ಅರ್ಜಿ ಆಹ್ವಾನ
ಮಂಗಳೂರು, ಜೂ.7:ಕೃಷಿ ಇಲಾಖೆಯು ‘ಆತ್ಮ ನಿರ್ಭರ ಭಾರತ ಅಭಿಯಾನ’ದ ಭಾಗವಾಗಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯನ್ನು ಹೊಸದಾಗಿ ಪ್ರಾರಂಭಿಸಿದೆ. ಈ ಯೋಜನೆಯ ಅನುಷ್ಠಾನ ದಲ್ಲಿ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಹಾರ ತಂತ್ರಜ್ಞಾನ/ಆಹಾರ ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಪಡೆದಿರುವ, ಆಹಾರ ಸಂಸ್ಕರಣಾ ಕೈಗಾರಿಕೆಗಳಿಗೆ ತಂತ್ರಜ್ಞಾನ ಉನ್ನತೀಕರಣ, ಹೊಸ ಉತ್ಪನ್ನ ಅಭಿವೃದ್ಧಿ, ಗುಣಮಟ್ಟ ಖಾತ್ರಿ, ಆಹಾರ ಭದ್ರತಾ ನಿರ್ವಹಣೆಗೆ ಸಲಹಾ ಸೇವೆಗಳನ್ನು ಒದಗಿಸುವ ಕುರಿತು 3-5 ವರ್ಷಗಳ ಅನುಭವವಿರಬೇಕು. ಅರ್ಜಿ ಸಲ್ಲಿಸಲು ಜೂ.10 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಮಾಹಿತಿ ಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲಿ ಪ್ರಕಟನೆ ತಿಳಿಸಿದೆ.
Next Story





