ಶನಿವಾರ ದೇಶಾದ್ಯಂತ ಬಿಜೆಪಿ ಸಂಸದರು, ಶಾಸಕರ ಮನೆಗಳ ಮುಂದೆ ರೈತರ ಪ್ರತಿಭಟನೆ

ಸಾಂದರ್ಭಿಕ ಚಿತ್ರ
ಘಾಝಿಯಾಬಾದ್,ಜೂ.4: ಕೇಂದ್ರದ ನೂತನ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಶನಿವಾರ ದೇಶಾದ್ಯಂತ ಬಿಜೆಪಿ ಸಂಸದರು ಮತ್ತು ಶಾಸಕರ ಮನೆಗಳ ಮುಂದೆ ಪ್ರದರ್ಶನ ನಡೆಸಲಿದ್ದಾರೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು)ನ ಮಾಧ್ಯಮ ಉಸ್ತುವಾರಿ ಧರ್ಮೇಂದ್ರ ಮಲಿಕ್ ಅವರು ಶುಕ್ರವಾರ ಇಲ್ಲಿ ತಿಳಿಸಿದರು.
ಕೇಂದ್ರವು ಕೃಷಿ ಕಾಯ್ದೆಗಳನ್ನು ಅಧ್ಯಾದೇಶಗಳನ್ನಾಗಿ ಘೋಷಿಸಿ ಒಂದು ವರ್ಷವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಸಂಸದರು ಮತ್ತು ಶಾಸಕರ ಮನೆಗಳ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಕೇಂದ್ರದ ವಿರುದ್ಧ ಸಾಂಕೇತಿಕ ಪ್ರತಿಭಟನೆಯಾಗಿ ಕೃಷಿ ಕಾಯ್ದೆಗಳ ಪ್ರತಿಗಳನ್ನು ಸುಡಲಿದ್ದಾರೆ . ಬಿಜೆಪಿ ಸಂಸದರು ಮತ್ತು ಶಾಸಕರಿಲ್ಲದ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದರು.
Next Story





