ಮಂಗಳವಾರ ಪ್ರಧಾನಿಯನ್ನು ಭೇಟಿಯಾಗಲಿರುವ ಉದ್ಧವ್ ಠಾಕ್ರೆ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಂಗಳವಾರ ದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ಹೇಳಿವೆ.
ಮಂಗಳವಾರ ಸಂಜೆ 5 ಗಂಟೆಗೆ ಪ್ರಧಾನಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದು ಅದಕ್ಕೂ ಮುನ್ನ ಠಾಕ್ರೆ ಅವರನ್ನು ಭೇಟಿಯಾಗುವ ಕಾರ್ಯಕ್ರಮವಿದೆ. ರಾಜ್ಯದಲ್ಲಿ ಕೊರೋನ ಸೋಂಕಿನ ಸ್ಥಿತಿಯ ಬಗ್ಗೆ ಅವರು ಪ್ರಧಾನಿಗೆ ಮಾಹಿತಿ ನೀಡಲಿದ್ದಾರೆ ಎಂದು ವರದಿಯಾಗಿದೆ.
ಈ ಮಧ್ಯೆ ಮಹಾರಾಷ್ಟ್ರದಲ್ಲಿ ಕೊರೋನ ಸೋಂಕಿನ ಪ್ರಕರಣ ಇಳಿಮುಖಗೊಂಡಿರುವ ಹಿನ್ನೆಲೆಯಲ್ಲಿ ಸೋಮವಾರ(ಜೂ.7)ರಿಂದ ಅನ್ವಯವಾಗುವಂತೆ 5 ಹಂತಗಳ ಅನ್ಲಾಕ್ ಪ್ರಕ್ರಿಯೆಯನ್ನು ರಾಜ್ಯ ಸರಕಾರ ಘೋಷಿಸಿದೆ.
Next Story