ದ.ಕ. ಜಿಲ್ಲೆ : ಕೋವಿಡ್‌ಗೆ 9 ಬಲಿ; 806 ಮಂದಿಗೆ ಕೊರೋನ ಪಾಸಿಟಿವ್

ಮಂಗಳೂರು, ಜೂ. 4: ದ.ಕ. ಜಿಲ್ಲೆಯಲ್ಲಿ ಶುಕ್ರವಾರ 9 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 937ಕ್ಕೇರಿದೆ.
ಅಲ್ಲದೆ ಶುಕ್ರವಾರ ಜಿಲ್ಲೆಯಲ್ಲಿ 806 ಮಂದಿಗೆ ಕೊರೋನ ಸೋಂಕು ದೃಢಪಡುವುದರೊಂದಿಗೆ ಈವರೆಗೆ ಕೊರೋನ ಸೋಂಕಿಗೊಳಗಾದವರ ಸಂಖ್ಯೆ 78,757ಕ್ಕೇರಿದೆ.
ಶುಕ್ರವಾರ 858 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅದರಂತೆ ಈವರೆಗೆ ಗುಣಮುಖ ರಾದವರ ಸಂಖ್ಯೆ 69,914ಕ್ಕೇರಿದೆ. ಸದ್ಯ ಜಿಲ್ಲೆಯಲ್ಲಿ 7,906 ಸಕ್ರಿಯ ಪ್ರಕರಣವಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಈವರಗೆ 8,63,879 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 7,85,122 ಮಂದಿಯ ವರದಿ ನೆಗೆಟಿವ್ ಬಂದಿದೆ.
ದಂಡ ವಸೂಲಿ: ಮಾಸ್ಕ್ ನಿಯಮ ಉಲ್ಲಂಘಿಸಿದ 60,898 ಮಂದಿಯಿಂದ 71,72,917 ರೂ. ದಂಡ ವಸೂಲು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದ.ಕ. ಜಿಲ್ಲೆಗೆ 13,000 ಡೋಸ್ ಲಸಿಕೆ ಪೂರೈಕೆ
ದ.ಕ.ಜಿಲ್ಲೆಗೆ ಕೋವ್ಯಾಕ್ಸಿನ್ 13,000 ಡೋಸ್ ಲಸಿಕೆಯು ಪೂರೈಕೆಯಾಗಿದೆ. ಹಾಗಾಗಿ ಜೂ.6ರ ರವಿವಾರದಿಂದ ಪ್ರತೀ ದಿನ ವೆನ್ಲಾಕ್ ಮತ್ತು ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಲಸಿಕಾ ಶಿಬಿರ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಇಲಾಖಾಧಿಕಾರಿಗಳು ತಿಳಿಸಿದ್ದಾರೆ.
ಮೊದಲನೆ ಡೋಸ್ ಪಡೆದುಕೊಂಡು 4ರಿಂದ 6 ವಾರ ಪೂರ್ಣಗೊಳಿಸಿದ ಅರ್ಹ ಫಲಾನುಭವಿಗಳು 2ನೆ ಡೋಸನ್ನು ಯಾವುದೇ ಕೇಂದ್ರದಲ್ಲಿ ಯಾವುದೇ ದಿನದಂದು ಬೆಳಗ್ಗೆ 9ರಿಂದ ಸಂಜೆ 4ರೊಳಗೆ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.







