ಭತ್ತದ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನ
ಮಂಗಳೂರು, ಜೂ.8: ದ.ಕ.ಜಿಲ್ಲಾ ಕೃಷಿ ಇಲಾಖೆಯು ಪ್ರಸ್ತುತ ಸಾಲಿನಲ್ಲಿ ಭತ್ತ ಬೆಳೆಗಾರರಲ್ಲಿ ಉತ್ಪಾದನಾ ಮತ್ತು ಉತ್ಪಾದಕತೆ ಹೆಚ್ಚಿಸಿ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಭತ್ತದಲ್ಲಿ ಹೆಚ್ಚು ಇಳುವರಿ ಪಡೆದ ರೈತರಿಗೆ ತಾಲೂಕು/ಜಿಲ್ಲಾ/ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ನೀಡಲಿದೆ.
ರೈತರು ಕನಿಷ್ಠ ಒಂದು ಎಕರೆ ಜಮೀನಿನಲ್ಲಿ ಭತ್ತ ಬೆಳೆದಿರಬೇಕು ಹಾಗೂ ಸ್ವಂತ ಅಥವಾ ಸಾಮಾನ್ಯ ವ್ಯವಹಾರಿಕಾ ಅಧಿಕಾರ ಹೊಂದಿರುವ ಮಾಲಕರು ಆ.31ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ತಾಲೂಕಿನ ರೈತ ಸಂಪರ್ಕ ಕೇಂದ್ರಗಳು ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ದೂ. ಸಂ: 0824-2423601ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ
Next Story





