Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ. ಜಿಲ್ಲೆಯಲ್ಲಿ ಲಾಕ್‌ ಡೌನ್ ನಿಯಮ...

ದ.ಕ. ಜಿಲ್ಲೆಯಲ್ಲಿ ಲಾಕ್‌ ಡೌನ್ ನಿಯಮ ಕಟ್ಟು ನಿಟ್ಟು: ಡಿಸಿ ಡಾ. ರಾಜೇಂದ್ರ

ವಾರ್ತಾಭಾರತಿವಾರ್ತಾಭಾರತಿ7 Jun 2021 4:22 PM IST
share
ದ.ಕ. ಜಿಲ್ಲೆಯಲ್ಲಿ ಲಾಕ್‌ ಡೌನ್ ನಿಯಮ ಕಟ್ಟು ನಿಟ್ಟು: ಡಿಸಿ ಡಾ. ರಾಜೇಂದ್ರ

ಮಂಗಳೂರು, ಜೂ. 7: ದ.ಕ. ಜಿಲ್ಲೆಯಲ್ಲಿ ಪ್ರಸ್ತುತ ಕೊರೋನ ಸೋಂಕಿನ ದರ ಶೇ. 20ರಿಂದ 21ರಷ್ಟಿದ್ದು, ಅದನ್ನು ಶೇ. 5ಕ್ಕೆ ಇಳಿಸಿ ಅನ್‌ ಲಾಕ್‌ ಗೊಳಿಸುವಲ್ಲಿ ಜನರ ಸಹಕಾರ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸರಕಾರದ ಆದೇಶದಂತೆ ಜೂ. 14ರವರೆಗೂ ಪ್ರಸ್ತುತ ಜಾರಿಯಲ್ಲಿರುವ ಲಾಕ್‌ ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಅನಿವಾರ್ಯವಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ದ.ಕ. ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ 50ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳಿರುವ ಗ್ರಾಪಂಗಳಲ್ಲಿ ಪೂರ್ವ ನಿಗದಿತ ಮದುವೆ ಹಾಗೂ ಇತರ ಕಾರ್ಯಕ್ರಮಗಳನ್ನು ರದ್ದು ಮಾಡುವುದು ಹಾಗೂ ಹೊಸ ಕಾರ್ಯಕ್ರಮಗಳಿಗೆ ಅನುಮತಿ ನೀಡದಿರುವ ಮೂಲಕ ವಿಶೇಷ ಲಾಕ್‌ ಡೌನ್ ವಿಧಿಸಲಾಗುವುದು ಎಂದು ತಿಳಿಸಿದರು.

ಜಿಲ್ಲೆಯ ಹಿರಿಯ ಅಧಿಕಾರಿಗಳ ಜತೆ ಇಂದು ಚರ್ಚಿಸಿದ ಬಳಿಕ ಈ ನಿರ್ಧಾರಕ್ಕೆ ಬರಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಜನರ ಅನಗತ್ಯ ಸಂಚಾರ ತಡೆಯುವಲ್ಲಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಲ್ಲದೆ, ಅವಧಿ ಮೀರಿ ಅಗತ್ಯ ವಸ್ತುಗಳ ಅಂಗಡಿ ಮುಂಗಟ್ಟುಗಳನ್ನು ತೆರೆದು ವ್ಯಾಪಾರ ಮಾಡುವುದು, ಕೋವಿಡ್ ನಿಯಮ ಪಾಲನೆ ಮಾಡದಿರುವ ಕುರಿತು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮನಪಾದ 10 ಫ್ಲೆಯಿಂಗ್ ಸ್ಕ್ವಾಡ್ (ವಿಚಕ್ಷಣ ದಳ) ಕಾರ್ಯ ನಿರ್ವಹಿಸಲಿವೆ. ಗ್ರಾಮಾಂತರದಲ್ಲಿ ತಾಲೂಕು ಮಟ್ಟದಲ್ಲಿ 2ರಿಂದ 3ರಷ್ಟು ವಿಚಕ್ಷಣ ತಂಡಗಳು ಕಾರ್ಯ ನಿರ್ವಹಿಸಲಿವೆ ಎಂದರು.

ಕೊರೋನ ಸೋಂಕಿತರಾದ ಸಂದರ್ಭ ಮನೆಗಳಲ್ಲಿ ಪ್ರತ್ಯೇಕ ಶೌಚಾಲಯದ ವ್ಯವಸ್ತೆ ಇಲ್ಲದಿರುವುದು, ಬಿಪಿ, ಶುಗರ್‌ನಂತಹ ಇತರ ಅನಾರೋಗ್ಯ ಸಮಸ್ಯೆಗಳಿದ್ದಲ್ಲಿ ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಅವರು ಹೇಳಿದರು.

ದ.ಕ. ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಪಂಗಳಲ್ಲಿ ಟಾಸ್ಕ್ ಫೋರ್ಸ್ ಸಮಿತಿಗಳು ಕಾರ್ಯ ನಿರ್ವಹಿಸುತ್ತಿದ್ದು, ಈ ಸಮಿತಿಗಳಿಗೆ ಸರಕಾರೇತರ ಸಂಸ್ಥೆಗಳ ಸದಸ್ಯರ ಸಹಕಾರದೊಂದಿಗೆ ಹೆಚ್ಚಿನ ನಿಗಾಕ್ಕೆ ಕ್ರಮ ವಹಿಸಲಾಗಿದೆ. 100ಕ್ಕೂ ಅಧಿಕ ಪ್ರಕರಣಗಳು ನೆರಿಯಾದಲ್ಲಿ, 17 ಗ್ರಾ.ಪಂ.ಗಳಲ್ಲಿ 50ಕ್ಕೂ ಅಧಿಕ ಕೊರೋನ ಪಾಸಿಟಿವ್ ಪ್ರಕರಣಗಳಿವೆ. 10 ರಿಂದ 15 ಪ್ರಕರಣಗಳು 172 ಗ್ರಾ.ಪಂ.ಗಳಲ್ಲಿ ಹಾಗೂ 10ಕಿಂತಲೂ ಕಡಿಮೆ ಪ್ರಕರಣಗಲು 147 ಗ್ರಾ.ಪಂಗಳಲ್ಲಿವೆ. ಗ್ರಾ.ಪಂ. ವ್ಯಾಪ್ತಿಯಲ್ಲಿ 31 ಕೋವಿಡ್ ಕೇರ್ ಸೆಂಟರ್‌ಗಳಿವೆ. ಕೋವಿಡ್ ಮುಕ್ತ ಗ್ರಾಮಗಳಿಗೆ ಅಭಿನಂದನಾ ಪತ್ರವನ್ನು ನೀಡಲಾಗುವುದು. 9 ಗ್ರಾಪಂಗಳಲ್ಲಿ 15 ದಿನಗಳಲ್ಲಿ ಪಾಸಿಟಿವ್ ಪ್ರಕರಣಗಳು ಕಂಡು ಬಂದಿಲ್ಲ ಎಂದು ದ.ಕ. ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ತಿಳಿಸಿದರು.

ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಪೊಲೀಸ್ ಋಷಿಕೇಶ್ ಸೊನಾವಣೆ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಡಿಎಚ್‌ಒ ಡಾ. ಕಿಶೋರ್ ಕುಮಾರ್, ಗಾಯತ್ರಿ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.

18-44 ವಯಸ್ಸಿವರಲ್ಲಿ ಲಸಿಕೆ ಪಡೆದವರು ಶೇ. 4.75

ದ.ಕ. ಜಿಲ್ಲೆಯಲ್ಲಿ ಜೂನ್ 6ರವರೆಗೆ 47358 ಮಂದಿ ಪ್ರಥಮ ಡೋಸ್ ಲಸಿಕೆ ಪಡೆದಿದ್ದು (ಶೇ. 90.17), 32722 ಮಂದಿ ದ್ವಿತೀಯ ಡೋಸ್ ಲಸಿಕೆ ಪಡೆದಿದ್ದಾರೆ. ಮುಂಚೂಣಿ ಕಾರ್ಯಕರ್ತರಲ್ಲಿ 12249 ಪ್ರಥಮ ಹಾಗೂ 7049 ಮಂದಿ ದ್ವಿತೀಯ ಡೋಸ್ ಲಸಿಕೆ ಪಡೆದಿದ್ದಾರೆ.

18ರಿಂದ 44 ವರ್ಷ ವಯಸ್ಸಿನ 1092144 ಮಂದಿ ಅರ್ಹರಲ್ಲಿ 51919 ಮಂದಿ ಪ್ರಥಮ ಡೋಸ್ ಪಡೆಯುವ ಮೂಲಕ ಶೇ. 4.75ರಷ್ಟು ಮಾತ್ರವೇ ಸಾಧನೆಯಾಗಿದೆ ಹಾಗೂ 118 ಮಂದಿ ದ್ವಿತೀಯ ಡೋಸ್ ಪಡೆದಿದ್ದಾರೆ. 45ರಿಂದ 60 ವರ್ಷ ವಯಸ್ಸಿನವರಲ್ಲಿ 137993 ಪ್ರಥಮ ಡೋಸ್ (ಶೇ. 33.16 ಸಾಧನೆ) ಹಾಗೂ 27314 ಮಂದಿ ದ್ವಿತೀಯ ಡೋಸ್ ಲಸಿಕೆ ಪಡೆದಿದ್ದಾರೆ. 60 ವರ್ಷ ಮೇಲ್ಪಟ್ಟ ಅರ್ಹರಲ್ಲಿ 129686 ಮಂದಿ ಪ್ರಥಮ (ಶೇ. 64.52) ಹಾಗೂ 56696 ಮಂದಿ ದ್ವಿತೀಯ ಡೋಸ್ ಲಸಿಕೆಯನ್ನು ಪಡೆದಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X