Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಖಾಸಗಿ ಆಸ್ಪತ್ರೆಗಳು ಸರಕಾರ ನಿಗದಿಪಡಿಸಿದ...

ಖಾಸಗಿ ಆಸ್ಪತ್ರೆಗಳು ಸರಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚುವರಿ ಶುಲ್ಕ ವಸೂಲಿ ಮಾಡುವಂತಿಲ್ಲ: ಸಚಿವ ಕೋಟ ಎಚ್ಚರಿಕೆ

►ನಿರ್ಲಕ್ಷ್ಯ ವಹಿಸಿದ ನೋಡಲ್ ಅಧಿಕಾರಿಗಳಿಗೆ ನೋಟಿಸ್ ಜಾರಿ ►ಮುಂಗಡ ಹಣ ಪಡೆಯದಂತೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ9 Jun 2021 8:08 PM IST
share
ಖಾಸಗಿ ಆಸ್ಪತ್ರೆಗಳು ಸರಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚುವರಿ ಶುಲ್ಕ ವಸೂಲಿ ಮಾಡುವಂತಿಲ್ಲ: ಸಚಿವ ಕೋಟ ಎಚ್ಚರಿಕೆ

ಮಂಗಳೂರು, ಜೂ.9: ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಿದ ಖಾಸಗಿ ಆಸ್ಪತ್ರೆಗಳು ಸರಕಾರ ನಿಗದಿಪಡಿಸಿರುವ ಚಿಕಿತ್ಸಾ ಶುಲ್ಕವನ್ನು ಮಾತ್ರ ವಸೂಲಿ ಮಾಡಬೇಕು. ಅದಕ್ಕಿಂತ ಹೆಚ್ಚಿನ ದರ ವಸೂಲಿ ಮಾಡಬಾರದು. ಒಂದು ವೇಳೆ ಹೆಚ್ಚುವರಿ ದರ ವಸೂಲಿ ಮಾಡಿದ ಆರೋಪ ಕೇಳಿ ಬಂದರೆ ತಕ್ಷಣ ಅದನ್ನು ಹಿಂದಿರುಗಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.

ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ ಕೋವಿಡ್ ರೋಗಿಗಳ ಬಿಲ್‌ಗೆ ಸಂಬಂಧಿಸಿ ದ.ಕ.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಿ ಡಿಸ್‌ಜಾರ್ಜ್ ಮಾಡುವ ಸಂದರ್ಭ ಸರಕಾರ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚಿನ ಚಿಕಿತ್ಸಾ ಶುಲ್ಕವನ್ನು ಪಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬರುತ್ತಿವೆ. ಹೆಚ್ಚಿನ ಶುಲ್ಕ ಪಡೆಯದಂತೆ ಖಾಸಗಿ ಆಸ್ಪತ್ರೆಗಳ ಉಸ್ತುವಾರಿ ನೋಡಲ್ ಅಧಿಕಾರಿಗಳು ಜವಾಬ್ದಾರಿಯಿಂದ ನೋಡಿಕೊಳ್ಳಬೇಕು ಎಂದರು.

ಈ ಬಗ್ಗೆ ಕೆಲವು ನೋಡಲ್ ಅಧಿಕಾರಿಗಳು ನಿರ್ಲಕ್ಷಿಸುತ್ತಿರುವ ಬಗ್ಗೆ ದೂರುಗಳಿವೆ. ಅಂತಹ ನೋಡಲ್ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಬೇಕು ಎಂದು ಜಿಲ್ಲಾಧಿಕಾರಿಗೆ ಸಚಿವರು ಸೂಚಿಸಿದರು.

ಖಾಸಗಿ ಆಸ್ಪತ್ರೆಗಳು ಕೋವಿಡ್ ಚಿಕಿತ್ಸೆಗೆ ಬರುವ ರೋಗಿಗಳಿಂದ ಯಾವುದೇ ರೀತಿಯ ಮುಂಗಡ ಹಣವನ್ನು ಪಡೆಯುವಂತಿಲ್ಲ ಎಂದ ಸಚಿವರು ಖಾಸಗಿ ಆಸ್ಪತ್ರೆಗಳು ಶೇ.50ರಷ್ಟು ಹಾಸಿಗೆಗಳನ್ನು ಸಾರ್ವಜನಿಕ ಆರೋಗ್ಯ ಅಧಿಕಾರಿಗಳು ರೆಫರ್ ಮಾಡುವ ರೋಗಿಗಳ ಚಿಕಿತ್ಸೆಗಾಗಿ ಕಾಯ್ದಿರಿಸುವುದು ಕಡ್ಡಾಯವಾಗಿದೆ. ಅದನ್ನು ಉಲ್ಲಂಘಿಸಿದ್ದಲ್ಲಿ ಕೆ.ಪಿ.ಎಂ.ಇ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸರ್ಕಾರ ಕಾರ್ಯಪಡೆ ಸಮಿತಿಯ ವರದಿಯನ್ನು ಆಧರಿಸಿ ಕೋವಿಡ್ ಚಿಕಿತ್ಸೆಯ ಪ್ಯಾಕೇಜ್ ದರವನ್ನು ನಿಗದಿಪಡಿಸಿದೆ. ಅಂದರೆ ಸಿಟಿ ಸ್ಕ್ಯಾನಿಂಗ್‌ಗೆ ಬಿಪಿಎಲ್ ಕಾರ್ಡ್ ಹೊಂದಿದವರಿಂದ 1,500 ರೂ, ಇತರರಿಂದ 2,500 ರೂ. ಹಾಗೂ ಎಕ್ಸ್-ರೇಗೆ 250 ರೂ. ಶುಲ್ಕ ಪಡೆಯಬಹುದಾಗಿದೆ. ಖಾಸಗಿ ಆಸ್ಪತ್ರೆಗೆ ಸಾರ್ವಜನಿಕ ಆರೋಗ್ಯ ಸಂಸ್ಥೆಯಿಂದ ರೆಫರ್ ಮಾಡಿದ ಆಯುಷ್ಮಾನ್ ಕಾರ್ಡ್ ಹೊಂದಿರುವ ಕೋವಿಡ್ ರೋಗಿಗಳ ಒಂದು ದಿನದ ಚಿಕಿತ್ಸೆಗೆ ಜನರಲ್ ವಾರ್ಡ್‌ಗೆ 5,200 ರೂ., ಎಚ್‌ಡಿಯು ಗೆ 7,000ರೂ., ಐಸಿಯು ವೆಂಟಿಲೇಟರ್ ರಹಿತ ಚಿಕಿತ್ಸೆಗೆ 8,500 ರೂ, ಐಸಿಯು ವೆಂಟಿಲೇಟರ್ ಸಹಿತ ಚಿಕಿತ್ಸೆಗೆ 10,000 ರೂ.ಗಳನ್ನು ಪಿಪಿಇ ಹಾಗೂ ಇತರ ಉಪಭೋಗ್ಯ ವಸ್ತುಗಳನ್ನೊಳಗೊಂಡಂತೆ ಪಡೆಯಬೇಕು ಎಂದರು.

ನೇರವಾಗಿ ಖಾಸಗಿ ಆಸ್ಪತ್ರೆಯಲ್ಲಿ ಪ್ರವೇಶಿಸಿ ಚಿಕಿತ್ಸೆ ಪಡೆದ ಸೋಂಕಿತ ರೋಗಿಗಳಿಂದ ಒಂದು ದಿನಕ್ಕೆ ಜನರಲ್ ವಾರ್ಡ್‌ಗೆ 10,000ರೂ, ಹೆಚ್‌ಡಿಯುಗೆ 12,000ರೂ, ಐಸಿಯು ವೆಂಟಿಲೇಟರ್ ರಹಿತ ಚಿಕಿತ್ಸೆಗೆ 15,000, ಐಸಿಯು ವೆಂಟಿಲೇಟರ್ ಸಹಿತ ಚಿಕಿತ್ಸೆಗೆ 25,000 ರೂ., ಪಿಪಿಇ ಹಾಗೂ ಇತರ ಉಪಭೋಗ್ಯ ವಸ್ತುಗಳನ್ನು ಒಳಗೊಂಡಂತೆ ಪಡೆಯಬೇಕು. ಒಂದೇ ಕೋಣೆಯಲ್ಲಿ ಇಬ್ಬರು ರೋಗಿಗಳು ಚಿಕಿತ್ಸೆ ಪಡೆದಲ್ಲಿ ಶೇ.10ರಷ್ಟು, ಏಕ ವ್ಯಕ್ತಿ ಚಿಕಿತ್ಸೆ ಪಡೆದಲ್ಲಿ ಶೇ.25ರಷ್ಟು, ಡಿಲಕ್ಸ್ ರೂಮಿನಲ್ಲಿ ಚಿಕಿತ್ಸೆ ಪಡೆದರೆ ಅನಿಯಮಿತ ಶುಲ್ಕ ವೆಚ್ಚವನ್ನು ಪಡೆಯಬಹುದಾಗಿದೆ ಎಂದರು.

ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾತನಾಡಿ ಖಾಸಗಿ ಆಸ್ಪತ್ರೆಗಳ ಬಿಲ್‌ಗಳ ಪರಿಶೀಲನೆಗೆ ಜಿಲ್ಲಾಡಳಿತ ಆಡಿಟ್ ತಂಡವನ್ನು ರಚಿಸಿದೆ. ಈ ತಂಡವು ಖಾಸಗಿ ಆಸ್ಪತ್ರೆಗಳ ಬಿಲ್‌ನ ಆಡಿಟ್ ಮಾಡಿ ಜಿಲ್ಲಾಡಳಿತಕ್ಕೆ ವರದಿ ನೀಡಲಿದೆ. ಈವರೆಗೆ 11 ಖಾಸಗಿ ಆಸ್ಪತ್ರೆಯ 896 ಕೋವಿಡ್ ರೋಗಿಗಳ ಚಿಕಿತ್ಸಾ ಬಿಲ್‌ಗಳನ್ನು ಪರಿಶೀಲಿಸಿದೆ ಎಂದರು.

ನೋಡಲ್ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು. ತಮಗೆ ವಹಿಸಿರುವ ಕಾರ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿದಲ್ಲಿ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸಭೆಯಲ್ಲಿ ಶಾಸಕ ಡಾ.ಭರತ್ ಶೆಟ್ಟಿ ವೈ, ದ.ಕ.ಜಿಪಂ ಸಿಇಒ ಡಾ.ಕುಮಾರ್, ಅಪರ ಜಿಲ್ಲಾಧಿಕಾರಿ ಡಾ.ಪ್ರಜ್ಞಾ ಅಮ್ಮೆಂಬಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್ ಕುಮಾರ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X