Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತುರ್ತು ಪರಿಸ್ಥಿತಿಗಳ ನಿರ್ವಹಣೆಗೆ...

ತುರ್ತು ಪರಿಸ್ಥಿತಿಗಳ ನಿರ್ವಹಣೆಗೆ ಸಿದ್ಧತೆ ಮಾಡಿಕೊಳ್ಳಿ: ಅಧಿಕಾರಿಗಳಿಗೆ ದ.ಕ. ಡಿಸಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ7 Jun 2021 8:13 PM IST
share
ತುರ್ತು ಪರಿಸ್ಥಿತಿಗಳ ನಿರ್ವಹಣೆಗೆ ಸಿದ್ಧತೆ ಮಾಡಿಕೊಳ್ಳಿ: ಅಧಿಕಾರಿಗಳಿಗೆ ದ.ಕ. ಡಿಸಿ ಸೂಚನೆ

ಮಂಗಳೂರು, ಜೂ. 7: ಪ್ರವಾಹ, ಅತಿವೃಷ್ಟಿ ಸಹಿತ ತುರ್ತು ಸಂದರ್ಭದಲ್ಲಿ ಜನರ ರಕ್ಷಣೆ ಹಾಗೂ ಪುನರ್ವಸತಿಗೆ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತನ್ನ ಅಧೀನ ಅಧಿಕಾರಿ ಗಳಿಗೆ ಸೂಚಿಸಿದರು.

ಮಂಗಾರು ಪರಿಸ್ಥಿತಿಯನ್ನು ಎದುರಿಸಲು ಕೈಗೊಳ್ಳಬೇಕಾದ ಪೂರ್ವ ಸಿದ್ಧತಾ ಕ್ರಮಗಳ ಕುರಿತು ದ.ಕ.ಜಿಲ್ಲಾಧಿಕಾರಿಗಳ ಕಚೇರಿ ಯಲ್ಲಿ ಸೋಮವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಂಗಾರು ಮಳೆಯು ತೀವ್ರಗೊಂಡು ಜಿಲ್ಲೆಯಲ್ಲಿ ಯಾವುದೇ ಪ್ರಾಣ ಹಾನಿಯಾಗದಂತೆ ಮತ್ತು ಸಾರ್ವಜನಿಕ ಆಸ್ತಿ-ಪಾಸ್ತಿ, ಖಾಸಗಿ ಸೊತ್ತುಗಳಿಗೆ ಹಾನಿ ಉಂಟಾಗದಂತೆ ಎಲ್ಲಾ ರೀತಿಯ ಸಿದ್ಧತೆ ನಡೆಸಬೇಕು. ಜೂ.14ರ ಬಳಿಕ ಮುಂಗಾರು ಮಳೆ ಯಾಗುವ ಸಾಧ್ಯತೆ ಇದೆ. ಮಳೆ ಹಾನಿಗೊಳಗಾದ ಕುಟುಂಬಗಳಿಗೆ ಸರಿಯಾದ ರೀತಿಯಲ್ಲಿ ಪರಿಹಾರ ಒದಗಿಸಬೇಕು.ಅಂತಹ ಸಂದರ್ಭದಲ್ಲಿ ಯಾವುದೇ ಅರ್ಹ ವ್ಯಕ್ತಿಯು ಪರಿಹಾರದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಮಳೆಯಿಂದ ತೊಂದರೆಗೊಳಗಾಗುವ ಸಾಧ್ಯತೆ ಕಂಡುಬಂದ ತಕ್ಷಣ ಅಂತಹ ಕುಟುಂಬಗಳನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಬೇಕು.ಅವರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಕೋವಿಡ್ ಸೋಂಕಿತರಿದ್ದಲ್ಲಿ ಅವರನ್ನು ಕೂಡ ಕಡ್ಡಾಯವಾಗಿ ಕೋವಿಡ್‌ಕೇರ್ ಸೆಂಟರ್‌ಗಳಿಗೆ ಸೇರಿಸಬೇಕು ಎಂದರು.

ಹೋಮ್‌ಗಾರ್ಡ್ ಕಮಾಂಡೆಂಟ್ ಸಮುದ್ರದ ತೀರದ ಜವಾಬ್ದಾರಿಯನ್ನು ನೋಡಿಕೊಳ್ಳಬೇಕು. ಸಾರ್ವಜನಿಕರಿಗೆ ನೆರೆ ಹಾವಳಿಯ ಕುರಿತು ಅಣಕು ಪ್ರದರ್ಶನಗಳನ್ನು ಮಾಡುವ ಮೂಲಕ ಜನ ಜಾಗೃತಿಯನ್ನು ಮೂಡಿಸಬೇಕು ಎಂದು ಹೇಳಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಒಳ ಚರಂಡಿಗಳು ಮತ್ತು ಹೊಂಡಗಳ ಹೂಳೆತ್ತಬೇಕು. ಮಳೆ ನೀರು ತುಂಬಿ ಚರಂಡಿಯ ಅಕ್ಕಪಕ್ಕದ ಮನೆಯೊಳಗೆ ನೀರು ನುಗ್ಗದಂತೆ ನೋಡಿಕೊಳ್ಳಬೇಕು ಎಂದ ಡಿಸಿ, ಗ್ರಾಮೀಣಾಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ವಿಪತ್ತು ನಿರ್ವಹಣಾ ನೋಡಲ್ ಅಧಿಕಾರಿಗಳು ನೆರೆಹಾವಳಿಯಿಂದ ಹಾನಿಗೊಳಗಾಗುವ ಪ್ರದೇಶಗಳನ್ನು ಗುರುತಿಸಿ, ನೆರೆ ಹಾವಳಿಯಾದಾಗ ಅಲ್ಲಿ ವಾಸಿಸುವ ಕುಟುಂಬಗಳನ್ನು ಆದಷ್ಟು ಶೀಘ್ರವಾಗಿ ಕಾಳಜಿ ಕೇಂದ್ರಗಳಿಗೆ ವರ್ಗಾಯಿಸ ಬೇಕು ಎಂದರು.

ಅರಣ್ಯ ಮತ್ತು ಮೆಸ್ಕಾಂ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದ ಡಿಸಿ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿ ಗಳು ಮಳೆಹಾನಿಗೊಳಗಾದ ಕೃಷಿ ಭೂಮಿಯ ಬಗ್ಗೆ ಜಿಲ್ಲಾಡಳಿತಕ್ಕೆ ಪ್ರತಿದಿನ ವರದಿ ನೀಡಬೇಕು ಎಂದು ಡಿಸಿ ಸೂಚಿಸಿದರು.

ಸಭೆಯಲ್ಲಿ ದ.ಕ.ಜಿಲ್ಲಾ ಎಸ್ಪಿ ಋಷಿಕೇಶ್ ಸೋನಾವಣೆ, ಪ್ರೊಬೆೆಷನರಿ ಐಎಎಸ್ ಅಧಿಕಾರಿ ಅಕ್ರಮ್ ಷಾ, ಅಪರ ಜಿಲ್ಲಾಧಿಕಾರಿ ಪ್ರಜ್ಞಾ ಅಮ್ಮೆಂಬಳ, ಡಿಸಿಪಿ ಹರಿರಾಂ ಶಂಕರ್, ಮಂಗಳೂರು ಉಪ ವಿಭಾಗದ ಸಹಾಯಕ ಆಯುಕ್ತ ಮದನ್ ಮೋಹನ್, ಮನಪಾ ಆಯುಕ್ತ ಅಕ್ಷಯ್ ಶ್ರೀಧರ್, ನಗರಾಭಿವೃದ್ಧಿ ಯೋಜನಾ ಕೋಶದ ನಿರ್ದೇಶಕಿ ಗಾಯತ್ರಿ ನಾಯಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಅಧಿಕಾರಿ ಡಾ. ಕಿಶೋರ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಪಂಪ್‌ವೆಲ್ ವೃತ್ತ ಹಾಗೂ ತೊಕ್ಕೊಟ್ಟು ರಸ್ತೆಯ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಗದಂತೆ ನೀರನ್ನು ತಕ್ಷಣ ಅಲ್ಲಿಂದ ಸಾಗಿಸಲು ಅಗತ್ಯವಿರುವ ಪಂಪ್‌ಗಳ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು ಎಂದು ಡಿಸಿ ಸೂಚನೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X