Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಹಾಯಧನವನ್ನು ಸಾಲ ಖಾತೆಗೆ ಹೊಂದಾಣಿಕೆ...

ಸಹಾಯಧನವನ್ನು ಸಾಲ ಖಾತೆಗೆ ಹೊಂದಾಣಿಕೆ ಮಾಡದಂತೆ ಬ್ಯಾಂಕುಗಳಿಗೆ ಸಿಎಂ ಸೂಚನೆ

ಬೀದಿಬದಿ ವ್ಯಾಪಾರಿಗಳಿಗೆ ಸಹಾಯಧನ ವಿತರಣೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ8 Jun 2021 1:33 PM IST
share
ಸಹಾಯಧನವನ್ನು ಸಾಲ ಖಾತೆಗೆ ಹೊಂದಾಣಿಕೆ ಮಾಡದಂತೆ ಬ್ಯಾಂಕುಗಳಿಗೆ ಸಿಎಂ ಸೂಚನೆ

ಬೆಂಗಳೂರು, ಜೂ.8: ಬೀದಿಬದಿ ವ್ಯಾಪಾರಿಗಳಿಗೆ ಕೋವಿಡ್ 19ರ 2ನೇ ಅಲೆಯ ಪರಿಹಾರ ಪ್ಯಾಕೇಜ್‍ನಡಿ ಘೋಷಿಸಿದ ತಲಾ ಎರಡು ಸಾವಿರ ರೂ.ಗಳ ಸಹಾಯಧನ ವರ್ಗಾವಣೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಚಾಲನೆ ನೀಡಿದರು.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ದೀನ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ನೋಂದಾಯಿಸಿರುವ ಈ ಸಹಾಯಧನ ಲಭಿಸಲಿದೆ.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ, ಇದು ಕೋವಿಡ್-19ರಿಂದ ಸಂಕಷ್ಟಕ್ಕೊಳಗಾದವರಿಗೆ ಮಾನವೀಯ ನೆಲೆಯಲ್ಲಿ ಸ್ಪಂದಿಸುವ ನಮ್ಮ ಸರ್ಕಾರದ ಒಂದು ಪ್ರಯತ್ನವಾಗಿದೆ. ಈ ಪ್ಯಾಕೇಜ್‍ನಡಿ ಬಿಡುಗಡೆ ಮಾಡಿರುವ ಸಹಾಯಧನವನ್ನು ಬೀದಿಬದಿ ವ್ಯಾಪಾರಿಗಳ ಯಾವುದೇ ಸಾಲಕ್ಕೆ ಸರಿದೂಗಿಸಬಾರದೆಂದು, ಈಗಾಗಲೇ ಸಂಬಂಧಿಸಿದ ಬ್ಯಾಂಕಿನವರಿಗೆ ನಿರ್ದೇಶನ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

 ನಗರ ಸ್ಥಳೀಯ ಸಂಸ್ಥೆಗಳಿಂದ ಸಮೀಕ್ಷೆಯ ಮೂಲಕ 2,16,439 ಬೀದಿಬದಿ ವ್ಯಾಪಾರಸ್ಥರನ್ನು ಗುರುತಿಸಲಾಗಿದೆ. ಇವರುಗಳಿಗೆ ಗುರುತಿನ ಚೀಟಿ ಮತ್ತು ಮಾರಾಟ ಪ್ರಮಾಣ ಪತ್ರವನ್ನು ವಿತರಿಸಿ, ಬೀದಿ ವ್ಯಾಪಾರ ಕೈಗೊಳ್ಳವ ಸ್ಥಳದಲ್ಲಿ ಮೂಲಭೂತ ಸೌಕರ್ಯವನ್ನು ಕಲ್ಪಿಸಲಾಗಿದೆ. ಅಂತೆಯೇ, ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯವನ್ನು ಪಡೆಯಲು ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ ಎಂದರು.

ಕೋವಿಡ್-19 ಮೊದಲನೇ ಅಲೆಯ ಸಂದರ್ಭದಲ್ಲಿ ಜೀವನೋಪಾಯ ನಿರ್ವಹಣೆಗೆ ಸಂಕಷ್ಟಕ್ಕೊಳಗಾದ ಬೀದಿಬದಿ ವ್ಯಾಪಾರಿಗಳಿಗೆ ಪ್ರಧಾನಮಂತ್ರಿ ಬೀದಿ ವ್ಯಾಪಾರಗಳ ಆತ್ಮನಿರ್ಭರ್ ನಿಧಿ ಯೋಜನೆಯಡಿ  ಪ್ರತಿ ಬೀದಿಬದಿ ವ್ಯಾಪಾರಿಗಳಿಗೆ ರೂ. 10,000 ವರೆಗೆ ಬ್ಯಾಂಕ್ ಮೂಲಕ ಕಿರುಸಾಲ ಸೌಲಭ್ಯವನ್ನು ಒದಗಿಸಲಾಗಿದೆ. ಈ ಯೋಜನೆಯಡಿ ರೂ. 107.92 ಕೋಟಿಗಳಷ್ಟು ಸಾಲವನ್ನು ಈವರೆಗೆ ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ರಾಜ್ಯದಲ್ಲಿ ಕೋವಿಡ್-19ರ 2ನೇ ಅಲೆಯ ಸಂದರ್ಭದಲ್ಲಿ ವಿಧಿಸಲಾದ ನಿರ್ಬಂಧಗಳಿಂದ ಸಂಕಷ್ಟಕ್ಕೊಳಗಾದ ಬೀದಿಬದಿ ವ್ಯಾಪಾರಿಗಳಿಗೆ ಮೇ 19ರಂದು ಸರ್ಕಾರದಿಂದ ವಿಶೇಷ ಪ್ಯಾಕೇಜ್‍ನಡಿ ತಲಾ 2,000 ರೂ. ಆರ್ಥಿಕ ನೆರವನ್ನು ಘೋಷಿಸಲಾಗಿತ್ತು. ಅದರಂತೆ, 2,16,439 ಫಲಾನುಭವಿಗಳ ಪೈಕಿ ಆಧಾರ ಜೋಡಣೆಯಾಗಿರುವ 1,91,684 ಫಲಾನುಭವಿಗಳ ಬ್ಯಾಂಕ್ ಖಾತೆಗೆ ಸಹಾಯಧನವನ್ನು ನೇರ ನಗದು ವರ್ಗಾವಣೆ (ಡಿಬಿಟಿ) ವಿಧಾನದ ಮೂಲಕ   ತಲಾ ರೂ. 2,000 ರಂತೆ ಒಟ್ಟು ಸಹಾಯಧನ ರೂ. 38.33 ಕೋಟಿಗಳನ್ನು ವರ್ಗಾಯಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ನುಡಿದರು.

ಉಳಿದಂತೆ, ಬ್ಯಾಂಕ್ ಖಾತೆಗೆ ಆಧಾರ ಜೋಡಣೆ ಆಗದೇ ಇರುವ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯನ್ನು ಮಾಡಿ, ಸಹಾಯಧನವನ್ನು ತ್ವರಿತವಾಗಿ ಬಿಡುಗಡೆ ಮಾಡಲು ಕ್ರಮ ವಹಿಸಲಾಗುವುದು. ಈ ಸಹಾಯಧನ ಪಡೆದುಕೊಳ್ಳಲು ನೋಂದಾಯಿತ ಬೀದಿಬದಿ ವ್ಯಾಪಾರಿಗಳು ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಎಂದರು.

ಇಂದು ಬೀದಿ ಬದಿ ವ್ಯಾಪಾರಿಗಳಿಗೆ ನೆರವು ನೀಡಲಾಗುತ್ತಿದೆ. ಶೀಘ್ರದಲ್ಲಿಯೇ ಪ್ಯಾಕೇಜ್ ಘೋಷಣೆಯಾದ ಇತರ ವರ್ಗಗಳಿಗೂ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಬೀದಿ ಬದಿ ವ್ಯಾಪಾರಿಗಳು ಕೋವಿಡ್ ಸೋಂಕಿಗೆ ಒಳಗಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ, ಅವರಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡಲು ಕ್ರಮ ವಹಿಸುವಂತೆ ನಗರ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ. ಬೆಂಗಳೂರು ಮಹಾನಗರದಲ್ಲಿ ಈ ಕಾರ್ಯಕ್ರಮಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದರು.

ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಮಾತನಾಡಿದರು.

ಈ ಸಂದರ್ಭದಲ್ಲಿ ಫಲಾನುಭವಿಗಳಾದ ನಂಜಪ್ಪ ಹಾಗೂ ಲಕ್ಷ್ಮಮ್ಮ ಅವರು ಪಿ.ಎಂ. ಸ್ವನಿಧಿ ಅಡಿ 10 ಸಾವಿರ ಸಾಲ ಸೌಲಭ್ಯ ಹಾಗೂ ಎರಡನೇ ಅಲೆ ಸಂದರ್ಭದಲ್ಲಿ ನೀಡಲಾಗುತ್ತಿರುವ 2 ಸಾವಿರ ರೂ. ನೆರವಿನಿಂದ ಅನುಕೂಲವಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಇ-ಆಡಳಿತ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಾಜೀವ್ ಚಾವ್ಲಾ, ಮುಖ್ಯಮಂತ್ರಿಯವರ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ನಿರ್ದೇಶಕ ಎನ್. ಮಂಜುಶ್ರೀ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X