Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜನ ಸಾಯುತ್ತಿರುವಾಗ ಅಧಿಕಾರದ ಆಸೆಗೆ...

ಜನ ಸಾಯುತ್ತಿರುವಾಗ ಅಧಿಕಾರದ ಆಸೆಗೆ ಚೆಲ್ಲಾಟವಾಡುತ್ತಿದ್ದಾರೆ: ಬಿಜೆಪಿ ನಾಯಕರ ವಿರುದ್ಧ ಡಿಕೆಶಿ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ7 Jun 2021 7:25 PM IST
share
ಜನ ಸಾಯುತ್ತಿರುವಾಗ ಅಧಿಕಾರದ ಆಸೆಗೆ ಚೆಲ್ಲಾಟವಾಡುತ್ತಿದ್ದಾರೆ: ಬಿಜೆಪಿ ನಾಯಕರ ವಿರುದ್ಧ ಡಿಕೆಶಿ ವಾಗ್ದಾಳಿ

ಬೆಂಗಳೂರು, ಜೂ. 7: `ಜನಸಾಮಾನ್ಯರು ಸಾಯುತ್ತಿರುವಾಗ ಬಿಜೆಪಿ ನಾಯಕರು ಅಧಿಕಾರದ ಆಸೆಗೆ ಚೆಲ್ಲಾಟವಾಡುತ್ತಿದ್ದಾರೆ. ಜನ ಕೊಟ್ಟಿರುವ ಅಧಿಕಾರವನ್ನು ಸಾಧ್ಯವಾದರೆ ನಡೆಸಲಿ, ಇಲ್ಲವೆ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿ ಕೆಳಗಿಳಿಯಿರಿ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಗುಡುಗಿದ್ದಾರೆ.

ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಜತೆಗೆ ಮಾತನಾಡಿದ ಅವರು, `ನನಗೆ ಬಂದಿರುವ ಮಾಹಿತಿ ಪ್ರಕಾರ ಕೆಲವು ಸಚಿವರು 14-15 ಮಠಗಳಿಗೆ ಭೇಟಿ ನೀಡಿದ್ದಾರೆ. ಯಾವ ಸಚಿವರು, ಯಾವ ಮಠಕ್ಕೆ ಹೋಗಿದ್ದರು, ಯಾವ ಸಚಿವರು ಲ್ಯಾಪ್‍ಟಾಪ್ ಸಮೇತ ತೆರಳಿದ್ದರು ಎಂದು ನನಗೆ ನಮ್ಮ ಪಕ್ಷದ ಕಾರ್ಯಕರ್ತರೇ ಕರೆ ಮಾಡಿ ಮಾಹಿತಿ ಕೊಟ್ಟಿದ್ದಾರೆ ಎಂದು ಹೇಳಿದರು.

ನಾನು ಈ ಮಾಹಿತಿ ಪರಿಶೀಲಿಸಿದ್ದು, ಮಠದವರೇ ಅವರಿಗೆ ಬುದ್ಧಿವಾದ ಹೇಳಲಿ. ಯಾವ ಬುದ್ಧಿಮಾತು ಹೇಳಬೇಕು ಎಂಬುದು ಅವರಿಗೆ ಬಿಟ್ಟದ್ದು, ಅದನ್ನು ಹೇಳುವುದು ನನ್ನ ಕೆಲಸವಲ್ಲ. ಈ ಮಧ್ಯೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು 65 ಜನ ಶಾಸಕರು ಮುಖ್ಯಮಂತ್ರಿ ಬೆಂಬಲ ಪತ್ರಕ್ಕೆ ಸಹಿ ಹಾಕಿರುವುದಾಗಿ ಹೇಳಿದ್ದಾರೆ. ಅವರಿಗೆ ಗೌರವ ಇರುವುದು ನಿಜವೇ ಆದರೆ, ಆ ಶಾಸಕರ ಪಟ್ಟಿ ಬಿಡುಗಡೆ ಮಾಡಲಿ. ಅನಂತರ ನಾವು ಮುಂದಿನ ಪ್ರತಿಕ್ರಿಯೆ ನೀಡುತ್ತೇವೆ ಎಂದು ಶಿವಕುಮಾರ್ ಆಕ್ರೋಶ ಹೊರಹಾಕಿದರು.

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ರಾಜ್ಯಪಾಲರಿಗೆ ಪತ್ರ ಬರೆದಿದ್ದನ್ನೂ ನಾವು ನೋಡಿದ್ದೇವೆ. ಮಠಗಳಿಗೆ ಹೋಗಿದ್ದನ್ನೂ ನೋಡಿದ್ದೇವೆ, ಸಿಡಿ ವಿಚಾರ ನೋಡಿದ್ದೇವೆ. ಯಾರು ಯಾವ ಹೇಳಿಕೆ ಕೊಟ್ಟಿದ್ದಾರೆ, ಅದಕ್ಕೆ ಹೇಗೆ ಉಲ್ಟಾ ಹೊಡೆದಿದ್ದಾರೆಂಬುದನ್ನೂ ನೋಡಿದ್ದೇವೆ. ಇವರಿಗೆ ಚೆಲ್ಲಾಟ ಜನರಿಗೆ ಪ್ರಾಣ ಸಂಕಟ. ಇವರು ಜನರನ್ನು ರಕ್ಷಿಸುವ ಬದಲು, ಹೆಣಗಳ ಬೂದಿ ನೀಡುತ್ತಿದ್ದಾರೆ' ಎಂದು ಶಿವಕುಮಾರ್ ಕಿಡಿಕಾರಿದರು.

ಕಚ್ಚಾಟದಲ್ಲಿ ಹಸ್ತಕ್ಷೇಪವಿಲ್ಲ

ಈ ಸರಕಾರದ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ಶಾಸಕರು ಬೀದಿಗಳಲ್ಲಿ ಕಚ್ಚಾಡುತ್ತಿದ್ದಾರೆ. ಸಚಿವರ ಮಧ್ಯೆ ಭಿನ್ನಾಭಿಪ್ರಾಯ ನೋಡಿದ್ದೇವೆ. ಒಬ್ಬರು ಕೋವಿಡ್ ಲಸಿಕೆಗೆ ಜಾಗತಿಕ ಟೆಂಡರ್ ಎಂದರೆ, ಆರೋಗ್ಯ ಸಚಿವರು ಈ ಬಗ್ಗೆ ಗೊತ್ತಿಲ್ಲ ಎಂದಿದ್ದಾರೆ. ಅಧಿಕಾರಿಗಳು ಕಚ್ಚಾಡುತ್ತಿದ್ದಾರೆ. ಏನೆಲ್ಲ ಸಮಸ್ಯೆಗಳಿಂದ ಜನ ನರಳುತ್ತಿರುವಾಗ ಇವರು ಅಧಿಕಾರಕ್ಕಾಗಿ ಕಚ್ಚಾಡುತ್ತಿದ್ದಾರೆ. ನಾವು ಅವರ ಕಚ್ಚಾಟದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಆದರೆ ಸರಕಾರ ಕೋವಿಡ್ ಸಮಸ್ಯೆ ಬಗೆಹರಿಸಲಿ. ಅಧಿಕಾರಿಗಳ ಆಡಿಯೋ ಸಾಕ್ಷಿಯನ್ನು ಬಿಜೆಪಿ ನಾಯಕರು ನ್ಯಾಯಾಲಯಕ್ಕೆ ನೀಡಲಿ.

-ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X