ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮಂಗಳೂರು, ಜೂ.8:ಕೃಷಿ ಇಲಾಖೆಯು ಪ್ರಸ್ತುತ ಸಾಲಿನ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ರೈತರು ಅರ್ಜಿಗಳನ್ನು ಮಂಗಳೂರಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು.
ರಾಜ್ಯ ಕೃಷಿ ಕ್ಷೇತ್ರದಲ್ಲಿ ನೂತನ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿ ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವವರಾಗಿರಬೇಕು. ಸಂಶೋಧನೆ/ಸಾಧನೆಗಳು ವ್ಯಾಪಕವಾಗಿ ಅಳವಡಿಸಲ್ಪಟ್ಟು ಕೃಷಿ ಕ್ಷೇತ್ರದ ಏಳಿಗೆಗೆ ಕಾರಣ ವಾಗಿರಬೇಕು ಹಾಗೂ ಅರ್ಜಿಯೊಂದಿಗೆ ಸಂಬಂಧಪಟ್ಟ ಚಟುಚಟಿಕೆಗಳ ಜೆರಾಕ್ಸ್, ಫೋಟೋಗ್ರಾಫ್, ಸಿಡಿ ಗಳನ್ನು ಲಗತ್ತಿಸಿರಬೇಕು.
ಅರ್ಜಿ ಸಲ್ಲಿಸಲು ಜು.20 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ತಾಲೂಕಿನ ರೈತ ಸಂಪರ್ಕ ಕೇಂದ್ರಗಳು ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ದೂ.ಸಂ: 0824-2423601ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Next Story





