ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಆದೇಶ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ

ಬೆಂಗಳೂರು, ಜೂ. 9: ಪರೀಕ್ಷೆ ನಡೆಸದೆಯೇ ಪ್ರಸಕ್ತ ಸಾಲಿನ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡುವ ಸಂಬಂಧ ಸರಕಾರ ಹೊರಡಿಸಿರುವ ಅಧಿಸೂಚನೆ ರದ್ದು ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ನಗರದ ಜ್ಞಾನಮಂದಿರ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಎಸ್.ವಿ.ಸಿಂಗೇಗೌಡ ಅರ್ಜಿ ಸಲ್ಲಿಸಿದ್ದು, ಉನ್ನತ ಶಿಕ್ಷಣ ಇಲಾಖೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಕಾರ್ಯದರ್ಶಿಗಳು ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.
Next Story





