Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೊಸ ಪೌರತ್ವ ಅಧಿಸೂಚನೆ ಪ್ರಶ್ನಿಸಿ...

ಹೊಸ ಪೌರತ್ವ ಅಧಿಸೂಚನೆ ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ಪಿಐಎಲ್ ದಾಖಲಿಸಿದ ಪಾಪ್ಯುಲರ್ ಫ್ರಂಟ್

ವಾರ್ತಾಭಾರತಿವಾರ್ತಾಭಾರತಿ9 Jun 2021 9:57 PM IST
share
ಹೊಸ ಪೌರತ್ವ ಅಧಿಸೂಚನೆ ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ಪಿಐಎಲ್ ದಾಖಲಿಸಿದ ಪಾಪ್ಯುಲರ್ ಫ್ರಂಟ್

ಹೊಸದಿಲ್ಲಿ, ಜೂ.9: ನೆರೆ ರಾಷ್ಟ್ರಗಳಿಂದ ಮುಸ್ಲಿಮೇತರ ವಲಸಿಗರಿಂದ ಪೌರತ್ವಕ್ಕಾಗಿ ಅರ್ಜಿ ಆಹ್ವಾನಿಸಿ ಗೃಹ ಸಚಿವಾಲಯದಿಂದ ಹೊರಡಿಸಲಾಗಿರುವ ವಿವಾದಿತ ಅಧಿಸೂಚನೆಯ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನೀಸ್ ಅಹ್ಮದ್ ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ದಾವೆ(ಪಿಐಎಲ್) ದಾಖಲಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ- 2019ರ ಅಧೀನದ ನಿಯಮಗಳನ್ನು ಇನ್ನೂ ರೂಪಿಸಲಾಗಿಲ್ಲ. ಈ ಮಧ್ಯೆ ಗೃಹ ಸಚಿವಾಲಯದ ಗೆಝೆಟೆಡ್ ಅಧಿಸೂಚನೆಯ ಮೂಲಕ ಮೇ 28ರಂದು ಗುಜರಾತ್, ರಾಜಸ್ತಾನ, ಛತ್ತೀಸ್ ಗಢ್, ಹರ್ಯಾಣ ಮತ್ತು ಪಂಜಾಬಿನ 13 ಜಿಲ್ಲೆಗಳಲ್ಲಿ ಪ್ರಸಕ್ತ ನೆಲೆಸಿರುವ ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಹಿಂದು, ಸಿಖ್, ಜೈನ ಕ್ರಿಶ್ಚಿಯನ್ ಮತ್ತು ಬೌದ್ಧರಿಂದ ಪೌರತ್ವಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಗೃಹ ಸಚಿವಾಲಯದ ಈ ಅಧಿಸೂಚನೆಯು ಸಿಎಎಯನ್ನು ಹಿಂಬಾಗಿಲ ಮೂಲಕ ಅನುಷ್ಠಾನಗೊಳಿಸುವ ಒಂದು ಪ್ರಯತ್ನವಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಆರೋಪಿಸಿದೆ.

ಇದು ಪೌರತ್ವ ಕಾಯ್ದೆ- 1955ರ ಸೆಕ್ಷನ್ 5 ಮತ್ತು 6 ಅಡಿಯಲ್ಲಿ ನೋಂದಾಯಿಸಿ ತಮ್ಮ ಧರ್ಮದ ಆಧಾರದ ಮೇಲೆ ಮುಸ್ಲಿಮರಿಗೆ ಪೌರತ್ವ ಪಡೆಯುವುದನ್ನು ತಡೆಯುತ್ತದೆ ಮತ್ತು ಇದು ಭಾರತೀಯ ಸಂವಿಧಾನದ ಅನುಚ್ಛೇಧ 14ನ್ನು ಉಲ್ಲಂಘಿಸುತ್ತದೆ. ಈ ನಿಟ್ಟಿನಲ್ಲಿ ಈ ಅಧಿಸೂಚನೆಯು ಅಸಾಂವಿಧಾನಿಕ, ತಾರತಮ್ಯದಿಂದ ಕೂಡಿದೆ ಎಂದು ಘೋಷಿಸಬೇಕೆಂದು ಅನೀಸ್ ಅಹ್ಮದ್ ಸುಪ್ರೀಂ ಕೋರ್ಟ್ ನಲ್ಲಿ ದಾಖಲಿಸಿರುವ ಪಿಐಎಲ್ ನಲ್ಲಿ ಮನವಿ ಮಾಡಿದ್ದಾರೆ.

ಪೌರತ್ವ ಕಾಯ್ದೆ 1955ರ ಸೆಕ್ಷನ್ 5 ಮತ್ತು 6ರನ್ನು ಉಲ್ಲಂಘಿಸಿ ಹೊರಡಿಸಲಾಗಿರುವ ಈ ವಿವಾದಿತ ಗೆಝೆಟೆಡ್ ಅಧಿಸೂಚನೆಯನ್ನು ಪರಿಶೀಲಿಸಬೇಕೆಂದೂ ಅವರು ಪಿಐಎಲ್ ನಲ್ಲಿ ಕೋರಿದ್ದಾರೆ. ಜೊತೆಗೆ ಪೌರತ್ವ ಕಾಯ್ದೆ- 1955ರ ಸೆಕ್ಷನ್ 16ರ ಮರೆಯಲ್ಲಿ ಕೇಂದ್ರ ಸರಕಾರವು ನಡೆಸುತ್ತಿರುವ ‘ಆಡಳಿತದ ಕಪಟ ಪ್ರಯೋಗ’ವನ್ನು ತಡೆಯಬೇಕೆಂದೂ ಅವರು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X