Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮನ್‍ಮುಲ್ ಹಾಲಿಗೆ ನೀರು ಮಿಶ್ರಣ ಆರೋಪ:...

ಮನ್‍ಮುಲ್ ಹಾಲಿಗೆ ನೀರು ಮಿಶ್ರಣ ಆರೋಪ: ಸಿಬಿಐ ತನಿಖೆ, ಅಧ್ಯಕ್ಷರ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ7 Jun 2021 5:48 PM IST
share
ಮನ್‍ಮುಲ್ ಹಾಲಿಗೆ ನೀರು ಮಿಶ್ರಣ ಆರೋಪ: ಸಿಬಿಐ ತನಿಖೆ, ಅಧ್ಯಕ್ಷರ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ಮಂಡ್ಯ, ಜೂ.7: ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿ(ಮನ್‍ಮುಲ್) ನಡೆದಿರುವ ಹಾಲಿಗೆ ನೀರು ಮಿಶ್ರಣ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಹಾಗೂ ಕಿಸಾನ್ ಕಾಂಗ್ರೆಸ್ ಘಟಕ ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ಒತ್ತಾಯಿಸಿದೆ.

ಸೋಮವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೇಶಹಳ್ಳಿ ಮೋಹನ್‍ ಕುಮಾರ್, ಕೆಲವು ವಿದ್ಯಾಮಾನಗಳನ್ನು ಗಮನಿಸಿದಾಗ ಆಡಳಿತ ಮಂಡಳಿಯೂ ಹಗರಣದಲ್ಲಿ ಶಾಮೀಲಾಗಿರುವ ಸಾಧ್ಯತೆಯಿದೆ ಎಂದು ಆರೋಪಿಸಿದರು.

ಹಾಲಿಗೆ ನೀರು ಮಿಶ್ರಣ ಮಾಡಿ ವಂಚನೆ ಮಾಡುತ್ತಿದ್ದ ಟ್ಯಾಂಕರ್ ಗಳ ಗುತ್ತಿಗೆದಾರರ ವಿರುದ್ಧ ಯಾವುದೇ ಕ್ರಮ ವಹಿಸಿಲ್ಲ. ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಸುತ್ತಿದ್ದೇವೆನ್ನುವುದು ಕೇವಲ ಕಣ್ಣೊರೆಸುವ ತಂತ್ರವಾಗಿದೆ ಎಂದು ಅವರು ದೂರಿದರು.

ಬೆಂಗಳೂರು, ತುಮಕೂರು ಒಕ್ಕೂಟಗಳಲ್ಲೂ ಸದರಿ ಗುತ್ತಿಗೆದಾರರು ವಂಚನೆ ನಡೆಸಿದ್ದು, ಅವರನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ. ಈ ಬಗ್ಗೆ ದಾಖಲಾತಿ ನೀಡಿದ್ದರೂ ಮನ್‍ಮುಲ್ ಅಧ್ಯಕ್ಷರು, ನಿರ್ದೇಶಕರು ಅದನ್ನು ನಿರಾಕರಿಸಿ ನಮ್ಮ ಮೇಲೆಯೇ ಮಾನನಷ್ಟ ಮೊಕದ್ದಮೆ ಬೆದರಿಕೆ ಹಾಕಿದ್ದಾರೆ ಎಂದು ಅವರು ಕಿಡಿಕಾರಿದರು.

ರೈತರು, ಹಾಲು ಉತ್ಪಾದಕರು, ಗ್ರಾಹಕರ ಹಿತದೃಷ್ಟಿಯಿಂದ ನಾವು ಪ್ರಕರಣದ ತನಿಖೆಗೆ ಒತ್ತಾಯಿಸಿದ್ದೇವೆ. ಇದರಲ್ಲಿ ಯಾವುದೇ ರಾಜಕಾರಣವಿಲ್ಲ. ಆದರೆ, ಜೆಡಿಎಸ್‍ನ ಶಾಸಕರೊಬ್ಬರು, ವಿಧಾನಪರಿಷತ್ ಸದಸ್ಯರೊಬ್ಬರು ಅನವಶ್ಯಕವಾಗಿ ನಮ್ಮನ್ನೇ ದೂರುವುದರ ಹಿಂದಿನ ಮರ್ಮವೇನು ಎಂದು ಅವರು ತರಾಟೆಗೆ ತೆಗೆದುಕೊಂಡರು.

52 ಟ್ಯಾಂಕರ್ ಗಳಿಗೆ ಟೆಂಡರ್ ಕರೆದು 40 ಟ್ಯಾಂಕರ್ ಗಳು ಟೆಂಡರ್ ಪ್ರಕ್ರಿಯೆ ಮೂಲಕ ಆಯ್ಕೆಯಾಗಿವೆ. ನಂತರ 30 ಟ್ಯಾಂಕರ್ ಗಳಿಗೆ ಟೆಂಡರ್ ಇಲ್ಲದೆ ಹಾಲು ಸರಬರಾಜು ಮಾಡುತ್ತಿವೆ. 4 ರಿಂದ 5 ನಿರ್ದೇಶಕರು ಬೇನಾಮಿ ಹೆಸರಿನಲ್ಲಿ ಟ್ಯಾಂಕರ್ ಬಿಟ್ಟಿದ್ದಾರೆ ಎಂದು ಅವರು ಹೇಳಿದರು.

ಪ್ರಕರಣವನ್ನು ಬಹಿರಂಗಪಡಿಸಿದವರು ಡಾ.ಮಂಜೇಶ್‍ಗೌಡರು, ಆದರೆ, ತಾವೇ ಬಯಲು ಮಾಡಿದ್ದೇವೆಂದು ಅಧ್ಯಕ್ಷರು, ನಿರ್ದೇಶಕರು ಹೇಳಿಕೊಳ್ಳುತ್ತಿದ್ದಾರೆ. ತಮಗೆ ಪ್ರಾಣ ಬೆದರಿಕೆ ಹಾಕಿದವರ ವಿರುದ್ಧ ಅಧ್ಯಕ್ಷರು ದೂರು ನೀಡಿಲ್ಲ. ಟ್ಯಾಂಕರ್ ಮಾಲಕರನ್ನು ಬಂಧಿಸಿಲ್ಲ. ಉಳಿದ ಟ್ಯಾಂಕರ್ ಗಳ ಪರಿಶೀಲನೆ ಆಗಿಲ್ಲ. ಆದ್ದರಿಂದ ಹಗರಣದಲ್ಲಿ ಆಡಳಿತ ಮಂಡಳಿ ಶಾಮೀಲಾಗಿದೆ ಎಂದು ಅವರು ದೂರಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಮಾತನಾಡಿ, ಯಾವುದೇ ಬೆದರಿಕೆಗೆ ನಾವು ಜಗ್ಗುವುದಿಲ್ಲ. ರೈತರ, ಹಾಲು ಉತ್ಪಾದಕರ, ಗ್ರಾಹಕರ ಹಿತವೇ ನಮ್ಮ ಗುರಿ. ಕೂಡಲೇ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು ರಾಜೀನಾಮೆ ನೀಡಬೇಕು. ಪ್ರಕರಣದ ಸಿಬಿಐ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಈ ವಿಚಾರದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಶಾಸಕರು ಮೌನವಾಗಿರುವುದು ಏಕೆ ಎಂದು ಪ್ರಶ್ನಿಸಿದ ಅವರು, ತಪ್ಪಿತಸ್ಥರಿಗೆ ಶಿಕ್ಷೆ ಆಗುವವರೆಗೂ ನಮ್ಮ ಹೋರಾಟ ನಿಲ್ಲದು. ಯಾವುದೇ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ ಎಂದು ಅವರು ತಿಳಿಸಿದರು.

ಜಿಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ, ರುದ್ರಪ್ಪ, ಸಿ.ಎಂ.ದ್ಯಾವಮ್ಮ, ಇತರ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X