ಐಷಾರಾಮಿ ಕಾರು ಮಾರಾಟ ಪ್ರಕರಣ : ಸಿಐಡಿಯಿಂದ ಆರೋಪಿಗಳ ವಿಚಾರಣೆ
ಮಂಗಳೂರು, ಜೂ.5: ವಂಚನಾ ಪ್ರಕರಣದ ಆರೋಪಿಗಳ ಐಷಾರಾಮಿ ಕಾರನ್ನು ಮಂಗಳೂರು ಸಿಸಿಬಿ ಪೊಲೀಸರು ಮಾರಾಟ ಮಾಡಿರುವ ಪ್ರಕರಣದ ತನಿಖೆಯನ್ನು ರಾಜ್ಯ ಸಿಐಡಿ (ಕೇಂದ್ರ ತನಿಖಾ ದಳ) ಕೈಗೆತ್ತಿಕೊಂಡಿದ್ದು, ಅದರಂತೆ ಪ್ರಕರಣದ ಆರೋಪಿಗಳ ವಿಚಾರಣೆಯು ಶನಿವಾರ ನಗರದ ಸಿಐಡಿ ಕಚೇರಿಯಲ್ಲಿ ನಡೆಯಿತು.
ಸಿಐಡಿ (ಕೇಂದ್ರ ತನಿಖಾ ದಳ) ರಾಜ್ಯ ಪೊಲೀಸ್ ಅಧೀಕ್ಷಕ ಭೀಮಾಶಂಕರ್ ಮತ್ತು ಇನ್‌ಸ್ಪೆಕ್ಟರ್ ಚಂದ್ರಪ್ಪನೇತೃತ್ವದ ತಂಡ ಮಂಗಳೂರಿಗೆ ಆಗಮಿಸಿ ತನಿಖೆ ಆರಂಭಿಸಿದೆ.
ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದಿನ ಸಿಸಿಬಿ ಇನ್‌ಸ್ಪೆಕ್ಟರ್ ಶಿವಪ್ರಕಾಶ್ ನಾಯಕ್, ನಾರ್ಕೊಟಿಕ್ ಆ್ಯಂಡ್ ಎಕಾನಾಮಿಕ್ ಠಾಣಾ ಇನ್‌ಸ್ಪೆಕ್ಟರ್ ರಾಮಕೃಷ್ಣ, ಸಿಸಿಬಿ ಎಸ್ಸೈ ಕಬ್ಬಳ್‌ರಾಜ್ ಅವರನ್ನು ವಿಚಾರಣೆ ನಡೆಸಲಾಗಿದೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿ ಹಿರಿಯ ಅಧಿಕಾರಿಗಳ ಸೂಚನೆ ಯಂತೆ ಆಂತರಿಕ ವರದಿ ನೀಡಿದ ಮಂಗಳೂರು ನಗರ ಹಿಂದಿನ ಡಿಸಿಪಿ ವಿನಯ ಎ. ಗಾಂವಕರ್ ಅವರಿಂದಲೂ ಹೇಳಿಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
Next Story





