Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಕೆಎಸ್‌ಆರ್‌ಟಿಸಿ' ಟ್ರೇಡ್ ಮಾರ್ಕ್...

'ಕೆಎಸ್‌ಆರ್‌ಟಿಸಿ' ಟ್ರೇಡ್ ಮಾರ್ಕ್ ಬಗ್ಗೆ ಕಾನೂನು ಹೋರಾಟ ಮುಕ್ತಾಯವಾಗಿಲ್ಲ: ಶಿವಯೋಗಿ ಕಳಸದ

ವಾರ್ತಾಭಾರತಿವಾರ್ತಾಭಾರತಿ4 Jun 2021 9:55 PM IST
share
ಕೆಎಸ್‌ಆರ್‌ಟಿಸಿ ಟ್ರೇಡ್ ಮಾರ್ಕ್ ಬಗ್ಗೆ ಕಾನೂನು ಹೋರಾಟ ಮುಕ್ತಾಯವಾಗಿಲ್ಲ: ಶಿವಯೋಗಿ ಕಳಸದ

ಬೆಂಗಳೂರು, ಜೂ.4: ಕರ್ನಾಟಕ ಹಾಗೂ ಕೇರಳ ನಡುವೆ ಕೆಎಸ್‌ಆರ್‌ಟಿಸಿ ಪದ ಬಳಕೆಗೆ ಸಂಬಂಧಿಸಿದಂತೆ ಕರ್ನಾಟಕ ಹಾಗೂ ಕೇರಳ ನಡುವೆ ನಡೆಯುತ್ತಿರುವ ಕಾನೂನು ಹೋರಾಟ ಮುಕ್ತಾಯವಾಗಿಲ್ಲವೆಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೆಎಸ್‌ಆರ್‌ಟಿಸಿ ಪದ ಕುರಿತು ಎರಡು ರಾಜ್ಯಗಳ ನಡುವಿನ ಒಂದು ದಶಕದ ಕಾನೂನಾತ್ಮಕ ಹೋರಾಟವು ಅಂತ್ಯಗೊಂಡಿದ್ದು, ಬುಧವಾರ ತನ್ನ ಅಂತಿಮ ತೀರ್ಪನ್ನು ಪ್ರಕಟಿಸಿದೆ ಎಂಬ ಮಾಧ್ಯಮಗಳ ವರದಿಯನ್ನು ನೋಡಿ ಆಶ್ಚರ್ಯವಾಗಿದೆ. ಇದು ಸತ್ಯಕ್ಕೆ ದೂರವಾದ ವರದಿಯಾಗಿದೆ ಎಂದು ತಿಳಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಸಂಸ್ಥೆಯು ಕೇಂದ್ರ ಟ್ರೇಡ್ ಮಾರ್ಕ್ ರಿಜಿಸ್ಟರಿ ಅವರಿಂದ ಇಂತಹ ಯಾವುದೇ ಸೂಚನೆ ಅಥವಾ ಆದೇಶವನ್ನು ಇಂದಿನವರೆಗೂ ಸ್ವೀಕರಿಸಿರುವುದಿಲ್ಲ. ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ನೀಡಲಾದ ಟ್ರೇಡ್ ಮಾರ್ಕ್ ಪ್ರಮಾಣಪತ್ರದ ವಿರುದ್ಧ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿ(ಐಪಿಎಬಿ)ಯ ಮುಂದೆ ಸಲ್ಲಿಸಿದ ಮೇಲ್ಮನವಿಗಳಲ್ಲಿ ಯಾವುದೇ ಅಂತಿಮ ಆದೇಶಗಳನ್ನು ಸಹ ಹೊರಡಿಸಲಾಗಿಲ್ಲವೆಂದು ಅವರು ಸ್ಪಷ್ಟಪಡಿಸಿದ್ದಾರೆ.

ಸದರಿ ಮಂಡಳಿಯನ್ನು ಎ.4, 2021 ರ ಕೇಂದ್ರ ಸರಕಾರದ ಸುಗ್ರೀವಾಜ್ಞೆಯ ಮೂಲಕ ರದ್ದುಪಡಿಸಲಾಗಿದೆ.ಮತ್ತು ಇಲ್ಲಿ ಬಾಕಿ ಇರುವ ಅರ್ಜಿಗಳನ್ನು ಹೈಕೋರ್ಟ್‍ಗೆ ವರ್ಗಾಯಿಸಲಾಗುತ್ತದೆ. ಆದ್ದರಿಂದ, ಕೆಎಸ್‌ಆರ್‌ಟಿಸಿ ಟ್ರೇಡ್ ಮಾರ್ಕ್ ನೋಂದಣಿಯು ಪ್ರಸ್ತುತ ಜಾರಿಯಲ್ಲಿದೆ ಮತ್ತು ಕೆಎಸ್‌ಆರ್‌ಟಿಸಿ ತನಗೆ ನೀಡಲಾಗಿರುವ ಟ್ರೇಡ್‍ಮಾರ್ಕ್‍ಗಳನ್ನು ಬಳಸಲಾಗುವುದಿಲ್ಲ ಎಂಬ ಸುದ್ದಿ-ವರದಿಗಳು ಸತ್ಯಕ್ಕೆ ದೂರವಾಗಿದೆ ಮತ್ತು ಇದನ್ನು ಕಾನೂನಾತ್ಮಕವಾಗಿ ಒಪ್ಪಲಾಗದು. ಆದ್ದರಿಂದ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ‘ಕೆಎಸ್‌ಆರ್‌ಟಿಸಿ’ ಟ್ರೇಡ್‍ಮಾರ್ಕ್ ಬಳಕೆ ಮಾಡುವ ವಿರುದ್ಧವಾಗಿ ಯಾವುದೇ ಆದೇಶ ಮತ್ತು ನಿಷೇಧವಿರುವುದಿಲ್ಲವೆಂದು ಅವರು ಹೇಳಿದ್ದಾರೆ.

ಕೇರಳ ಎಸ್‍ಆರ್‍ಟಿಸಿಯು ಕರ್ನಾಟಕ ಸರಕಾರಕ್ಕೆ ನೋಟಿಸ್ ನೀಡಲು ಉದ್ದೇಶಿಸಿದೆ ಎಂದು ಮಾಧ್ಯಮಗಳಲ್ಲಿನ ಸುದ್ದಿ ಪ್ರಕಟವಾಗಿದೆ. ಒಂದು ವೇಳೆ ಅಂತಹ ನೋಟಿಸ್ ನೀಡಿದರೆ, ಸಂಸ್ಥೆಯಿಂದ ಸೂಕ್ತವಾದ ಉತ್ತರವನ್ನು ನೀಡಲಾಗುತ್ತದೆ. ನಮ್ಮ ಹಕ್ಕುಗಳನ್ನು ರಕ್ಷಿಸಲು ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ನಾವು ಪ್ರಸ್ತುತ ನಮ್ಮ ವಕೀಲರನ್ನು ಸಂಪರ್ಕಿಸುತ್ತಿದ್ದೇವೆಂದು ಅವರು ಸ್ಪಷ್ಟಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X