ ವಹಿಸಬೇಕು. ಕಳೆದ ಬಾರಿ ಉಂಟಾದ ಪ್ರವಾಹ ಸಂದರ್ಭದಲ್ಲಿ ಹಾನಿಗೊಳಗಾದ ಮನೆಗಳ ನಿರ್ಮಾಣಕ್ಕೆ ಬಿಡುಗಡೆಯಾದ ಹಣ ಬಳಸಿಕೊಂಡು ಸರ್ಟಿಫಿಕೇಟ್ ನೀಡಿದರೆ 24 ಗಂಟೆಗಳಲ್ಲಿ ನಂತರದ ಕಂತು ಬಿಡುಗಡೆ ಮಾಡಲಾಗುವುದು ಎಂದು ಯಡಿಯೂರಪ್ಪ ಇದೇ ವೇಳೆ ಭರವಸೆಯನ್ನು ನೀಡಿದರು.

ಬಿಮ್ಸ್ ಗೆ ಆಡಳಿತಾಧಿಕಾರಿ ನೇಮಕ: ಕೋವಿಡ್ ಸೋಂಕಿತರಿಗೆ ಸಮರ್ಪಕ ಚಿಕಿತ್ಸೆ ಒದಗಿಸುವುದು ಸೇರಿದಂತೆ ಆಡಳಿತಾತ್ಮಕ ಸುಧಾರಣೆಗೆ ಅನುಕೂಲವಾಗುವಂತೆ ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರನ್ನು ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಡಳಿತಾಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂದು ಯಡಿಯೂರಪ್ಪ ಸಭೆಯಲ್ಲಿ ಪ್ರಕಟಿಸಿದರು.

ಬೆಳಗಾವಿಗೆ 144 ವೈದ್ಯರ ನೇಮಕಾತಿ: ಜಿಲ್ಲೆಗೆ ಏಳು ಆಕ್ಸಿಜನ್ ಘಟಕಗಳನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ಮಂಜೂರು ಮಾಡಿರುತ್ತಾರೆ. ಆದಷ್ಟು ಬೇಗನೇ ಈ ಘಟಕಗಳು ಕಾರ್ಯಾರಂಭಿಸಲಿವೆ. ಜಿಲ್ಲೆಗೆ ಒಟ್ಟು 144 ವೈದ್ಯರನ್ನು ನೇಮಿಸಲಾಗಿದೆ. ಇದರಲ್ಲಿ 54 ಜನ ತಜ್ಞರನ್ನು ನಿಯೋಜಿಸಲಾಗಿದೆ. ದೇಶದಲ್ಲಿ ಅತಿಹೆಚ್ಚು ಕೋವಿಡ್ ಪರೀಕ್ಷೆಯನ್ನು ರಾಜ್ಯದಲ್ಲಿ ಮಾಡಲಾಗುತ್ತಿದ್ದು, ಇದುವರೆಗೆ 3 ಕೋಟಿ ಮಾದರಿ ಪರೀಕ್ಷೆ ಮಾಡಲಾಗಿದೆ. ರಾಜ್ಯಕ್ಕೆ ಜೂನ್ ಅಂತ್ಯದ ವೇಳೆಗೆ 58 ಲಕ್ಷ ಲಸಿಕೆಗಳು ಪೂರೈಕೆಯಾಗಲಿವೆ. ಆಗ ಲಸಿಕೆ ಕೊರತೆಯ ಸಮಸ್ಯೆ ಪರಿಹಾರಗೊಳ್ಳಲಿದೆ ಎಂದು ಸಚಿವ ಡಾ.ಸುಧಾಕರ್ ಹೇಳಿದರು.

ಸಭೆಯಲ್ಲಿ ಶಾಸಕರಾದ ಸತೀಶ್ ಜಾರಕಿಹೊಳಿ, ಮಹೇಶ್ ಕುಮಠಳ್ಳಿ, ಪಿ.ರಾಜೀವ್, ಗಣೇಶ್ ಹುಕ್ಕೇರಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಸಂಸದೆ ಮಂಗಳಾ ಅಂಗಡಿ, ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X