Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿತೆಗಳಿಗೆ ಹಚ್ಚಿದ ಜ್ವಾಲೆ ಇನ್ನೂ...

ಚಿತೆಗಳಿಗೆ ಹಚ್ಚಿದ ಜ್ವಾಲೆ ಇನ್ನೂ ಆರಿಲ್ಲ, ಈಗ ಕ್ಷುಲ್ಲಕ ರಾಜಕಾರಣ ಅಗತ್ಯವಿದೆಯೇ?: ಕುಮಾರಸ್ವಾಮಿ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ9 Jun 2021 3:32 PM IST
share
ಚಿತೆಗಳಿಗೆ ಹಚ್ಚಿದ ಜ್ವಾಲೆ ಇನ್ನೂ ಆರಿಲ್ಲ, ಈಗ ಕ್ಷುಲ್ಲಕ ರಾಜಕಾರಣ ಅಗತ್ಯವಿದೆಯೇ?: ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು, ಜೂ.9: ರಾಜ್ಯ ಸಂದಿಗ್ಧತೆಗೆ ಸಿಲುಕಿರುವ ಈ ಹೊತ್ತಿನಲ್ಲಿ ಇದೆಂಥ ರಾಜಕೀಯ? ಈಗ ರಾಜ್ಯದ ಎದುರಿಗೆ ಇರುವುದು ನಾಯಕತ್ವದ ಪ್ರಶ್ನೆಯೋ? ಅಥವಾ ಜನರ ಹಿತದ ಪ್ರಶ್ನೆಯೋ? ರಾಜ್ಯದಲ್ಲಿ ಚಿತೆಗಳಿಗೆ ಹಚ್ಚಿದ ಜ್ವಾಲೆ ಇನ್ನೂ ಆರಿಲ್ಲ. ಅದು ಎಂದು ಆರುತ್ತದೆ ಎಂಬುದೇ ಯಾರಿಗೂ ತಿಳಿಯುತ್ತಿಲ್ಲ. ಇಂಥ ಸಂದರ್ಭದಲ್ಲಿ ಇಂಥ ಕ್ಷುಲ್ಲಕ ರಾಜಕಾರಣ ಅಗತ್ಯವಿದೆಯೇ? ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಖಾರವಾಗಿ ಪ್ರಶ್ನಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟು ಎದುರಾಗಿದೆ. ಅದು ಎಂಥಾ ಸಂದರ್ಭದಲ್ಲಿ? ಕೋವಿಡ್‌ ಅಟ್ಟಹಾಸ ಮೆರೆಯುತ್ತಿರುವ ಹೊತ್ತಿನಲ್ಲಿ, ಬ್ಲ್ಯಾಕ್‌ ಫಂಗಸ್‌ ಎಂಬ ಭಯಾನಕ ರೋಗ ಜನರನ್ನು ಆಪೋಷನ ತೆಗೆದುಕೊಳ್ಳುತ್ತಿರುವ ಗಳಿಗೆಯಲ್ಲಿ, ಮಕ್ಕಳು ಪಿಡುಗಿಗೆ ಸಿಲುಕಲಿದ್ದಾರೆಂಬ ಎಚ್ಚರಿಕೆಗಳ ನಡುವಿನಲ್ಲಿ, ಕನ್ನಡದ ಅಸ್ಮಿತೆಗೆ ದಕ್ಕೆಯಾಗಿರುವ ಕಾಲಘಟ್ಟದಲ್ಲಿ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಕೋವಿಡ್‌ ಸ್ಥಿತಿಯನ್ನು ನಿಭಾಯಿಸಿದ ರೀತಿಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಸರ್ಕಾರ ಇನ್ನಾದರೂ ತಿದ್ದಿಕೊಳ್ಳಲಿದೆ ಎಂದು ನಾವು ಭಾವಿಸಿದೆವು. ಇಂಥ ಸಂದರ್ಭದಲ್ಲಿ ಸರ್ಕಾರವನ್ನು ಟೀಕಿಸಿ ರಾಜಕೀಯ ಮಾಡುವುದು ಬೇಡ ಎಂದು ಜೆಡಿಎಸ್‌ ನಿರ್ಧರಿಸಿತ್ತು. ಆದರೆ, ಬಿಜೆಪಿ ಅಧಿಕಾರದ ಲಾಲಸೆ ಪ್ರದರ್ಶಿಸಿದರೆ ಸುಮ್ಮನಿರುವುದು ಹೇಗೆ? ಎಂದು ಪ್ರಶ್ನಿಸಿದ್ದಾರೆ.

ಯಡಿಯೂರಪ್ಪನವರು ತಾವು ಖರೀದಿಸಿ ತಂದ ಕುದುರೆಗಳ ಮೇಲೆ ತಾವೇ ಸವಾರಿ ಮಾಡಿದ್ದರೆ ಈ ಪರಿಸ್ಥಿತಿ ಬರುತ್ತಲೇ ಇರಲಿಲ್ಲ. ಅದರ ಬದಲಿಗೆ ಮಾಧ್ಯಮಗಳು ಬಣ್ಣಿಸುವ ‘ಸೋಕಾಲ್ಡ್‌ ಹುಲಿ, ಬಾಹುಬಲಿ‘ ಮುಂತಾದವರನ್ನುಮುಖ್ಯಮಂತ್ರಿ ಸೀಟಿನ ಮೇಲೆ ಕೂರಿಸಿದ್ದೇ ಸದ್ಯದ ರಾಜಕೀಯ ದುಸ್ಥಿತಿಗೆ ಕಾರಣ. ಇದು ಯಡಿಯೂರಪ್ಪನವರ ಸ್ವಯಂಕೃತ ಅಪರಾಧ. ಇನ್ನೊಂದೆಡೆ,‘ಅನ್ನ ಹಳಸಿದೆ, *** ಕಾದಿದೆ‘ ಎಂಬಂತೆ ರಾಜ್ಯದ ಮತ್ತೊಂದು ರಾಜಕೀಯ ಪಕ್ಷ ಕಾದು ಕುಳಿತಿದೆ. ರಾಜ್ಯದಲ್ಲಿ ಹೊತ್ತಿರುವ ಚಿತೆಗಳ ಬೆಂಕಿಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಬೆಂದು ಹೋದರೆ, ನಂತರದ ದಿನಗಳಲ್ಲಿ ತನ್ನನ್ನು ಅಧಿಕಾರದಲ್ಲಿ ಪ್ರತಿಷ್ಠಾಪಿಸಿಕೊಳ್ಳಲು ಆ ರಾಷ್ಟ್ರೀಯ ಪಕ್ಷ ಪ್ರಯತ್ನಗಳನ್ನು ಪೈಪೋಟಿಗೆ ಬಿದ್ದು ನಡೆಸುತ್ತಿದೆ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಸಂಕಷ್ಟದ ಕಾಲದಲ್ಲಿ ಬಿಜೆಪಿಯಲ್ಲಿ ಉಂಟಾಗಿರುವ ಅಧಿಕಾರದ ಲಾಲಸೆ, ಅದನ್ನು ಬಳಸಿಕೊಂಡು ಅಧಿಕಾರಕ್ಕೆ ಬರಲು ಕೋವಿಡ್‌ ನಿಯಮಗಳನ್ನೆಲ್ಲ ಮೀರಿ ಬೀದಿಗೆಬಿದ್ದಿರುವ ಕಾಂಗ್ರೆಸ್‌ ಪಕ್ಷಗಳೆರಡೂ ಆತ್ಮಾವಲೋಕನೆ ಮಾಡಿಕೊಳ್ಳಬೇಕು. ಸಂಕಷ್ಟದ ಪರಿಸ್ಥಿತಿಯನ್ನೇ ಅಧಿಕಾರಕ್ಕೇರಲು ಏಣಿ ಮಾಡಿಕೊಳ್ಳುತ್ತಿರುವ ಈ ಪಕ್ಷಗಳ ನಡೆಯನ್ನು ಜನ ಗಮನಿಸಬೇಕು. ಆರೋಗ್ಯ ತುರ್ತು ಪರಿಸ್ಥಿತಿಯ ನಡುವೆ ಕನ್ನಡ, ಕರ್ನಾಟಕದ ಅಸ್ಮಿತೆ ಪ್ರಶ್ನೆ ಮಾಡುವಂಥ ಘಟನೆಗಳು ಒಂದರ ಹಿಂದೊಂದರಂತೆ ನಡೆದವು. ಈ ವಿಚಾರವಾಗಿ ಬಿಜೆಪಿ, ಕಾಂಗ್ರೆಸ್‌ ಏನು ಮಾಡಿದವು? ಇವರೆಲ್ಲ ರಾಜಕೀಯ ಮಾಡುತ್ತಿರುವುದು ಕರ್ನಾಟಕದಲ್ಲೇ ಅಲ್ಲವೇ? ಆದರೆ, ಕರ್ನಾಟಕದ ಸ್ವಾಭಿಮಾನಕ್ಕೆ ದಕ್ಕೆಯಾದಾಗ ಇವರೆಲ್ಲ ಅದ್ಯಾವ ಬಿಲದಲ್ಲಿ ಅಡಗಿದ್ದರು? ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟು ಎದುರಾಗಿದೆ. ಅದು ಎಂಥಾ ಸಂದರ್ಭದಲ್ಲಿ?ಕೋವಿಡ್‌ ಅಟ್ಟಹಾಸ ಮೆರೆಯುತ್ತಿರುವ ಹೊತ್ತಿನಲ್ಲಿ, ಬ್ಲಾಕ್‌ ಫಂಗಸ್‌ ಎಂಬ ಭಯಾನಕ ರೋಗ ಜನರನ್ನು ಆಪೋಷನ ತೆಗೆದುಕೊಳ್ಳುತ್ತಿರುವ ಗಳಿಗೆಯಲ್ಲಿ, ಮಕ್ಕಳು ಪಿಡುಗಿಗೆ ಸಿಲುಕಲಿದ್ದಾರೆಂಬ ಎಚ್ಚರಿಕೆಗಳ ನಡುವಿನಲ್ಲಿ, ಕನ್ನಡದ ಅಸ್ಮಿತೆಗೆ ದಕ್ಕೆಯಾಗಿರುವ ಕಾಲಘಟ್ಟದಲ್ಲಿ.
1/7

— H D Kumaraswamy (@hd_kumaraswamy) June 9, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X