ನೂತನ ಚುನಾವಣಾ ಆಯುಕ್ತರಾಗಿ ಅನೂಪ್ ಚಂದ್ರ ಪಾಂಡೆ ಅಧಿಕಾರ ಸ್ವೀಕಾರ

ಲಕ್ನೋ, ಜೂ. 9: ದೇಶದ ನೂತನ ಚುನಾವಣಾ ಆಯುಕ್ತರಾಗಿ ಉತ್ತರಪ್ರದೇಶದ ಮಾಜಿ ಮುಖ್ಯ ಕಾರ್ಯದರ್ಶಿ ಅನೂಪ್ ಚಂದ್ರ ಪಾಂಡೆ ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಮಾಜಿ ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಅವರು ನಿವೃತ್ತರಾದ ಬಳಿಕ ಎಪ್ರಿಲ್ನಿಂದ ಆ ಸ್ಥಾನ ತೆರವಾಗಿತ್ತು.
1984ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಅನೂಪ್ ಚಂದ್ರ ಪಾಂಡೆ ಅವರು ಪಂಜಾಬ್ ನ ಚಂಡಿಗಢ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ, ಪಂಜಾಬ್ ವಿಶ್ವವಿದ್ಯಾನಿಲಯ (ಚಂಡಿಗಢ)ದಿಂದ ಆಡಳಿತ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಬಿಹಾರದ ಮಗಧ ವಿಶ್ವವಿದ್ಯಾನಿಲಯದಿಂದ ಪ್ರಾಚೀನ ಇತಿಹಾಸದ ಕುರಿತು ಡಾಕ್ಟರೇಟ್ ಪಡೆದಿದ್ದಾರೆ.
ಅವರನ್ನು 2017 ಸೆಪ್ಟಂಬರ್ನಿಂದ 2019 ಆಗಸ್ಟ್ ವರೆಗೆ ಉತ್ತರಪ್ರದೇಶದ ಮುಖ್ಯ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿತ್ತು. ಅದಕ್ಕಿಂತ ಮೊದಲು ಅವರು ಕೈಗಾರಿಕೆ ಅಭಿವೃದ್ಧಿ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಇದಲ್ಲದೆ, ಅವರು ನಾಲ್ಕು ವರ್ಷಗಳ ಕಾಲ ಕೇಂದ್ರ ಸರಕಾರದ ಜಂಟಿ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದರು.
Next Story