ಪರಿಹಾರ ಧನಕ್ಕೆ ಅರ್ಜಿ ಆಹ್ವಾನ
ಮಂಗಳೂರು, ಜೂ.8: ಲಾಕ್‌ಡೌನ್ ಹಿನ್ನೆಲೆಯಲ್ಲಿ ವಾಣಿಜ್ಯ ಮತ್ತಿತರ ಚಟುವಟಿಕೆಗಳಿಗೆ ನಿರ್ಬಂಧಗಳನ್ನು ವಿಧಿಸಿದ್ದರಿಂದ ತೊಂದರೆಗೊಳಗಾದ ಪಾದರಕ್ಷೆ ತಯಾರಿಕೆ, ದುರಸ್ತಿ ಹಾಗೂ ಚರ್ಮ ಹದ ಮಾಡುವ ಕಾಯಕದಲ್ಲಿ ತೊಡಗಿರುವ ಚಮ್ಮಾರರು, ಚರ್ಮ ಕುಶಲಕರ್ಮಿಗಳಿಗೆ ರಾಜ್ಯ ಸರಕಾರ 2 ಸಾವಿರ ರೂ. ಪರಿಹಾರಕ್ಕೆ ಮಂಜೂರಾತಿ ನೀಡಿದ್ದು, ಈ ಪರಿಹಾರ ಧನವನ್ನು ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಜೂ.16ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಹ ಫಲಾನುಭವಿಗಳಿಗೆ ಪರಿಹಾರ ಧನವು ಬ್ಯಾಂಕ್ ಖಾತೆಗೆ ನೇರವಾಗಿ ಡಿ.ಬಿ.ಟಿ ಮೂಲಕ ವರ್ಗಾಯಿಸಲಾಗುತ್ತದೆ ಎಂದು ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಜಿಲ್ಲಾ ಸಂಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





