ಮಂಗಳೂರು: ಅಪ್ರಾಪ್ತೆಯ ಅತ್ಯಾಚಾರ; ಆರೋಪಿಯ ಬಂಧನ

ಮಂಗಳೂರು, ಜೂ.9: ಅಪ್ರಾಪ್ತೆಯನ್ನು ಅತ್ಯಾಚಾರಗೈದ ಆರೋಪದಲ್ಲಿ ಜೋಕಟ್ಟೆಯ ಅಬ್ದುಲ್ ಗಫೂರ್ ಎಂಬಾತನ ವಿರುದ್ಧ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಒಂದೂವರೆ ವರ್ಷದ ಹಿಂದೆ ಸ್ನೇಹಿತರ ಮೂಲಕ ಅಪ್ರಾಪ್ತೆಯನ್ನು ಪರಿಚಯ ಮಾಡಿಕೊಂಡ ಆರೋಪಿಯು ಬಳಿಕ ಆಕೆಗೆ ಮೊಬೈಲ್ ಖರೀದಿಸಿ ಕೊಟ್ಟು ಪ್ರತಿ ದಿನ ಫೋನ್, ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದೆ. ಮದುವೆಯಾಗುವುದಾಗಿ ಭರವಸೆ ನೀಡಿ ಅತ್ಯಾಚಾರಗೈದಿದ್ದಾನೆ ಎಂದು ಆರೋಪಿಸಲಾಗಿದೆ.
ಬುಧವಾರ ಅಪ್ರಾಪ್ತೆಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಕಾವೂರು ಗಾಂಧಿನಗರ ಕ್ಲಿನಿಕ್‌ಗೆ ತೆರಳಿ ತಪಾಸಣೆ ನಡೆಸಿದಾಗ ಆಕೆ ಗರ್ಭಿಣಿಯಾಗಿರುವುದು ಗೊತ್ತಾಗಿದೆ. ಅಲ್ಲಿನ ವೈದ್ಯರ ಸೂಚನೆಯಂತೆ ಲೇಡಿಗೋಶನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





