ಸಿ.ಎಂ.ಉದಾಸಿ ಕನ್ನಡ ನಾಡಿನ ಅಪರೂಪದ ನೇತಾರ: ಸಿ.ಟಿ.ರವಿ

ಬೆಂಗಳೂರು, ಜೂ. 8: ಬಿಜೆಪಿಯ ಹಿರಿಯ ಶಾಸಕ ಮತ್ತು ಮಾಜಿ ಸಚಿವರೂ ಆದ ಸಿ.ಎಂ.ಉದಾಸಿ ಅವರ ನಿಧನದಿಂದ ಕನ್ನಡ ನಾಡು ಅಪರೂಪದ ನೇತಾರರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಸಜ್ಜನ ಮಾತ್ರವಲ್ಲದೆ, ಸರಳ ಬದುಕನ್ನು ತಮ್ಮದಾಗಿಸಿಕೊಂಡಿದ್ದ ಸಿ.ಎಂ.ಉದಾಸಿಯವರು ಅತ್ಯಂತ ಕ್ರಿಯಾಶೀಲ ರಾಜಕಾರಣಿಯಾಗಿದ್ದರು. ಅವರು ರಾಜ್ಯದ ಲೋಕೋಪಯೋಗಿ ಸಚಿವರಾಗಿಯೂ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿದ್ದರು. ಅಭಿವೃದ್ಧಿ ಪರ ಚಿಂತಕರಾಗಿದ್ದ ಅವರು ಹಾನಗಲ್ ಕ್ಷೇತ್ರದ ಅಭಿವೃದ್ಧಿಗೆ ವಿಶೇಷವಾಗಿ ಶ್ರಮಿಸಿದ್ದು, ಆ ಭಾಗದಲ್ಲಿ ಮಾತ್ರವಲ್ಲದೆ ರಾಜ್ಯದ ಅತ್ಯಂತ ಜನಪ್ರಿಯ ನಾಯಕರಾಗಿದ್ದರು ಎಂದು ಸಿ.ಟಿ.ರವಿ ಕಂಬನಿ ಮಿಡಿದ್ದಾರೆ.
Next Story





