Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಸಂಘಟಿತ ಕಾರ್ಮಿಕರಿಗೆ ಸರಕಾರದಿಂದ...

ಅಸಂಘಟಿತ ಕಾರ್ಮಿಕರಿಗೆ ಸರಕಾರದಿಂದ ಪರಿಹಾರ ಧನ : ದ.ಕ. ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ4 Jun 2021 10:43 PM IST
share
ಅಸಂಘಟಿತ ಕಾರ್ಮಿಕರಿಗೆ ಸರಕಾರದಿಂದ ಪರಿಹಾರ ಧನ : ದ.ಕ. ಜಿಲ್ಲಾಧಿಕಾರಿ

ಮಂಗಳೂರು, ಜೂ.4:ಕೊರೋನ-ಲಾಕ್‌ಡೌನ್ ಹಿನ್ನೆಲೆಯಲ್ಲಿ ಸಮಸ್ಯೆಗೊಳಗಾಗಿರುವ ಜಿಲ್ಲೆಯ ಅಸಂಘಟಿತ ವಲಯದ ಕಾರ್ಮಿಕರಿಗೆ ತಲಾ 2,000 ರೂ. ಪರಿಹಾರ ಧನವನ್ನು ರಾಜ್ಯ ಸರಕಾರ ನೀಡಲಿದೆ ಎಂದು ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ದ.ಕ. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಅಸಂಘಟಿತ ವಲಯದ ಕಾರ್ಮಿಕರಿಗೆ ಪರಿಹಾರ ನೀಡುವ ಕುರಿತು ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಕೊರೋನ ಕರ್ಫ್ಯೂನಿಂದ ಉದ್ಯೋಗ ಕಳೆದುಕೊಂಡು ಆರ್ಥಿಕವಾಗಿ ಸಂಕಷ್ಟಕ್ಕೊಳಗಾದ ಅಸಂಘಟಿತ ಕಾರ್ಮಿಕರಾದ 18 ರಿಂದ 65 ವರ್ಷ ಪ್ರಾಯದೊಳಗಿನ ಕ್ಷೌರಿಕ, ಅಗಸ, ಟೈಲರ್, ಅಕ್ಕಸಾಲಿಗ, ಕಮ್ಮಾರರು, ಕುಂಬಾರರು, ಗೃಹಕಾರ್ಮಿಕರು, ಚಿಂದಿ ಆಯುವವರು, ಹಮಾಲಿ, ವೃತ್ತಿಯನ್ನು ನಿರ್ವಹಿಸುತ್ತಿರುವವರು ಒಂದು ಬಾರಿ ಪರಿಹಾರ ಪಡೆಯಲು ಸೇವಾ ಸಿಂಧುಗಳ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ.

ಫಲಾನುಭವಿಗಳು ತಾವು ಕೆಲಸ ನಿರ್ವಹಿಸುತ್ತಿರುವ ವ್ಯಾಪ್ತಿಯ ಸೇವಾಸಿಂಧು ಕೇಂದ್ರದ ಸೇವಾಸಿಂಧು ಪೋರ್ಟಲ್‌ನಲ್ಲಿ ನಿಗದಿತ ಅರ್ಜಿಯಲ್ಲಿ ಮಾಹಿತಿ ಭರ್ತಿ ಮಾಡಿ, ಬ್ಯಾಂಕ್ ಖಾತೆಯೊಂದಿಗೆ ಜೋಡಣೆಯಾಗಿರುವ ಆಧಾರ್‌ಕಾರ್ಡ್, ವಿಳಾಸ ದೃಢೀಕರಣದ ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ, ಮೊಬೈಲ್ ಸಂಖ್ಯೆ, ಸ್ವಯಂಘೋಷಣಾ ಪತ್ರ, ಉದ್ಯೋಗ ಪ್ರಮಾಣ ಪತ್ರ ಹಾಗೂ ತಮ್ಮ ಛಾಯಾಚಿತ್ರವನ್ನು ಅಪ್‌ಲೋಡ್ ಮಾಡಬೇಕು ಎಂದರು.

ಕ್ಷೌರಿಕ, ಅಗಸ ವೃತ್ತಿಯನ್ನು ನಿರ್ವಹಿಸುತ್ತಿರುವ ಕುರಿತು ಉದ್ಯೋಗ ಪ್ರಮಾಣ ಪತ್ರ, ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಯ ಕಂದಾಯ ಅಧಿಕಾರಿ, ಕಂದಾಯ ನಿರೀಕ್ಷಕರು ಹಾಗೂ ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರರು, ಉಪ ತಹಸೀಲ್ದಾರರು, ಕಂದಾಯ ನಿರೀಕ್ಷಕರು, ಕಂದಾಯ ಅಧಿಕಾರಿಗಳು, ಗ್ರಾಪಂ ವ್ಯಾಪ್ತಿಯಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ. ಕಾರ್ಮಿಕ ಇಲಾಖೆಯ ನಿರೀಕ್ಷಕರು, ಕಾರ್ಮಿಕ ಇಲಾಖೆಯ ಅಧಿಕಾರಿಗಳು, ಸಹಾಯಕ ಕಾರ್ಮಿಕ ಆಯುಕ್ತರು ಅಥವಾ ಯಾವುದಾದರೊಂದು ಅಧಿಕಾರಿಯಿಂದ ದೃಢೀಕರಿಸಿ ಮೂಲ ಪ್ರತಿಯನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಬೇಕು. ಒಂದು ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಜನರು ವೃತ್ತಿಯಲ್ಲಿ ತೊಡಗಿದ್ದಲ್ಲಿ ಒಬ್ಬರು ಮಾತ್ರ ಪರಿಹಾರ ಧನವನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದರು.

ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆಯಡಿ ನೋಂದಣಿಗೊಂಡ 86,000 ಕಟ್ಟಡ ಕಾರ್ಮಿಕರು ಮತ್ತು 7,597 ಅಸಂಘಟಿತ ಕಾರ್ಮಿಕರಿದ್ದಾರೆ. ಕಟ್ಟಡ ಕಾರ್ಮಿಕರು ಕಾರ್ಮಿಕ ಕಾರ್ಡ್ ಹೊಂದಿದಲ್ಲಿ ಮತ್ತೊಮ್ಮೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿ ಮಾಡುವ ಅಗತ್ಯತೆ ಇರುವುದಿಲ್ಲ. ಅವರ ಖಾತೆಗೆ ನೇರವಾಗಿ ಹಣ ಜಮೆಯಾಗಲಿದೆ. ಕಳೆದ ಬಾರಿ ಅಗಸರು ಹಾಗೂ ಕ್ಷೌರಿಕರಿರಲ್ಲಿ ನೋಂದಣಿ ಮಾಡಿ ಖಾತೆಗೆ ಹಣ ಜಮೆಯಾಗ ದವರೂ ಸಹ ಈ ಬಾರಿ ಇನ್ನೊಮ್ಮೆ ಸೇವಾ ಸಿಂಧು ಮೂಲಕ ನೋಂದಣಿ ಮಾಡಲು ಅವಕಾಶವಿರುತ್ತದೆ. ಹೊರರಾಜ್ಯದಿಂದ ಜಿಲ್ಲೆಗೆ ಬಂದು ಇಲ್ಲೇ ನೆಲೆಸಿ ಕಾರ್ಮಿಕರಾಗಿದ್ದುಕೊಂಡು ಇಲ್ಲಿನ ಬಿಪಿಎಲ್ ಕಾರ್ಡ್ ಹೊಂದಿದವರೂ ಕೂಡ ಇದರ ಲಾಭ ಪಡೆಯಬಹುದಾಗಿದೆ ಎಂದರು.

ಸಭೆಯಲ್ಲಿ ದ.ಕ.ಜಿಪಂ ಸಿಇಒ ಡಾ.ಕುಮಾರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್, ಕಾರ್ಮಿಕ ಅಧಿಕಾರಿ ವಿಲ್ಮಾ ಮತ್ತು ವಿವಿಧ ಕಾರ್ಮಿಕ ಸಂಘದ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X