Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಉಮರ್ ಖಾಲಿದ್, ಖಾಲಿದ್ ಸೈಫಿ ಗ್ಯಾಂಗ್‍...

"ಉಮರ್ ಖಾಲಿದ್, ಖಾಲಿದ್ ಸೈಫಿ ಗ್ಯಾಂಗ್‍ ಸ್ಟರ್ ಗಳಲ್ಲ, ಕೈಕೋಳ ತೊಡಿಸಿ ಕೋರ್ಟ್‌ ಗೆ ಹಾಜರುಪಡಿಸಬೇಕೆಂದಿಲ್ಲ"

ಅರ್ಜಿ ತಿರಸ್ಕರಿಸಿದ ದಿಲ್ಲಿ ನ್ಯಾಯಾಲಯ

ವಾರ್ತಾಭಾರತಿವಾರ್ತಾಭಾರತಿ7 Jun 2021 5:35 PM IST
share
ಉಮರ್ ಖಾಲಿದ್, ಖಾಲಿದ್ ಸೈಫಿ ಗ್ಯಾಂಗ್‍ ಸ್ಟರ್ ಗಳಲ್ಲ, ಕೈಕೋಳ ತೊಡಿಸಿ ಕೋರ್ಟ್‌ ಗೆ ಹಾಜರುಪಡಿಸಬೇಕೆಂದಿಲ್ಲ

ಹೊಸದಿಲ್ಲಿ: ʼಅಪಾಯಕಾರಿ ಕೈದಿಗಳುʼ ಎಂಬ ಆಧಾರದಲ್ಲಿ ಹೋರಾಟಗಾರರಾದ ಉಮರ್ ಖಾಲಿದ್ ಮತ್ತು ಖಾಲಿದ್ ಸೈಫಿ ಅವರನ್ನು ಕೈಕೋಳ ತೊಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಬೇಕೆಂಬ ಅಪೀಲನ್ನು ದಿಲ್ಲಿಯ ನ್ಯಾಯಾಲಯವು ತಿರಸ್ಕರಿಸಿದೆ. ʼಆರೋಪಿಗಳು ಈ ಹಿಂದೆ ಯಾವುದೇ ಪ್ರಕರಣದಲ್ಲಿ ಅಪರಾಧಿಗಳೆಂದು ಘೋಷಿತರಾಗಿಲ್ಲ ಹಾಗೂ ಗ್ಯಾಂಗ್‍ಸ್ಟರ್‍ಗಳೂ ಅಲ್ಲ, ಸರಿಯಾಗಿ ಪರಾಮರ್ಶಿಸದೆ ದಿಲ್ಲಿ ಪೊಲೀಸರು ಮತ್ತು ಜೈಲಿನ ಅಧಿಕಾರಿಗಳು ಈ  ಅಪೀಲು ಸಲ್ಲಿಸಿದ್ದಾರೆ" ಎಂದು ಹೆಚ್ಚುವರಿ ಸೆಶನ್ಸ್ ನ್ಯಾಯಾಧೀಶ ವಿನೋದ್ ಯಾದವ್ ಹೇಳಿದ್ದಾರೆ ಎಂದು scroll.in ವರದಿ ಮಾಡಿದೆ.

ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರು ಪಡಿಸಲಾಗುತ್ತಿಲ್ಲವಾದುದರಿಂದ ಈ ಅಪೀಲು ಈ ಹಂತದಲ್ಲಿ ಅಗತ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಕಳೆದ ಬಾರಿ ವಿಚಾರಣೆ ಎಪ್ರಿಲ್ 22ರಂದು ವಿಚಾರಣೆ ನಡೆದಾಗ ಈ ಅಪೀಲಿನ ಕುರಿತು  ದಿಲ್ಲಿ ಪೊಲೀಸರ ವಿಶೇಷ ಸೆಲ್ ಹಾಗೂ ಜೈಲ್ ಅಧೀಕ್ಷಕರಿಂದ ವರದಿಯನ್ನು ನ್ಯಾಯಾಲಯ ಕೇಳಿತ್ತು.

ಮೇ 6ರಂದು ವರದಿ ಸಲ್ಲಿಸಿದ್ದ ವಿಶೇಷ ಸೆಲ್ ಹೆಚ್ಚುವರಿ ಡಿಸಿಪಿ, ಯಾವುದೇ ನ್ಯಾಯಾಲಯದ ಮುಂದೆ ಇಂತಹ ಅಪೀಲು ಮಾಡಲಾಗಿಲ್ಲ ಎಂದು ಹೇಳಿದ್ದರು.

ಆದರೆ ಎಪ್ರಿಲ್ 26ರಂದು ಮಾಹಿತಿ ನೀಡಿದ ಡಿಸಿಪಿ,  ಜಿಟಿಬಿ ಆಸ್ಪತ್ರೆಯಲ್ಲಿ ಸಶಸ್ತ್ರ ದುಷ್ಕರ್ಮಿಗಳು ವಿಚಾರಣಾಧೀನ ಕೈದಿಯೋರ್ವನೊಂದಿಗೆ ಪರಾರಿಯಾಗಲು ಯತ್ನಿಸಿದ ಘಟನೆಯ ಬಳಿಕ ಖಾಲಿದ್ ಮತ್ತು ಸೈಫಿಯನ್ನು ಕೈಕೋಳ ತೊಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲು ನಿರ್ಧರಿಸಲಾಯಿತು ಎಂದು ಹೇಳಿದ್ದರು.

"ಆದರೆ ಕೈಕೋಳ ತೊಡಿಸಿ ಹಾಜರುಪಡಿಸಬೇಕೆಂಬ ಅಪೀಲಿನಲ್ಲಿ ಯಾವುದೇ ಹುರುಳಿಲ್ಲ, ದಿಲ್ಲಿ ಬಂದೀಖಾನೆ ನಿಯಮಗಳೂ ಈ ಕುರಿತು ಏನನ್ನೂ ಹೇಳಿಲ್ಲ" ಎಂದು ಹೇಳಿ ನ್ಯಾಯಾಲಯ ಅಪೀಲನ್ನು ವಜಾಗೊಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X