Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಡಿಸಿ ಆಗಿದ್ದಾಗ ಭೂ ಅಕ್ರಮದ ಬಗ್ಗೆ ಧ್ವನಿ...

ಡಿಸಿ ಆಗಿದ್ದಾಗ ಭೂ ಅಕ್ರಮದ ಬಗ್ಗೆ ಧ್ವನಿ ಎತ್ತದೆ ವರ್ಗಾವಣೆ ಬಳಿಕ ಆರೋಪ ಮಾಡುವುದೇಕೆ ?: ಸಾ.ರಾ.ಮಹೇಶ್

ವಾರ್ತಾಭಾರತಿವಾರ್ತಾಭಾರತಿ9 Jun 2021 2:49 PM IST
share
ಡಿಸಿ ಆಗಿದ್ದಾಗ ಭೂ ಅಕ್ರಮದ ಬಗ್ಗೆ ಧ್ವನಿ ಎತ್ತದೆ ವರ್ಗಾವಣೆ ಬಳಿಕ ಆರೋಪ ಮಾಡುವುದೇಕೆ ?: ಸಾ.ರಾ.ಮಹೇಶ್

ಮೈಸೂರು, ಜೂ.9: ಮೈಸೂರಿನ ಹಲವು ರಾಜಕಾರಣಿಗಳ ಮೇಲೆ ಭೂ ಅಕ್ರಮದ ಆರೋಪ ಹೊರಿಸಿರುವ ನಿರ್ಗಮಿತ ಜಿಲ್ಲಾಧಿಕಾರಿ ಮುಖ್ಯಮಂತ್ರಿಗಳಿಗೆ ವರದಿ ಕೊಟ್ಟು ಬಹಿರಂಗಪಡಿಸಲಿ ಎಂದು ಶಾಸಕ ಸಾ.ರಾ.ಮಹೇಶ್ ವಾಗ್ದಾಳಿ ನಡೆಸಿದರು.

ನಗರದ ಅವರ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರೋಹಿಣಿ ಸಿಂಧೂರಿ ಮೈಸೂರಿನಲ್ಲಿ ಕಳೆದ 8 ತಿಂಗಳುಗಳಿಂದ ಜಿಲ್ಲಾಧಿಕಾರಿಗಳಾಗಿದ್ದರು. ಆಗ ಭೂ ಅಕ್ರಮದ ಬಗ್ಗೆ ಧ್ವನಿ ಎತ್ತದವರು ವರ್ಗಾವಣೆ ನಂತರ ಆರೋಪ ಮಾಡುತ್ತಿರುವುದು ಏಕೆ? ಒಂದು ವೇಳೆ ಭೂ ಒತ್ತುವರಿ ಆಗಿದ್ದರೆ ಬಹಿರಂಗಪಡಿಸಲಿ ಎಂದು ಆಗ್ರಹಿಸಿದರು.

ಆಂಧ್ರದ ಐಎಎಸ್ ಅಧಿಕಾರಿಗಳ ಲಾಬಿಯಿಂದ ಓರ್ವ ದಲಿತ ಐಎಎಸ್ ಅಧಿಕಾರಿಯನ್ನು ಕೇವಲ 28 ದಿನಗಳಲ್ಲಿ ವರ್ಗಾವಣೆ ಮಾಡಿಸಿದಿರಿ. ನಿಮ್ಮ ದರ್ಪ, ಅಹಂಕಾರದಿಂದ ಚಾಮರಾಜನಗರದಲ್ಲಿ ಆಕ್ಸಿಜನ್ ಸಿಗದೆ 28 ಜನ ಅಮಾಯಕರು ಬಲಿಯಾದರು. ಸರ್ಕಾರ ಇವರನ್ನು ವರ್ಗಾವಣೆ ಮಾಡದೆ ಸೇವೆಯಿಂದಲೇ ವಜಾಗೊಳಿಸಬೇಕಿತ್ತು ಎಂದು ಹೇಳಿದರು.

ರಾಜ್ಯದ ಸಿಎಂ, ಮುಖ್ಯ ಕಾರ್ಯದರ್ಶಿಗಳ ಮನೆಯಲ್ಲೇ ಈಜುಕೊಳ ಇಲ್ಲ, ಇವರು ಸರ್ಕಾರದ 28 ಲಕ್ಷ ರೂ.ನಲ್ಲಿ ಈಜುಕೊಳ ನಿರ್ಮಾಣ ಮಾಡಿಕೊಂಡಿದ್ದಾರೆ. ಹಾಗಾಗಿ ಇವರ ಮನೆಯ ತಿಂಗಳ ವಿದ್ಯುತ್ ಬಿಲ್ 50 ಸಾವಿರ ಬಂದಿದೆ.‌ ಮುಖ್ಯಮಂತ್ರಿಗಳ ಮನೆಯಲ್ಲೂ ಇಷ್ಟೊಂದು ದೊಡ್ಡ ಮೊತ್ತದ ವಿದ್ಯುತ್ ಬಿಲ್ ಬರುವುದಿಲ್ಲ ಎಂದು ಆರೋಪಿಸಿದರು.

ಇವರ ಮೇಲೆ ಆರೋಪಗಳು ಬರುತ್ತಿದ್ದಂತೆ ಸಾಮಾಜಿಕ ಕಾರ್ಯಕರ್ತನೊಬ್ಬನನ್ನು ಮುಂದಿಟ್ಟುಕೊಂಡು ಭೂ ಅಕ್ರಮದ ಹೆಸರಿನಲ್ಲಿ ಜಿಲ್ಲೆಯ ಹಲವು ರಾಜಕಾರಣಿಗಳನ್ನು ಹೆದರಿಸುವ ಕೆಲಸವನ್ನು ಮಾಡಿದರು. ಆದರೆ ಅದೆಲ್ಲಾ ನಡೆಯಲಿಲ್ಲ, ಮೈಸೂರಿನ ಜನ ಪ್ರಮಾಣಿಕತೆಗೆ ಹೆಸರು ವಾಸಿಯಾಗಿದ್ದಾರೆ. ಅಕ್ರಮ ನಡೆದಿದ್ದರೆ ಇವರೇ ತೆರವುಗೊಳಿಸಬೇಕಿತ್ತು. ಅದು ಬಿಟ್ಟು ಜನರ ಬಳಿ ಸಿಂಪತಿ ಗಿಟ್ಟಿಸುವ ಪ್ರಯತ್ನ ಮಾಡಿದರು. ಇವರೊಬ್ಬ ಸಿಂಗಮ್ ಅಲ್ಲ, ಸಿಂಗಲೀಕ ಅಧಿಕಾರಿ ಎಂದು ಕಿಡಿಕಾರಿದರು.

ಇವರು ಮಹಾನ್ ಸಾಧನೆ ಮಾಡಿದ್ದಾರೆ ಎಂದು ಸಿನಿಮಾ ಮಾಡಲು ಹೊರಟಿದ್ದಾರೆ. ಆ ಸಿನಿಮಾ ಹೊರ ಬರಲಿ. ಇವರು ರೈತನೊಬ್ಬನ ಐಎಎಸ್ ಅಧಿಕಾರಿ ಮಗನಿಗೆ 2015ರಲ್ಲಿ ಏನು ಮಾಡಿದರು ಎಂಬ ಸಿಬಿಐ ವರದಿಯ ಚಿತ್ರವನ್ನು ನಾವು ಜನತೆಗೆ ತೋರಿಸುತ್ತೇವೆ ಎಂದು ಹೇಳಿದರು. ನಾನು ಇವರು ಮೈಸೂರು ಜಿಲ್ಲಾಧಿಕಾರಿಯಾಗಿ ಬಂದ ದಿನದಿಂದಲೂ ವಿರೋಧ ಮಾಡುತ್ತಿದ್ದೇನೆ. ಈಕೆ ಮೈಸೂರು ಜಿಲ್ಲಾಧಿಕಾರಿಯಾಗಿ ಬರದಿದ್ದರೆ ಒಂದು ಸಾವಿರ ಮಂದಿ ಬದುಕುತ್ತಿದ್ದರು ಎಂದು ಹೇಳಿದರು.

ಚಾಮರಾಜನಗರದ ಕೋವಿಡ್-19 ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ 28 ಜನ ಸಾವನ್ನಪ್ಪಿದ ಘಟನೆಗೆ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯ ಇಬ್ಬರು ಜಿಲ್ಲಾಧಿಕಾರಿಗಳನ್ನು ಅಮಾನತುಗೊಳಿಸಬೇಕಿತ್ತು. ಆದರೆ ಸರ್ಕಾರ ಇವರನ್ನು ಅಧಿಕಾರಿಗಳಾಗಿ ಮುಂದುವರೆಸಿದ್ದರಿಂದ ತನಿಖಾ ವರದಿ ಧಿಕ್ಕು ತಪ್ಪಿತು ಎಂದು ಗಂಭೀರ ಆರೋಪ ಮಾಡಿದರು.

ಅಮಾಯಕ ಜನರ ಸಾವಿಗೆ ಎರಡು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕಾರಣರಾಗಿರುವುದು ಮೇಲ್ನೋಟಕ್ಕೆ ತಿಳಿಯುತ್ತಿದೆ. ಸರ್ಕಾರ ತನಿಖೆಗೂ ಮೊದಲು  ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಬೇಕಿತ್ತು. ಆದರೆ ಮೈಸೂರು ಜಿಲ್ಲಾಧಿಕಾರಿ ವರ್ಗವಾದ ನಂತರ ಅವರು ಡ್ರಗ್ ಕಂಟ್ರೋಲರ್ ಗೆ ಡಿಸ್ಮಿಸ್ ಮಾಡುವುದಾಗಿ ಹೇಳಿರುವ ಆಡಿಯೋ ಬಿಡುಗಡೆಗೊಳಿಸಲಾಗಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X