ನೋಂದಣಾಧಿಕಾರಿ ಕಚೇರಿ ಕಾರ್ಯನಿರ್ವಹಿಸಲು ಅನುಮತಿ
ಉಡುಪಿ, ಜೂ.8: ಜಿಲ್ಲೆಯಲ್ಲಿ ಕೋವಿಡ್-19 ಎರಡನೇ ಅಲೆಯ ಸಾಂಕ್ರಾಮಿಕ ರೋಗವು ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಪ್ರಸರಣದ ಸರಪಳಿಯನ್ನು ಮುರಿಯಲು ಹೊರಡಿಸಲಾದ ಸರಕಾರದ ಆದೇಶದಲ್ಲಿ ರಾಜ್ಯ ಸರಕಾರಿ ಕಚೇರಿಗಳ ಕಾರ್ಯನಿರ್ವಹಣೆಗೆ ಸಂಬಂಧಿಸಿ ದಂತೆ, ಜಿಲ್ಲಾ ನೋಂದಣಾಧಿಕಾರಿ ಮತ್ತು ಉಪ-ನೋಂದಣಾಧಿಕಾರಿ ಕಚೇರಿಗಳು ಕೋವಿಡ್ ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ಕರ್ತವ್ಯ ನಿರ್ವಹಿಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.
Next Story





