Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆಶಾ ಕಾರ್ಯಕರ್ತೆಯರೊಂದಿಗೆ ಮುಖ್ಯಮಂತ್ರಿ...

ಆಶಾ ಕಾರ್ಯಕರ್ತೆಯರೊಂದಿಗೆ ಮುಖ್ಯಮಂತ್ರಿ ಸಂವಾದ: ಕೋವಿಡ್19 ನಿರ್ವಹಣೆಗೆ ಮೆಚ್ಚುಗೆ

ವಾರ್ತಾಭಾರತಿವಾರ್ತಾಭಾರತಿ8 Jun 2021 4:15 PM IST
share
ಆಶಾ ಕಾರ್ಯಕರ್ತೆಯರೊಂದಿಗೆ ಮುಖ್ಯಮಂತ್ರಿ ಸಂವಾದ: ಕೋವಿಡ್19 ನಿರ್ವಹಣೆಗೆ ಮೆಚ್ಚುಗೆ

ಬೆಂಗಳೂರು, ಜೂ.8: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಆಶಾ ಕಾರ್ಯಕರ್ತೆಯರೊಂದಿಗೆ ವಿಡಿಯೋ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ಕೋವಿಡ್ 19 ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ಮುಕ್ತ ಕಂಠದಿಂದ ಶ್ಲಾಘಿಸಿದರು.

ಆಶಾ ಕಾರ್ಯಕರ್ತೆಯರ ಪರಿಶ್ರಮ ಹಾಗೂ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯನಿರ್ವಹಿಸುವುದನ್ನು ಗಮನಿಸಿ, ಕೋವಿಡ್ 19 ಎರಡನೇ ಅಲೆಯ ಪರಿಹಾರ ಪ್ಯಾಕೇಜ್ ನಡಿ 3 ಸಾವಿರ ರೂ. ಸಹಾಯಧನ ಘೋಷಿಸಿರುವುದಾಗಿ ತಿಳಿಸಿದರು.

ವಿವಿಧ ಜಿಲ್ಲೆಗಳ ಆಶಾ ಕಾರ್ಯಕರ್ತೆಯರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಅವರ ಆರೋಗ್ಯದ ಸ್ಥಿತಿ ಗತಿ, ಕಾರ್ಯ ನಿರ್ವಹಣೆ, ಅವರ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳ ವಿವರ, ಸಾರ್ವಜನಿಕರು, ಮೇಲಾಧಿಕಾರಿಗಳ ಸಹಕಾರ ಮೊದಲಾದ ವಿಷಯಗಳ ಕುರಿತು ಚರ್ಚಿಸಿದರು.

ಕೋವಿಡ್ ನಿರ್ವಹಣೆಯ ಸಂದರ್ಭದಲ್ಲಿ ಮೊದಲಿಗೆ ಸಾರ್ವಜನಿಕರು ಭಯ ಭೀತರಾಗಿದ್ದರು. ಪರೀಕ್ಷೆ ಮಾಡಿಸಲು, ಲಸಿಕೆ ಹಾಕಿಸಿಕೊಳ್ಳಲು ಹಿಂಜರಿಯುತ್ತಿದ್ದರು. ಕೋವಿಡ್ ಸೋಂಕಿತರು ಕೋವಿಡ್ ಕೇರ್ ಸೆಂಟರುಗಳಿಗೆ ದಾಖಲಾಗಲು ಭಯ ಪಡುತ್ತಿದ್ದರು. ಆದರೆ ಇದೀಗ ಸಹಕರಿಸುತ್ತಿದ್ದಾರೆ ಎಂದು ಆಶಾ ಕಾರ್ಯಕರ್ತೆಯರು ತಮ್ಮ ಅನುಭವಗಳನ್ನು ಹಂಚಿಕೊಂಡರು.

ಲಸಿಕೆ ಹಾಕಿಸಲು ತಮ್ಮ ಗ್ರಾಮದ ಜನರ ಮನವೊಲಿಸಿ, ಮೇಲಾಧಿಕಾರಿಗಳ ಸಹಾಯದಿಂದ ವಾಹನ ವ್ಯವಸ್ಥೆ ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಕರೆದೊಯ್ದು ಲಸಿಕೆ ಹಾಕಿಸಿದ್ದನ್ನು ಸ್ಮರಿಸಿಕೊಂಡರು.

ಕೋವಿಡ್ ಪೀಡಿತರಾಗಿದ್ದ ಶಿವಮೊಗ್ಗ ಜಿಲ್ಲೆ ಮುಂಬಾರಿನ ಶಾರದಾ ಕೆ.ವಿ. ಕೋವಿಡ್ ಕೇರ್ ಸೆಂಟರಿನಿಂದಲೇ ಸಂವಾದದಲ್ಲಿ ಪಾಲ್ಗೊಂಡರು. ಕಳೆದ 15 ದಿನಗಳ ವರೆಗೆ ತಮ್ಮ ಗ್ರಾಮ ಕೋವಿಡ್ ಮುಕ್ತವಾಗಿತ್ತು. ಇದೀಗ ಏಳು ಪ್ರಕರಣಗಳು ಕಂಡು ಬಂದಿವೆ. ಇಬ್ಬರು ಹೋಂ ಐಸೊಲೇಷನ್ ನಲ್ಲಿದ್ದು, ಉಳಿದವರು ಕೋವಿಡ್ ಕೇರ್ ಸೆಂಟರಿನಲ್ಲಿ ದಾಖಲಾಗಿದ್ದಾರೆ ಎಂದು ವಿವರಿಸಿದರು.

ಜನರು ಲಸಿಕೆಯ ಸುರಕ್ಷತೆ ಬಗ್ಗೆ ಅನುಮಾನ ವ್ಯಕ್ತಪಡಿಸಿದಾಗ, ತಮ್ಮ ಪತಿಗೇ ಮೊದಲಿಗೆ ಲಸಿಕೆ ಕೊಡಿಸಿ, ಜನರಲ್ಲಿ ವಿಶ್ವಾಸ ಮೂಡಿಸಿದ ಅನುಭವವನ್ನು ರಾಮನಗರದ ಶಿವಲಿಂಗಮ್ಮ ಹಂಚಿಕೊಂಡರು.

ವಿಜಯಪುರ ಜಿಲ್ಲೆಯ ದೀಪಾ ಬಜ್ಜನವರ ಅವರು ಕೋವಿಡ್ ಕೇರ್ ಸೆಂಟರಿಗೆ ದಾಖಲಾಗಲು ಜನರು ಹಿಂದೇಟು ಹಾಕಿದ ಅನುಭವವನ್ನು ವಿವರಿಸಿದರು.

ಸಬ್ಬಮಂಗಲದ ರತ್ನಮ್ಮ ಅವರು, ಮನೆ ಮನೆಗೆ ಭೇಟಿ ನೀಡಿ ಅರಿವು ಮೂಡಿಸುವುದರೊಂದಿಗೆ ಸೋಂಕಿತರಿಗೆ ಪೌಷ್ಟಿಕ ಆಹಾರ ಸೇವಿಸುವಂತೆ ಮನವರಿಕೆ ಮಾಡುತ್ತಿರುವುದಾಗಿ ತಿಳಿಸಿದರು. ಕೊಪ್ಪಳ ಜಿಲ್ಲೆ ನವಲಿ ಗ್ರಾಮದ ಲಕ್ಷ್ಮವ್ವ ನಾಯಕ್, ತಮ್ಮ ಗ್ರಾಮದಲ್ಲಿ 60 ವರ್ಷ ಮೇಲ್ಪಟ್ಟ 120 ಜನರಲ್ಲಿ 115 ಜನರಿಗೆ ಲಸಿಕೆ ಹಾಕಿಸಿರುವುದಾಗಿ ತಿಳಿಸಿದರು.

ಬೆಳಗಾವಿ ಜಿಲ್ಲೆ ಸುರೇಬಾನದ ಶಾರದಾ ಮುದ್ದನ್ನವರ ಅವರು ಬಡಜನರ ಚಿಕಿತ್ಸೆಗೆ ದಾನಿಗಳಿಂದ ನೆರವು ದೊರಕಿಸುವ ಪ್ರಯತ್ನ ಮಾಡಿರುವುದನ್ನು ಮುಖ್ಯಮಂತ್ರಿ ಶ್ಲಾಘಿಸಿದರು.

ಸಂವಾದದ ಸಂದರ್ಭದಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಗ್ರಾಮಸ್ಥರಿಗೆ ಕೋವಿಡ್ ಲಸಿಕೆ ಸುರಕ್ಷಿತ ಎಂಬುದನ್ನು ಮನವರಿಕೆ ಮಾಡುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಹಾಕಿಸಬೇಕು. ಜೊತೆಗೆ, ಐ ಎಲ್ ಐ, ಸಾರಿ ಪ್ರಕರಣಗಳು ಕಂಡುಬಂದಲ್ಲಿ ಅವರಿಗೆ ಕೂಡಲೇ ಪರೀಕ್ಷೆ ಮಾಡಿಸಿ, ಚಿಕಿತ್ಸೆ ಒದಗಿಸಲು ಕ್ರಮ ವಹಿಸುವಂತೆ ಸಲಹೆ ನೀಡಿದರು.

ಧಾರವಾಡ ಜಿಲ್ಲೆ ಅಮ್ಮಿನಭಾವಿಯ ಪ್ರೇಮಾ ಪ್ರಕಾಶ್ ಕಬ್ಬೂರು, ದಕ್ಷಿಣ ಕನ್ನಡ ಜಿಲ್ಲೆ ಸುಲ್ಕೇರಿಯ ಹೇಮಲತಾ, ರಾಮನಗರ ಜಿಲ್ಲೆಯ ದೊಡ್ಡಗಂಗವಾಡಿಯ ಶಿವಲಿಂಗಮ್ಮ, ವಿಜಯಪುರ ಜಿಲ್ಲೆ ಕಂಬಾಗಿಯ ದೀಪಾ ಬಜ್ಜನವರ್, ಬೆಂಗಳೂರು ನಗರ ಜಿಲ್ಲೆ ಸಬ್ಬಮಂಗಲದ ರತ್ನಮ್ಮ, ಬಳ್ಳಾರಿ ಜಿಲ್ಲೆ ದಬ್ಬೂರಿನ ಪರಿಮಳಾ, ಶಿವಮೊಗ್ಗ ಜಿಲ್ಲೆ ಮುಂಬಾರಿನ ಶಾರದಾ ಕೆ.ವಿ., ಕೊಪ್ಪಳ ಜಿಲ್ಲೆ ನವಲಿಯ ಲಕ್ಷ್ಮವ್ವ ನಾಯಕ್, ರಾಯಚೂರು ಜಿಲ್ಲೆ ಗಣಮೂರಿನ ಇಂದಿರಾ, ಬೆಳಗಾವಿ ಜಿಲ್ಲೆ ಸುರೇಬಾನದ ಶಾರದಾ ಮುದ್ದನ್ನವರ ಅವರು ಮುಖ್ಯಮಂತ್ರಿಯೊಂದಿಗೆ ಸಂವಾದ ನಡೆಸಿದರು.

ಮುಖ್ಯಮಂತ್ರಿಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಮುಖ್ಯಮಂತ್ರಿಯ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಾ.ಕೆ.ವಿ. ತ್ರಿಲೋಕಚಂದ್ರ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X