Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅನರ್ಹ ಪಡಿತರ ಚೀಟಿ ಹಿಂದಿರುಗಿಸಲು ಜೂ.30...

ಅನರ್ಹ ಪಡಿತರ ಚೀಟಿ ಹಿಂದಿರುಗಿಸಲು ಜೂ.30 ಕೊನೆ ದಿನ: ಉಡುಪಿ ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ7 Jun 2021 7:53 PM IST
share
ಅನರ್ಹ ಪಡಿತರ ಚೀಟಿ ಹಿಂದಿರುಗಿಸಲು ಜೂ.30 ಕೊನೆ ದಿನ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ಜೂ.7: 2011ರ ಜನಗಣತಿಯಂತೆ ಜಿಲ್ಲೆಯಲ್ಲಿ ಒಟ್ಟು 2,95,984 ಕುಟುಂಬಗಳು ದಾಖಲಾಗಿದ್ದು, ಪ್ರಸ್ತುತ ಮೇ ಅಂತ್ಯದವರೆಗೆ 28,264 ಅಂತ್ಯೋದಯ ಅನ್ನ ಮತ್ತು 1,61,987 ಆದ್ಯತಾ ಸೇರಿ ಒಟ್ಟು 1,90,251 ಕುಟುಂಬಗಳಿಗೆ ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹಾಗೂ 1,05,733 ಕುಟುಂಬಗಳಿಗೆ ಆದ್ಯತೇತರ (ಎಪಿಎಲ್) ಪಡಿತರ ಚೀಟಿ ನೀಡಲಾಗಿದೆ.

ವೇತನವನ್ನು ಗಣನೆಗೆ ತೆಗೆದುಕೊಳ್ಳದ ಸರಕಾರಿ ಅಥವಾ ಸರಕಾರದಿಂದ ಅನುದಾನ ಪಡೆಯುತ್ತಿರುವ ಸಂಸ್ಥೆಗಳು ಹಾಗೂ ಸರಕಾರಿ ಪ್ರಾಯೋಜಿತ, ಸರಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿಗಳು, ನಿಗಮಗಳು, ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್ ಹಾಗೂ ವೃತ್ತಿ ತೆರಿಗೆ ಪಾವತಿಸುವ ಕುಟುಂಬಗಳು, ಗ್ರಾಮೀಣ ಭಾಗದಲ್ಲಿ ಮೂರು ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತು ಪಡಿಸಿ ನಗರ ಪ್ರದೇಶದಲ್ಲಿ ಸಾವಿರ ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಸ್ವಂತ ಓಡಿಸುವ ವಾಣಿಜ್ಯ ವಾಹನವಾದ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನವನ್ನು ಹೊಂದಿರುವ ಕುಟುಂಬಗಳು ಹಾಗೂ ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷರೂ. ಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು ಅಂತ್ಯೋದಯ ಅನ್ನ ಮತ್ತು ಆದ್ಯತಾ ಪಡಿತರ (ಬಿಪಿಎಲ್) ಪಡೆಯುವ ಅರ್ಹತೆ ಹೊಂದಿರುವುದಿಲ್ಲ.
ಆರ್ಥಿಕವಾಗಿ ಸಬಲರು ಮತ್ತು ಇತರ ಅನರ್ಹರು ಹೊಂದಿರುವ ಅಂತ್ಯೋದಯ ಅನ್ನ ಮತ್ತು ಆದ್ಯತಾ (ಬಿಪಿಎಲ್) ಪಡಿತರ ಚೀಟಿಗಳನ್ನು ಹಿಂದಿರುಗಿಸಿ, ಆದ್ಯತೇತರ ಪಡಿತರ ಚೀಟಿಯನ್ನು ಈಗಾಗಲೇ ಪಡೆದಿದ್ದಾರೆ.

ಸರಕಾರ ನಿಗದಿ ಪಡಿಸಿರುವ ಮಾನದಂಡಗಳಿಗೆ ವಿರುದ್ಧವಾಗಿ ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹೊಂದಿರುವವರು ಜೂನ್ 30ರೊಳಗೆ ಆಯಾ ತಾಲೂಕಿನ ತಹಶೀಲ್ದಾರರಿಗೆ ಅದನ್ನು ಒಪ್ಪಿಸಿ ಆದ್ಯತೇತರ (ಎಪಿಎಲ್) ಪಡಿತರ ಚೀಟಿಯನ್ನು ಪಡೆದು ಕೊಳ್ಳಬೇಕು.

ತಪ್ಪಿದಲ್ಲಿ ಅಕ್ರಮ ಪಡಿತರ ಚೀಟಿ ಹೊಂದಿರುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955, ಕರ್ನಾಟಕ ಅನಧಿಕೃತ ಪಡಿತರ ಚೀಟಿ ಹೊಂದುವುದರ ತಡೆ ಆದೇಶ 1977 ಹಾಗೂ ಐಪಿಸಿ ಕಲಂಗಳಡಿಯಲ್ಲಿ ಕ್ರಮ ಜರುಗಿಸಿ, ಹಂಚಿಕೆ ಪಡೆದ ಆಹಾರ ಧಾನ್ಯಗಳ ಮಾರುಕಟ್ಟೆ ವೌಲ್ಯವನ್ನು ವಸೂಲಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X