Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಸಾರಿಗೆ ಸುರಕ್ಷಾ' ಬಸ್ ಆ್ಯಂಬುಲೆನ್ಸ್...

'ಸಾರಿಗೆ ಸುರಕ್ಷಾ' ಬಸ್ ಆ್ಯಂಬುಲೆನ್ಸ್ ಲೋಕಾರ್ಪಣೆ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ4 Jun 2021 11:16 PM IST
share
ಸಾರಿಗೆ ಸುರಕ್ಷಾ ಬಸ್ ಆ್ಯಂಬುಲೆನ್ಸ್ ಲೋಕಾರ್ಪಣೆ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ

ಬೆಳಗಾವಿ, ಜೂ. 4: `ಸಾರಿಗೆ ಸುರಕ್ಷಾ' ಎಂಬ ಹೆಸರಿನ ಸಂಚಾರಿ ಐಸಿಯು ಆ್ಯಂಬುಲೆನ್ಸ್‍ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಶುಕ್ರವಾರ ಇಲ್ಲಿನ ಸುವರ್ಣ ವಿಧಾನಸೌಧ ಆವರಣದಲ್ಲಿ ಲೋಕಾರ್ಪಣೆ ಮಾಡಿದರು.

ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದ 2ನೆ ಅಲೆಯು ಹರಡುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ವಾಕರಸಾ ಸಂಸ್ಥೆಯು `ಸಾರಿಗೆ ಸುರಕ್ಷಾ' ಹೆಸರಿನ ಆ್ಯಂಬುಲೆನ್ಸ್ ಪ್ರಾರಂಭಿಸಿದೆ. ಈ ಆ್ಯಂಬುಲೆನ್ಸ್ ನಿರ್ಮಾಣಕ್ಕೆ ಒಟ್ಟು ರೂ. 7.88ಲಕ್ಷ ರೂ. ವೆಚ್ಚ ತಗುಲಿದ್ದು, ಹುಬ್ಬಳ್ಳಿಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಾದೇಶಿಕ ಕಾರ್ಯಾಗಾರದಲ್ಲಿ ನಿರ್ಮಿಸಲಾಗಿದೆ.

ಆ್ಯಂಬುಲೆನ್ಸ್ ನಲ್ಲಿ ವಿಶೇಷ ಚಿಕಿತ್ಸಾ ವ್ಯವಸ್ಥೆಗಳು: `ಸಾರಿಗೆ ಸುರಕ್ಷಾ' ವಾಹನದಲ್ಲಿ ನಾಲ್ಕು ಹಾಸಿಗೆಗಳಿದ್ದು, ಐಸಿಯು ಸೌಲಭ್ಯ ಹೊಂದಿವೆ. ಪ್ರತಿಯೊಂದು ಬೆಡ್‍ಗೂ ಆಕ್ಸಿಜನ್ ವ್ಯವಸ್ಥೆ ಕೈಗೊಳ್ಳಲಾಗಿದೆ. ಪ್ರತಿ ಬೆಡ್ ಹಾಗೂ ಕಿಟಕಿಗಳಿಗೆ ಕರ್ಟನ್ ಅಳವಡಿಸಲಾಗಿದೆ. ಅಲ್ಲದೆ, ವಾಹನದಲ್ಲಿರುವ ಪ್ರತಿಯೊಂದು ಬೆಡ್‍ಗಳಿಗೆ ಹಾಗೂ ವಾಹನದೊಳಗೆ ಬೆಳಕಿನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ವಾಹನದಲ್ಲಿರುವ 4 ಬೆಡ್‍ಗಳಿಗೂ ಫ್ಯಾನ್ ಅಳವಡಿಸಲಾಗಿದೆ.

ಪ್ರತಿ ಬೆಡ್‍ಗಳ ನಡುವೆ ಔಷಧಿ/ವಸ್ತುಗಳ ಸ್ಟೋರ್ ಸ್ಟಾಂಡ್ ಅಳವಡಿಸಲಾಗಿದ್ದು, ಐವಿ ವ್ಯವಸ್ಥೆ, ತುರ್ತು ಔಷಧಿ ವ್ಯವಸ್ಥೆ ಹಾಗೂ ಥರ್ಮಾಮೀಟರ್ ಮತ್ತು ಆಕ್ಸಿಮೀಟರ್ ಒದಗಿಸಲಾಗಿದೆ. ಡ್ಯೂಟಿ ಡಾಕ್ಟರ್/ನರ್ಸ್‍ಗಳಿಗೆ ಪ್ರತ್ಯೇಕ ಕೌಂಟರ್ ಮತ್ತು ಪ್ಯಾನ್ ಅಳವಡಿಸಿರುವುದು ಈ ವಾಹನದ ವಿಶೇಷವಾಗಿದೆ.

ಅನುಪಯುಕ್ತ ವಾಹನ ಬಳಸಿ ಸ್ತ್ರೀ ಶೌಚಾಲಯ ನಿರ್ಮಾಣ: ಮಹಿಳಾ ಸ್ವಾಸ್ತ ಸಮಾಜದ ನಿರ್ಮಾಣಕ್ಕಾಗಿ ವಾ.ಕ.ರ.ಸಾ. ಸಂಸ್ಥೆಯು ಹುಬ್ಬಳ್ಳಿಯ ಪ್ರಾದೇಶಿಕ ಕಾರ್ಯಾಗಾರದಲ್ಲಿ ಅನುಪಯುಕ್ತ ವಾಹನವನ್ನು 'ಸ್ತ್ರೀ ಶೌಚಾಲಯ'ವನ್ನಾಗಿ ಪರಿವರ್ತಿಸಿದೆ.

ಈ ಶೌಚಾಲಯದ ನಿರ್ಮಾಣಕ್ಕೆ ಒಟ್ಟು 8.13 ಲಕ್ಷ ರೂ. ವೆಚ್ಚ ತಗುಲಿದೆ. ವಾಹನದ ಒಳ ಹೋಗುವ ಸ್ಟೆಪ್‍ನ ಬಲಭಾಗದಲ್ಲಿ ಮಗುವಿಗೆ ಡೈಪರ್ ಬದಲಾಯಿಸುವ ಸಲುವಾಗಿ ಮಗು ಆರೈಕೆ ವ್ಯವಸ್ಥೆಯ ಕೊಠಡಿ ಕಲ್ಪಿಸಲಾಗಿದೆ ಹಾಗೂ ಮಗುವಿಗೆ ಹಾಲುಣಿಸುವ ಸಲುವಾಗಿ ಪ್ರತ್ಯೇಕ ಕೊಠಡಿಯನ್ನು ನಿರ್ಮಿಸಲಾಗಿದೆ.

ಈ ವಾಹನದಲ್ಲಿ 4 ಶೌಚಾಲಯಗಳಿದ್ದು, 2 ಶೌಚಾಲಯ ಇಂಡಿಯನ್ ಮಾದರಿ ಹಾಗೂ 2 ಶೌಚಾಲಯ ವೆಸ್ಟರ್ನ್ ಮಾದರಿಯಲ್ಲಿ ಇವೆ ಹಾಗೂ ಕೈ ತೊಳೆಯುವ ಸಲುವಾಗಿ ನೀರಿನ ನಳಗಳನ್ನು ಒಳಗೊಂಡಿರುವ 2 ಸಿಂಕ್‍ಗಳನ್ನು ಅಳವಡಿಸಲಾಗಿದೆ. ವಿದ್ಯುತ್ ವ್ಯವಸ್ಥೆಗಾಗಿ 3.5 ಕೆವಿಎ ಸಾಮಥ್ರ್ಯದ ಯುಪಿಎಸ್ ಇನ್ವರ್ಟರ್ ಅಳವಡಿಸಲಾಗಿದೆ ಮತ್ತು ಸಂಚಾರಿ ಶೌಚಾಲಯಕ್ಕೆ ಸ್ಥಳೀಯವಾಗಿ ಲಭ್ಯವಿರುವ ಎಕ್ಟ್ಸರನಲ್ ಎ.ಸಿ. ಪವರ್ ಸಪ್ಲೈನಿಂದ ಸಂಪರ್ಕ ಪಡೆದುಕೊಳ್ಳಲು ಬೇಕಾದ ಸ್ವಿಚ್ ಅಳವಡಿಸಲಾಗಿದೆ ಎಂದು ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವ ಉಮೇಶ್ ಕತ್ತಿ, ಆರೋಗ್ಯ ಇಲಾಖೆಯ ಸಚಿವ ಡಾ.ಕೆ.ಸುಧಾಕರ್ ಹಾಗೂ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X