ಸಿದ್ದರಾಮಯ್ಯರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಡಿ.ಕೆ.ಶಿವಕುಮಾರ್

Photo: Twitter.com/siddaramaiah
ಬೆಂಗಳೂರು, ಜೂ.8: ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ, ಸೋಮವಾರ ಬಿಡುಗಡೆಯಾದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್ ಆರೋಗ್ಯ ವಿಚಾರಿಸಿ ಕೆಲ ಕಾಲ ಮಾತುಕತೆ ನಡೆಸಿದರು.
''ಪಕ್ಷದ ಗೌರವಾನ್ವಿತ ಸಹೋದ್ಯೋಗಿ ಮತ್ತು ಆಪ್ತರಾದ ಸಿದ್ದರಾಮಯ್ಯನವರನ್ನು ಭೇಟಿಯಾದೆ. ಅವರು ಆಸ್ಪತ್ರೆಯಿಂದ ಹಿಂದಿರುಗಿ, ಕರ್ನಾಟಕದ ಜನರ ಸೇವೆಯಲ್ಲಿ ತೊಡಗಿಕೊಳ್ಳಲು ಶ್ರಮಿಸುತ್ತಿರುವುದು ಸಂತಸದ ವಿಷಯ. ಲಸಿಕಾ ಅಭಿಯಾನ ಚುರುಕುಗೊಳಿಸುವ ಬಗ್ಗೆ ಮತ್ತು ನಾಡಿನಲ್ಲಿ ಹೆಚ್ಚುತ್ತಿರುವ ಆರ್ಥಿಕ ಸಂಕಷ್ಟದ ಬಗ್ಗೆ ಸುದೀರ್ಘ ಚರ್ಚೆ ನಡೆಸಿದೆವು'' ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
Next Story





