Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದ ಎಲ್ಲ ಜನರಿಗೂ ಕೇಂದ್ರ ಸರಕಾರದಿಂದ...

ದೇಶದ ಎಲ್ಲ ಜನರಿಗೂ ಕೇಂದ್ರ ಸರಕಾರದಿಂದ ಉಚಿತ ಲಸಿಕೆ: ಪ್ರಧಾನಿ ಮೋದಿ

ದೀಪಾವಳಿಯ ತನಕ 80 ಕೋಟಿ ಜನರಿಗೆ ಉಚಿತ ಆಹಾರ ಧಾನ್ಯ

ವಾರ್ತಾಭಾರತಿವಾರ್ತಾಭಾರತಿ7 Jun 2021 5:20 PM IST
share
ದೇಶದ ಎಲ್ಲ ಜನರಿಗೂ ಕೇಂದ್ರ ಸರಕಾರದಿಂದ ಉಚಿತ ಲಸಿಕೆ: ಪ್ರಧಾನಿ ಮೋದಿ

ಹೊಸದಿಲ್ಲಿ,ಜೂ.7: ಸೋಮವಾರ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು,ಜೂ.21ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆಗಳನ್ನು ನೀಡಲು ಕೇಂದ್ರ ಸರಕಾರವು ರಾಜ್ಯಗಳಿಗೆ ಉಚಿತ ಕೋವಿಡ್ ಲಸಿಕೆಯನ್ನು ಪೂರೈಸಲಿದೆ ಎಂದು ಪ್ರಕಟಿಸಿದರು. ಮುಂದಿನ ದಿನಗಳಲ್ಲಿ ದೇಶದಲ್ಲಿ ಲಸಿಕೆ ಪೂರೈಕೆಯು ಗಣನೀಯವಾಗಿ ಹೆಚ್ಚಲಿದೆ ಎಂದು ಅವರು ಒತ್ತಿ ಹೇಳಿದರು.

ಲಸಿಕೆ ತಯಾರಕರ ಒಟ್ಟು ಉತ್ಪಾದನೆಯ ಶೇ.75ರಷ್ಟನ್ನು ಕೇಂದ್ರ ಸರಕಾರವೇ ಖರೀದಿಸಲಿದೆ ಮತ್ತು ಅದನ್ನು ರಾಜ್ಯ ಸರಕಾರಗಳಿಗೆ ಉಚಿತವಾಗಿ ನೀಡಲಿದೆ ಎಂದರು.
ಲಸಿಕೆ ರಾಜಕೀಯದಲ್ಲಿ ತೊಡಗಿಕೊಂಡಿರುವುದಕ್ಕಾಗಿ ಪ್ರತಿಪಕ್ಷ ಆಡಳಿತದ ರಾಜ್ಯಗಳ ವಿರುದ್ಧ ತೀವ್ರ ದಾಳಿ ನಡೆಸಿದ ಅವರು,ದೇಶದಲ್ಲಿ ಕೊರೋನವೈರಸ್ ಪ್ರಕರಣಗಳು ಇಳಿಕೆಯಾಗುತ್ತಿರುವ ಮಧ್ಯೆಯೇ ಕೇಂದ್ರಕ್ಕೆ ವಿವಿಧ ಸಲಹೆಗಳು,ವಿವಿಧ ಬೇಡಿಕೆಗಳು ಬರಲು ಆರಂಭವಾಗಿದ್ದವು ಎಂದು ಲಸಿಕೆ ನೀಡಿಕೆ ಪ್ರಕ್ರಿಯೆಯ ವಿಕೇಂದ್ರೀಕರಣಕ್ಕಾಗಿ ವಿವಿಧ ರಾಜ್ಯ ಸರಕಾರಗಳಿಂದ ಆಗ್ರಹಗಳನ್ನು ಪ್ರಸ್ತಾಪಿಸಿ ಹೇಳಿದರು. ಲಸಿಕೆ ನೀಡಿಕೆಗೆ ವಯಸ್ಸನ್ನು ಕೇಂದ್ರವು ನಿರ್ಧರಿಸುವುದಕ್ಕೆ ವಿರೋಧವೂ ವ್ಯಕ್ತವಾಗಿತ್ತು ಎಂದರು.

 ಈ ವರ್ಷದ ಜ.16ರಿಂದ ಆರಂಭಿಸಿ ಎಪ್ರಿಲ್ ಅಂತ್ಯದವರೆಗೆ ಮುಖ್ಯವಾಗಿ ಕೇಂದ್ರ ಸರಕಾರದ ಉಸ್ತುವಾರಿಯಲ್ಲಿ ಲಸಿಕೆ ಕಾರ್ಯಕ್ರಮವನ್ನು ನಡೆಸಲಾಗಿದೆ. ಎಲ್ಲರಿಗೂ ಉಚಿತ ಲಸಿಕೆ ಒದಗಿಸುವ ನಿಟ್ಟಿನಲ್ಲಿ ದೇಶವು ಮುನ್ನಡೆದಿದೆ. ದೇಶದ ಜನರು ಶಿಸ್ತನ್ನು ಪಾಲಿಸಿ ತಮ್ಮ ಸರದಿ ಬಂದಾಗ ಲಸಿಕೆಯನ್ನು ಪಡೆದುಕೊಳ್ಳುತ್ತಿದ್ದಾರೆ ಎಂದ ಮೋದಿ,ಆದರೆ ಇನ್ನು ಮುಂದೆ ಲಸಿಕೆ ನೀಡಿಕೆಗೆ ಸಂಬಂಧಿಸಿದಂತೆ ರಾಜ್ಯಗಳ ಹೊಣೆಗಾರಿಕೆಯ ಶೇ.25ರಷ್ಟನ್ನು ಸಹ ಭಾರತ ಸರಕಾರವು ವಹಿಸಿಕೊಳ್ಳಲಿದೆ. ಮುಂದಿನ ಎರಡು ವಾರಗಳಲ್ಲಿ ಈ ವ್ಯವಸ್ಥೆ ಅನುಷ್ಠಾನಗೊಳ್ಳಲಿದೆ ಎಂದರು.

ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ದೇಶದ 80 ಕೋಟಿ ಜನರಿಗೆ ಉಚಿತ ಪಡಿತರ ದೊರೆಯುವಂತಾಗಲು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ದೀಪಾವಳಿಯವರೆಗೆ ವಿಸ್ತರಿಸಲಾಗಿದೆ ಎಂದೂ ಅವರು ಪ್ರಕಟಿಸಿದರು.
ಶೇ.25ರಷ್ಟು ಲಸಿಕೆಗಳ ಖರೀದಿಯನ್ನು ಖಾಸಗಿ ಆಸ್ಪತ್ರೆಗಳು ಮುಂದುವರಿಸಬಹುದು,ಆದರೆ ಪ್ರತಿ ಡೋಸ್ ಗೆ ಲಸಿಕೆಯ ನಿಗದಿತ ಬೆಲೆಯ ಜೊತೆಗೆ 150 ರೂ.ಗಿಂತ ಹೆಚ್ಚಿನ ಸೇವಾಶುಲ್ಕವನ್ನು ಪಡೆಯುವಂತಿಲ್ಲ ಎಂದರು.
ಕೋವಿಡ್-19 ಪ್ರಕರಣಗಳು ಕಡಿಮೆಯಾಗುವುದರೊಂದಿಗೆ ಹಲವಾರು ರಾಜ್ಯಗಳು ಲಾಕ್ಡೌನ್ ಹಿಂದೆಗೆದುಕೊಳ್ಳುವ ಮತ್ತು ನಿರ್ಬಂಧಗಳನ್ನು ಸಡಿಲಿಸುವ ನಿಟ್ಟಿನಲ್ಲಿ ಎಚ್ಚರಿಕೆಯ ಹೆಜ್ಜೆಗಳನ್ನಿರಿಸುತ್ತಿವೆ ಎಂದ ಪ್ರಧಾನಿ,ಲಸಿಕೆಯು ವೈರಸ್‌ ವಿರುದ್ಧ ರಕ್ಷಾ ಕವಚವಾಗಿದೆ ಮತ್ತು ಮುಂಬರುವ ದಿನಗಳಲ್ಲಿ ದೇಶದಲ್ಲಿ ಲಸಿಕೆ ಪೂರೈಕೆಯನ್ನು ಗಣನೀಯವಾಗಿ ಹೆಚ್ಚಿಸಲಾಗುವುದು ಎಂದು ತಿಳಿಸಿದರು.

ದೇಶದಲ್ಲಿ ಏಳು ಕಂಪನಿಗಳು ಕೊರೋನವೈರಸ್ ವಿರುದ್ಧ ಲಸಿಕೆಗಳನ್ನು ತಯಾರಿಸುತ್ತಿವೆ ಮತ್ತು ಇನ್ನೂ ಮೂರು ಲಸಿಕೆಗಳ ಟ್ರಯಲ್ ಗಳು ಮುಂದುವರಿದ ಹಂತದಲ್ಲಿವೆ ಎಂದು ಹೇಳಿದರು.

  ಇತರ ದೇಶಗಳಿಂದ ಲಸಿಕೆಗಳನ್ನು ಖರೀದಿಸುವ ಪ್ರಕ್ರಿಯೆಯೂ ವೇಗವನ್ನು ಪಡೆದುಕೊಂಡಿದೆ ಎಂದ ಅವರು,ಮಕ್ಕಳು ಕೋವಿಡ್ ನಿಂದ ಬಾಧಿತರಾಗುವ ಬಗ್ಗೆ ತಜ್ಞರು ಇತ್ತೀಚಿಗೆ ಕಳವಳಗಳನ್ನು ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಮಕ್ಕಳಿಗಾಗಿ ಎರಡು ಲಸಿಕೆಗಳ ಟ್ರಯಲ್ ಗಳನ್ನು ನಡೆಸಲಾಗುತ್ತಿದೆ. ಮೂಗಿನ ಮೂಲಕ ಸಿಂಪಡಿಸುವ ಲಸಿಕೆಯ ಅಭಿವೃದ್ಧಿಗಾಗಿ ಸಂಶೋಧನೆಗಳು ಮುಂದುವರಿದಿವೆ ಮತ್ತು ಇದು ಯಶಸ್ವಿಯಾದರೆ ಭಾರತದ ಲಸಿಕೆ ಅಭಿಯಾನಕ್ಕೆ ಹೆಚ್ಚಿನ ಉತ್ತೇಜನ ದೊರೆಯಲಿದೆ. ಅಲ್ಪಾವಧಿಯಲ್ಲಿ ಎರಡು ಮೇಡ್-ಇನ್-ಇಂಡಿಯಾ ಲಸಿಕೆಗಳ ಮೂಲಕ ಭಾರತವು ತನ್ನ ಸಾಮರ್ಥ್ಯವನ್ನು ಸಾಬೀತುಗೊಳಿಸಿದೆ ಮತ್ತು ಈಗಾಗಲೇ 23 ಕೋಟಿಗೂ ಅಧಿಕ ಡೋಸ್ ಗಳನ್ನು ನೀಡಲಾಗಿದೆ ಎಂದರು.
 
ವಿವಿಧ ಮಟ್ಟಗಳಲ್ಲಿ ಕೋವಿಡ್ ವಿರುದ್ಧ ಹೋರಾಡಲು ಸಮರೋಪಾದಿಯಲ್ಲಿ ಪ್ರಯತ್ನಗಳು ನಡೆಯುತ್ತಿವೆ,ದೇಶಾದ್ಯಂತ ಹೊಸ ಆರೋಗ್ಯ ಮೂಲಸೌಕರ್ಯಗಳನ್ನು ಸೃಷ್ಟಿಸಲಾಗಿದೆ. ಅಗತ್ಯ ಔಷಧಿಗಳ ಉತ್ಪಾದನೆಯನ್ನು ಹೆಚ್ಚಿಸಲಾಗುತ್ತಿದೆ ಎಂದ ಮೋದಿ,ಈ ಹೋರಾಟದಲ್ಲಿ ಭಾರತವು ಬಹಳಷ್ಟು ನೋವನ್ನುಂಡಿದೆ ಮತ್ತು ಹಲವರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ ಎಂದರು. ಸಂತ್ರಸ್ತ ಕುಟುಂಬಗಳಿಗೆ ಸಂತಾಪಗಳನ್ನೂ ಅವರು ಸೂಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X