Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪೆಟ್ರೋಲ್ ಬೆಲೆ ಏರಿಕೆ ಮೂಲಕ ಬಿಜೆಪಿಯ...

ಪೆಟ್ರೋಲ್ ಬೆಲೆ ಏರಿಕೆ ಮೂಲಕ ಬಿಜೆಪಿಯ ಲೂಟಿ ಖಂಡಿಸಿ ರಾಜ್ಯಾದ್ಯಂತ '100 ನಾಟೌಟ್' ಆಂದೋಲನ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ9 Jun 2021 5:07 PM IST
share
ಪೆಟ್ರೋಲ್ ಬೆಲೆ ಏರಿಕೆ ಮೂಲಕ ಬಿಜೆಪಿಯ ಲೂಟಿ ಖಂಡಿಸಿ ರಾಜ್ಯಾದ್ಯಂತ 100 ನಾಟೌಟ್ ಆಂದೋಲನ: ಡಿ.ಕೆ.ಶಿವಕುಮಾರ್

ಬೆಂಗಳೂರು, ಜೂ.9: 'ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆ ಏರಿಕೆ ಮೂಲಕ ಜನರ ಜೇಬು ಲೂಟಿ ಮಾಡುತ್ತಿದೆ. ಇದನ್ನು ಖಂಡಿಸಿ ರಾಜ್ಯದಲ್ಲಿ ಐದು ದಿನಗಳ ಕಾಲ 5 ಸಾವಿರ ಪೆಟ್ರೋಲ್ ಬಂಕ್ ಗಳಲ್ಲಿ '100 ನಾಟೌಟ್' ಅಭಿಯಾನ ಆರಂಭಿಸುತ್ತಿದ್ದೇವೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ದೇಶದ ಇತಿಹಾಸ ಪುಟಕ್ಕೆ ನಾವೆಲ್ಲ ಸಾಕ್ಷಿಯಾಗುತ್ತಿದ್ದೇವೆ. ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ, ದಾಖಲೆಗಳನ್ನು ಮುರಿಯುತ್ತಿದೆ. ಪೆಟ್ರೋಲ್ ಬೆಲೆ 100ರ ಗಡಿ ದಾಟಿದೆ. ಹೀಗಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ರಾಜ್ಯಾದ್ಯಂತ '100 ನಾಟೌಟ್' ಆಂದೋಲನ ಹಮ್ಮಿಕೊಂಡಿದೆ. ಈ ಪ್ರತಿಭಟನೆ ಇದೇ ತಿಂಗಳು 11ರಿಂದ 15 ರವರೆಗೂ ಐದು ದಿನಗಳ ಕಾಲ 5 ಸಾವಿರ ಪೆಟ್ರೋಲ್ ಬಂಕ್ ಗಳ ಮುಂದೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಜೂ.11 ರಂದು ಎಲ್ಲ ಜಿಲ್ಲಾ ಕೇಂದ್ರ, ಜೂ.12ರಂದು ತಾಲೂಕು ಕೇಂದ್ರಗಲ್ಲಿ, 13 ರಂದು ಎಲ್ಲ ಜಿಲ್ಲಾ ಪಂಚಾಯತ್ ಹಾಗೂ ಹೋಬಳಿ ಕೇಂದ್ರಗಳಲ್ಲಿ, 14 ರಂದು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆಟ್ರೋಲ್ ಬಂಕ್ ಗಳಲ್ಲಿ, ಜೂ.15 ರಂದು ಪ್ರಮುಖ ಪೆಟ್ರೋಲ್ ಬಂಕ್ ಗಳಲ್ಲಿ ಪ್ರತಿಭಟನೆ ಮಾಡಲಾಗುವುದು. ನಮ್ಮ ಎಲ್ಲ ಘಟಕಗಳಾದ ಯೂತ್ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್, ಎಂಎಸ್ಯುಐ, ರೈತ ಘಟಕ, ಹಿಂದುಳಿದ, ಅಲ್ಪಸಂಖ್ಯಾತ ಘಟಕ, ಬ್ಲಾಕ್, ಜಿಲ್ಲಾ ಕಾಂಗ್ರೆಸ್ ಸದಸ್ಯರು ಈ ಐದು ಸಾವಿರ ಪೆಟ್ರೋಲ್ ಬಂಕ್ ಗಳಲ್ಲಿ ಬೆಳಗ್ಗೆ 11 ರಿಂದ 12 ರವರೆಗೂ ಒಂದು ಗಂಟೆಗಳ ಕಾಲ ಪ್ರತಿಭಟನೆ ಮಾಡಲಿದ್ದಾರೆ ಎಂದು ತಿಳಿಸಿದರು.

ಎಲ್ಲ ಜಿಲ್ಲೆಗಳ ಉಸ್ತುವಾರಿಗೆ ಒಬ್ಬೊಬ್ಬ ನಾಯಕರನ್ನು ನೇಮಿಸಲಾಗುತ್ತಿದೆ. ಕೊರೋನ ಭ್ರಷ್ಟಾಚಾರ ವಿಚಾರವಾಗಿ ನಮ್ಮ ನಾಯಕರು ಪ್ರತಿ ಜಿಲ್ಲೆಗೆ ಹೋಗಿ ಪತ್ರಿಕಾಗೋಷ್ಠಿ ಮಾಡಿದಂತೆ, ಈಗಲೂ ಪ್ರತಿಭಟನೆ ನೇತೃತ್ವಕ್ಕೆ ನಾಯಕರನ್ನು ನೇಮಕ ಮಾಡಲಾಗುವುದು. ಈ ಉಸ್ತುವಾರಿ ಹೊತ್ತಿರುವ ನಾಯಕರು ಝೂಮ್ ಮೂಲಕ ಪ್ರತಿಭಟನೆ ವೀಕ್ಷಿಸಬೇಕು. ಈ ಪ್ರತಿಭಟನೆಯ 1 ನಿಮಿಷ ವಿಡಿಯೋ ಮಾಡಿ, ಪಕ್ಷದ ಐಟಿ ಸೆಲ್ ಹಾಗೂ ಸಾಮಾಜಿಕ ಜಾಲತಾಣ ವಿಭಾಗಕ್ಕೆ ಕಳುಹಿಸಬೇಕು. ಅದನ್ನು ಎಐಸಿಸಿಗೂ ಕಳುಹಿಸಲಾಗುವುದು ಎಂದರು.

ನಾನು, ನಮ್ಮ ಶಾಸಕರು, ಮಾಜಿ ಶಾಸಕರು, ಪಂಚಾಯತ್ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸುತ್ತೇವೆ. ಕೋವಿಡ್ ನಿಯಮಾವಳಿ ಪಾಲಿಸಿ ಈ ಪ್ರತಿಭಟನೆ ಮಾಡಬೇಕು. ಪೆಟ್ರೋಲ್ ಮೂಲಕ ಸರ್ಕಾರ ಪಿಕ್ ಪಾಕೆಟ್ ಮಾಡುತ್ತಿರುವುದನ್ನು ಖಂಡಿಸಿ ಈ ಅಭಿಯಾನ ನಡೆಯಲಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಜನವರಿಯಲ್ಲಿ 16 ಬಾರಿ, ಫೆಬ್ರವರಿಯಲ್ಲಿ 16, ಮೇನಲ್ಲಿ 16 ಬಾರಿ ಪೆಟ್ರೋಲ್ ಬೆಲೆ ಏರಿಕೆ ಮಾಡಿದೆ. ಚುನಾವಣೆ ನಡೆದ ಮಾರ್ಚ್, ಏಪ್ರಿಲ್ ನಲ್ಲಿ ಬೆಲೆ ಏರಿಕೆ ಮಾಡಲಿಲ್ಲ. ಕೇಂದ್ರ ಸರ್ಕಾರ ಈ ಬೆಲೆ ಏರಿಕೆಯಿಂದ 21.60 ಲಕ್ಷ ಕೋಟಿ ರೂ. ಹಣವನ್ನು ಸಂಪಾದಿಸಿದೆ. ಶ್ರೀಲಂಕಾ, ಬಾಂಗ್ಲಾ, ಪಾಕಿಸ್ತಾನದಲ್ಲಿನ ದರದ ಜತೆ ಲೆಕ್ಕ ಹಾಕಿ. ಜಿಡಿಪಿಯು ಅವರಿಗಿಂತ ಕೆಳಗೆ ಕುಸಿದಿದೆ. ಬಲಿಷ್ಠ ಭಾರತಕ್ಕೆ ಇಂತಹ ದುಸ್ಥಿತಿ ಬಂದಿದೆ. ಈ ಸಂದರ್ಭದಲ್ಲಿ ನಾವು ನಮ್ಮ ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್, ನರಸಿಂಹ ರಾವ್, ರಾಜೀವ್ ಗಾಂಧಿ, ಇಂದಿರಾಗಾಂಧಿ ಅವರ ಕಾಲವನ್ನು ಮೆಲಕು ಹಾಕಬೇಕು. ಆಗ ಯಾವ ರೀತಿ ಜನರ ಭಾವನೆ ಇತ್ತು. ಸರಕಾರ ತೆರಿಗೆ ನಿಯಂತ್ರಣ ಮಾಡಿದ್ದು ಗಮನಿಸಬೇಕು. ಈ ಸರ್ಕಾರ ಇದ್ಯಾವುದನ್ನು ಗಮನಿಸದೆ ನಿರ್ಧಾರ ಕೈಗೊಳ್ಳುತ್ತಿದೆ ಎಂದು ಕಿಡಿಕಾರಿದರು.

ಈ ವರ್ಷ ಒಟ್ಟು 48 ಬಾರಿ ಪೆಟ್ರೋಲ್ ಬೆಲೆ ಏರಿಕೆಯಾಗಿದೆ. ಆ ಮೂಲಕ ಜನರ ಜೇಬಿಗೆ ಕನ್ನ ಹಾಕಲಾಗಿದೆ. ಇದರಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಕೊರೋನ ಸಮಯದಲ್ಲಿ ಸರ್ಕಾರ ನಮ್ಮ ಹತ್ಯೆ ಮಾಡಲು ಪ್ರಯತ್ನಿಸುತ್ತಿದೆ. ತೈಲ ಬೆಲೆ ಅನುಗುಣವಾಗಿ ಇಂಧನ ಬೆಲೆ ಇಳಿಸಬೇಕು ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ನಾವು ಒತ್ತಾಯ ಮಾಡುತ್ತೇವೆ ಎಂದು ಹೇಳಿದರು.

ಉಚಿತ ಲಸಿಕೆ ನಮ್ಮ ಹೋರಾಟದ ಫಲ: ನಾವು ಹೋರಾಟ ಮಾಡಿದ್ದರಿಂದ ಕೇಂದ್ರ ಸರ್ಕಾರ ದೇಶದಾದ್ಯಂತ ಇಂದು ಉಚಿತ ಲಸಿಕೆ ಘೋಷಿಸಿದೆ. ಎಲ್ಲ ರಾಜ್ಯಗಳಲ್ಲಿ ನಮ್ಮ ಪಕ್ಷ ರಾಜ್ಯಪಾಲರನ್ನು ಭೇಟಿ ಮಾಡಿ, ಉಚಿತ ಲಸಿಕೆಗೆ ಆಗ್ರಹಿಸಿದ್ದರು. ನಂತರ ನಾವು ನಮ್ಮ ಶಾಸಕರ ನಿಧಿಯಿಂದ ಲಸಿಕೆ ನೀಡಲು ಅನುಮತಿ ಕೋರಿದ್ದೆವು. ಆದರೆ ಸರ್ಕಾರ ಅದನ್ನು ನಿರಾಕರಿಸಿದ್ದು, ಜನರ ಜೀವ ರಕ್ಷಿಸಲು ನಿರಾಕರಿಸಿದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರದಷ್ಟೇ ರಾಜ್ಯ ಸರ್ಕಾರ ಕೂಡ ವಿಫಲವಾಗಿದೆ. ಸುಪ್ರೀಂಕೋರ್ಟ್ ಚಾಟಿ ಬೀಸಿದ ನಂತರ ಸರ್ಕಾರ ಎಚ್ಚೆತ್ತುಕೊಂಡಿದೆ. ಮಾಧ್ಯಮಗಳು ಜನರ ಪರವಾಗಿ ನಿಂತಿದ್ದು, ನ್ಯಾಯಾಲಯದ ಜತೆ ಮಾಧ್ಯಮಗಳಿಗೂ ಅಭಿನಂದನೆ ತಿಳಿಸುತ್ತೇನೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X