Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಹೋದವರು...

ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಹೋದವರು ಸಾಯುತ್ತಿದ್ದಾರೆ: ಕೊಪ್ಪ ಕಿಸಾನ್ ಘಟಕದ ಅಧ್ಯಕ್ಷ ನಾರ್ವೆ ಅಶೋಕ್ ಆರೋಪ

''ಪ್ರತಿದಿನ 15-20 ಜನರು ಸಾವನ್ನಪ್ಪುತ್ತಿದ್ದಾರೆ, ಸರಕಾರಕ್ಕೆ ಸುಳ್ಳು ಲೆಕ್ಕ ನೀಡಲಾಗುತ್ತಿದೆ''

ವಾರ್ತಾಭಾರತಿವಾರ್ತಾಭಾರತಿ5 Jun 2021 11:15 PM IST
share
ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಹೋದವರು ಸಾಯುತ್ತಿದ್ದಾರೆ: ಕೊಪ್ಪ ಕಿಸಾನ್ ಘಟಕದ ಅಧ್ಯಕ್ಷ ನಾರ್ವೆ ಅಶೋಕ್ ಆರೋಪ

ಚಿಕ್ಕಮಗಳೂರು, ಜೂ.5: ನಗರದಲ್ಲಿರುವ ಕೋವಿಡ್ ಆಸ್ಪತ್ರೆಗೆ ಹೋಗುವ ಸೋಂಕಿತರೆಲ್ಲರೂ ಹೆಣವಾಗಿ ಹಿಂದಿರುಗುತ್ತಿದ್ದಾರೆ. ಸೋಂಕಿತರಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ. ಕೋವಿಡ್ ಆಸ್ಪತ್ರೆಯಲ್ಲಿ ಪ್ರತಿದಿನ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪುತ್ತಿದ್ದರೂ ಜಿಲ್ಲಾಡಳಿತ ಈ ಅಂಕಿ ಅಂಶವನ್ನು ಮುಚ್ಚಿಡುತ್ತಿದೆ ಎಂದು ಕೊಪ್ಪ ತಾಲೂಕಿನ ಕಿಸಾನ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾರ್ವೆ ಅಶೋಕ್ ಆರೋಪಿಸಿದ್ದಾರೆ.

ಈ ಸಂಬಂಧ ಶನಿವಾರ ನಾರ್ವೆ ಅಶೋಕ್ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದು, ಈ ವಿಡಿಯೋ ಜಿಲ್ಲಾದ್ಯಂತ ಭಾರೀ ವೈರಲ್ ಆಗಿದ್ದು, ಕೋವಿಡ್ ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ, ಸಚಿವರು ಹಾಗೂ ಶಾಸಕರು ಪ್ರಮಾಣಿಕವಾಗಿ ಕೆಲಸ ಮಾಡುತ್ತಿಲ್ಲ. ಕೋವಿಡ್ ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯಗಳಿವೆ ಎನ್ನಲಾಗುತ್ತಿದೆಯಾದರೂ ಜಿಲ್ಲಾಸ್ಪತ್ರೆಯ ಕೋವಿಡ್ ಘಟಕಕ್ಕೆ ದಾಖಲಾಗುವ ಸೋಂಕಿತರ ಪೈಕಿ ಬಹುತೇಕ ಮಂದಿ ಸಾವನ್ನಪ್ಪುತ್ತಿದ್ದಾರೆಂಬ ಶಂಕೆ ವ್ಯಕ್ತವಾಗುತ್ತಿದೆ. ಕೊಪ್ಪ ತಾಲೂಕೊಂದರಲ್ಲೇ ಕಳೆದೊಂದು ವಾರದಲ್ಲಿ ಚಿಕ್ಕಮಗಳೂರು ನಗರದ ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗೆ ಹೋಗಿದ್ದ 6-8 ಮಂದಿ ಸಾವನ್ನಪ್ಪಿದ್ದಾರೆ ಎಂದು ನಾರ್ವೆ ಅಶೋಕ್ ವಿಡಿಯೋದಲ್ಲಿ ಹೇಳಿದ್ದಾರೆ.

ಚಿಕ್ಕಮಗಳೂರು ಜಿಲ್ಲಾಡಳಿತ ಕೋವಿಡ್‍ಗೆ ಬಲಿಯಾಗುವವರ ಸಂಖ್ಯೆಯನ್ನು ಮುಚ್ಚಿಡುತ್ತಿದೆ ಎಂದು ಆರೋಪಿಸಿರುವ ಅವರು, ಕೋವಿಡ್ ಆಸ್ಪತ್ರೆಯಲ್ಲಿ ಪ್ರತಿದಿನ 10-15 ಮಂದಿ ಸಾಯುತ್ತಿರುವ ಬಗ್ಗೆ ಶಂಕೆ ಇದೆ. ಸೋಂಕಿತರನ್ನು ಚಿಕ್ಕಮಗಳೂರು ನಗರದ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲು ಹೋಗಿದ್ದವರು ಸೋಂಕಿತರ ಮೃತದೇಹಗಳನ್ನು ಸಾಲಾಗಿ ಮಲಗಿಸಿದ್ದ ದೃಶ್ಯಗಳನ್ನು ಕಂಡಿರುವುದಾಗಿ ಹೇಳಿಕೆ ನೀಡಿದ್ದಾರೆ. ಜಿಲ್ಲಾಡಳಿತ ದಿನವೊಂದಕ್ಕೆ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆಯನ್ನು ಮುಚ್ಚಿಡಬಾರದು. ಸಾವಿನ ಸಂಖ್ಯೆಗಾದರೂ ಜನರು ಭಯಪಟ್ಟು ಸುಖಾಸುಮ್ಮನೆ ತಿರುಗಾಡುವುದನ್ನು ನಿಲ್ಲಿಸುತ್ತಾರೆ. ಲಾಕ್‍ಡೌನ್ ಅವಧಿಯಲ್ಲಿ ಜನರು ಬೇಕಾಬಿಟ್ಟಿ ತಿರುಗಾಡುತ್ತಿದ್ದು, ಇದಕ್ಕೆ ಜಿಲ್ಲಾ ಪೊಲೀಸ್ ಇಲಾಖೆ ನಿಯಂತ್ರಣ ಹೇರಬೇಕೆಂದು ಅವರು ಆಗ್ರಹಿಸಿದ್ದಾರೆ.

ಚಿಕ್ಕಮಗಳೂರು ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾದರೇ ಬದುಕಲ್ಲ ಎಂಬ ಅಭಿಪ್ರಾಯವನ್ನು ಸಾರ್ವಜನಿಕರು ವ್ಯಕ್ತಪಡಿಸುತ್ತಿದ್ದು, ಇದರಿಂದ ಜನರು ಆತಂಕಕ್ಕೆ ತುತ್ತಾಗಿದ್ದಾರೆ. ಇನ್ನಾದರೂ ಜಿಲ್ಲಾಡಳಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸಾ ಸೌಲಭ್ಯಗಳನ್ನು ಹೆಚ್ಚಿಸಬೇಕು. ಸೋಂಕಿತರ ಸಾವಿನ ಪ್ರಮಾಣವನ್ನು ಕಡಿಮೆ ಮಾಡಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ಶಾಸಕರು ಶ್ರಮಿಸಬೇಕೆಂದು ಅವರು ವಿಡಿಯೋ ಮೂಲಕ ಆಗ್ರಹಿಸಿದ್ದಾರೆ.

ನಾರ್ವೆ ಅಶೋಕ್ ಅವರು ಕಳೆದ ವರ್ಷ ಕೋವಿಡ್ ಮೊದಲನೇ ಅಲೆಯಲ್ಲಿ ಸೋಂಕಿಗೆ ತುತ್ತಾಗಿದ್ದು, ಕೋವಿಡ್ ಕೇರ್ ಸೆಂಟರ್ ನಲ್ಲಿದ್ದ ಅವ್ಯವಸ್ಥೆಗಳ ಬಗ್ಗೆ ಇದೇ ರೀತಿಯಲ್ಲಿ ವಿಡಿಯೋ ಮೂಲಕ ಜಿಲ್ಲಾಡಳಿತ, ಜನಪ್ರತಿನಿಧಿಗಳು ಸರಕಾರದ ಗಮನ ಸೆಳೆದಿದ್ದರು. ಈ ವಿಡಿಯೋ ಬಳಿಕ ಕೋವಿಡ್ ಕೇರ್ ಸೆಂಟರ್ ನಲ್ಲಿ ಜಿಲ್ಲಾಡಳಿತ ಕೆಲ ಸುಧಾರಣೆ ಮಾಡಿತ್ತು.

ನಾರ್ವೆ ಅಶೋಕ್ ಅವರ ವಿಡಿಯೋ ಗಮನಿಸಿದ್ದೇನೆ. ಜಿಲ್ಲಾಡಳಿತ, ಆರೋಗ್ಯ ಇಲಾಖೆ ಕೋವಿಡ್‍ನಿಂದ ಮೃತರಾಗುವವರ ಸಂಖ್ಯೆಯನ್ನು ಮುಚ್ಚಿಡುತ್ತಿಲ್ಲ. ಹಾಗೆ ಮುಚ್ಚಿಡಲು ಸಾಧ್ಯವೇ ಇಲ್ಲ. ಕೋವಿಡ್ ಆಸ್ಪತ್ರೆಯಲ್ಲಿ ಉತ್ತಮ ರೀತಿಯ ಚಿಕಿತ್ಸೆ ನೀಡುವಲ್ಲಿ ಜಿಲ್ಲಾಡಳಿತ ಶ್ರಮಿಸುತ್ತಿದೆ.
- ಡಾ.ಉಮೇಶ್, ಡಿಎಚ್‍ಒ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X