Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಕ್ಕಳ ಕಳ್ಳ ಸಾಗಾಣಿಕೆ ಪ್ರಕರಣ: ಶಿಕ್ಷಣ...

ಮಕ್ಕಳ ಕಳ್ಳ ಸಾಗಾಣಿಕೆ ಪ್ರಕರಣ: ಶಿಕ್ಷಣ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಆದೇಶ

ವಾರ್ತಾಭಾರತಿವಾರ್ತಾಭಾರತಿ7 Jun 2021 9:46 PM IST
share
ಮಕ್ಕಳ ಕಳ್ಳ ಸಾಗಾಣಿಕೆ ಪ್ರಕರಣ: ಶಿಕ್ಷಣ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು, ಜೂ.7: ಮಕ್ಕಳ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಗರತ್ನ ಅವರ ವಿರುದ್ಧ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಆದೇಶ ನೀಡಿದೆ.

ಲೆಟ್ಜ್ ಕಿಡ್ಸ್ ಫೌಂಡೇಶನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಸರಕಾರ ತಕ್ಷಣವೇ ಸೂಕ್ತ ಕ್ರಮ ಕೈಗೊಂಡು ಜೂ.18ರೊಳಗೆ ನ್ಯಾಯಪೀಠಕ್ಕೆ ವರದಿ ನೀಡಬೇಕು ಎಂದು ಆದೇಶಿಸಿತು.

ಪ್ರಾಥಮಿಕ ಶಿಕ್ಷಣ ಇಲಾಖೆ ನಿರ್ದೇಶಕರಾದ ಪ್ರಸನ್ನಕುಮಾರ್ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ನಾಗರತ್ನ ಅವರು ಸರಯೂ ಚಾರಿಟೇಬಲ್ ಟ್ರಸ್ಟ್ ನಡೆಸುತ್ತಿರುವ ಬಗ್ಗೆ ಇಲಾಖೆಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ಹೇಳಿದ್ದಾರೆ. ನಾಗರತ್ನ ಅಕ್ರಮವಾಗಿ ಟ್ರಸ್ಟ್ ಅನ್ನು ಸರಕಾರಿ ಶಾಲೆ ಆವರಣದಲ್ಲಿ ನಡೆಸುತ್ತಿದ್ದಾರೆ. ಹೀಗಾಗಿ, ಸರಕಾರಿ ಸೇವೆಯಲ್ಲಿರುವ ನಾಗರತ್ನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿತು.

ಏನಿದು ಪ್ರಕರಣ: ವಿಜಯನಗರದಲ್ಲಿ ಬಿಇಒ ಆಗಿ ಕೆಲಸ ಮಾಡುತ್ತಿದ್ದ, ನಂತರ ಬೆಂಗಳೂರು ನಗರ ಜಿಲ್ಲಾ ಪಂಚಾಯತಿಯ ಮಧ್ಯಾಹ್ನದ ಬಿಸಿಯೂಟ ವಿಭಾಗಕ್ಕೆ ವರ್ಗಾವಣೆಗೊಂಡಿದ್ದ ನಾಗರತ್ನ ಎಂಬುವವರು ನಡೆಸುತ್ತಿದ್ದ ಸರಯೂ ಚಾರಿಟಬಲ್ ಟ್ರಸ್ಟ್ ನ ನಾಲ್ಕು ಮಕ್ಕಳು ತಮ್ಮ ಪೋಷಕರ ಜತೆ ಮಧ್ಯಪ್ರದೇಶಕ್ಕೆ ತೆರಳಿದವರು ಪುನಃ ಬಂದಿಲ್ಲ ಎಂಬ ಮಾಹಿತಿ ಕಾನೂನು ಸೇವಾ ಪ್ರಾಧಿಕಾರಕ್ಕೆ ದೊರಕಿತು.

ಕಾನೂನು ಸೇವಾ ಪ್ರಾಧಿಕಾರವು ಮಧ್ಯಪ್ರದೇಶದ ಕಾನೂನು ಪ್ರಾಧಿಕಾರವನ್ನು ಸಂಪರ್ಕಿಸಿ ಮಕ್ಕಳ ಪತ್ತೆಗೆ ಮುಂದಾಯಿತು. ಆಗ ದೊರೆತ ಮಕ್ಕಳು, ಸರಯೂ ಟ್ರಸ್ಟ್ ನಲ್ಲಿ ತಮ್ಮನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿತ್ತು ಎಂಬ ಮಾಹಿತಿ ತಿಳಿಸಿದರು.

ಕೂಡಲೇ ಪ್ರಾಧಿಕಾರದ ಸದಸ್ಯರು ವಿಜಯನಗರದ ಸರಯೂ ಟ್ರಸ್ಟ್ ಗೆ ಭೇಟಿ ನೀಡಿ ಪರಿಶೀಲಿಸಿದಾಗ ಕಳೆದ 8 ವರ್ಷದಿಂದ ವಿಜಯನಗರ ಭಾಗದಲ್ಲಿ ಭಿಕ್ಷಾಟನೆ ಮತ್ತು ಬೀದಿ ಬದಿ ಆಟಿಕೆಗಳ ಮಾರಾಟದಲ್ಲಿ ತೊಡಗಿದ್ದ 33 ಮಕ್ಕಳನ್ನು ನಿಯಂತ್ರಿಸುತ್ತಿದ್ದ ಅಂಶ ಬಯಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X