Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಕೋವಿಶೀಲ್ಡ್, ಕೊವ್ಯಾಕ್ಸಿನ್ ಲಸಿಕೆ...

"ಕೋವಿಶೀಲ್ಡ್, ಕೊವ್ಯಾಕ್ಸಿನ್ ಲಸಿಕೆ ಪಡೆದರೂ ಕೊರೋನದ ‘ಡೆಲ್ಟಾ’ ಪ್ರಬೇಧದ ಸೋಂಕು ತಡೆಗಟ್ಟಲು ಅಸಾಧ್ಯ"

ಏಮ್ಸ್ ಅಧ್ಯಯನ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ9 Jun 2021 10:51 PM IST
share
ಕೋವಿಶೀಲ್ಡ್, ಕೊವ್ಯಾಕ್ಸಿನ್ ಲಸಿಕೆ ಪಡೆದರೂ ಕೊರೋನದ ‘ಡೆಲ್ಟಾ’ ಪ್ರಬೇಧದ ಸೋಂಕು ತಡೆಗಟ್ಟಲು ಅಸಾಧ್ಯ

ಹೊಸದಿಲ್ಲಿ, ಜೂ. 9: ಕೊವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆಯ ಎರಡೂ ಡೋಸ್ ಗಳನ್ನು ಪಡೆದರೂ ಭಾರತದಲ್ಲಿ ಕಳೆದ ವರ್ಷ ಅಕ್ಟೋಬರ್ ನಲ್ಲಿ ಮೊದಲ ಬಾರಿಗೆ ಪತ್ತೆಯಾದ ಕೋವಿಡ್-19ನ ‘ಡೆಲ್ಟಾ’ ಪ್ರಭೇದ ಸೋಂಕನ್ನು ತಡೆಯಲು ಸಾಧ್ಯವಿಲ್ಲ ಎಂದು ದಿಲ್ಲಿ ಏಮ್ಸ್ (ಎಐಐಎಂಎಸ್) ಹಾಗೂ ರೋಗ ನಿಯಂತ್ರಣದ ರಾಷ್ಟ್ರೀಯ ಕೇಂದ್ರ (ಎನ್ಸಿಡಿಸಿ) ತನ್ನ ಪ್ರತ್ಯೇಕ ವರದಿಗಳಲ್ಲಿ ಹೇಳಿದೆ. 

ಆದರೆ, ಇಲ್ಲಿ ಗಮನಿಸಬೇಕಾದ ಅಂಶವೆಂದರೆ, ಈ ವರದಿಯನ್ನು ಉನ್ನತ ಸಂಸ್ಥೆಗಳು ಪರಾಮರ್ಶಿಸಿಲ್ಲ. ಆಸ್ಪತ್ರೆಯೊಂದರ ತುರ್ತು ನಿಗಾ ಘಟಕದ ವಾರ್ಡ್ ನಲ್ಲಿ 5ರಿಂದ 7 ದಿನಗಳ ಕಾಲ ತೀವ್ರ ಜ್ವರ ಕಾಣಿಸಿಕೊಂಡ ಕೊರೋನ ರೋಗಲಕ್ಷಣ ಹೊಂದಿದ 63 ಮಂದಿ ರೋಗಿಗಳ ವಿಶ್ಲೇಷಣೆಯನ್ನು ಏಮ್ಸ್-ಐಜಿಐಬಿ (ವಂಶವಾಹಿನಿಶಾಸ್ತ್ರ ಹಾಗೂ ಸಮಗ್ರ ಜೀವಶಾಸ್ತ್ರ ಸಂಸ್ಥೆ)ಯ ಅಧ್ಯಯನವನ್ನು ಈ ವರದಿ ಆಧರಿಸಿದೆ. 63 ಜನರಲ್ಲಿ 53 ಜನರಿಗೆ ಕನಿಷ್ಠ ಒಂದು ಡೋಸ್ ಕೊವ್ಯಾಕ್ಸಿನ್ ನೀಡಲಾಗಿತ್ತು. ಉಳಿದವರಿಗೆ ಕನಿಷ್ಠ ಒಂದು ಡೋಸ್ ಕೋವಿಶೀಲ್ಡ್ ನೀಡಲಾಗಿತ್ತು. ಡೆಲ್ಟಾ ಪ್ರಭೇದ ಕೊರೋನ ಲಸಿಕೆಯ ಒಂದು ಡೋಸ್ ತೆಗೆದುಕೊಂಡ ಶೇ. 76.9 ಜನರಲ್ಲಿ ಹಾಗೂ ಎರಡೂ ಡೋಸ್ ತೆಗೆದುಕೊಂಡ ಶೇ. 60 ಜನರಲ್ಲಿ ಸೋಂಕು ಉಂಟು ಮಾಡಿರುವುದು ಪತ್ತೆಯಾಗಿದೆ. ಕೋವಿಶೀಲ್ಡ್ ಲಸಿಕೆ ತೆಗೆದುಕೊಂಡ ಶೇ. 70.3 ಜನರಲ್ಲಿ ಡೆಲ್ಟಾ ಸೋಂಕಿಗೆ ತುತ್ತಾಗಿದ್ದಾರೆ ಎಂಬುದನ್ನು ಎನ್ಸಿಡಿಸಿ-ಐಜಿಐಬಿಯ ದತ್ತಾಂಶ ತಿಳಿಸಿದೆ. 

ಕೋವಿಶೀಲ್ಡ್ ಹಾಗೂ ಕೊವ್ಯಾಕ್ಸಿನ್ ಲಸಿಕೆ ಪಡೆದುಕೊಂಡವರಲ್ಲಿ ‘ಆಲ್ಫಾ’ ಪ್ರಬೇಧದ ಸೋಂಕು ತಗಲದೇ ಇರುವುದನ್ನು ಎರಡೂ ಅಧ್ಯಯನಗಳ ವರದಿಗಳು ಬಹಿರಂಗಪಡಿಸಿವೆ. ಡೆಲ್ಟಾ ಹಾಗೂ ಆಲ್ಫಾ ಪ್ರಬೇಧದ ವಿರುದ್ಧದ ಲಸಿಕೆಗಳ ರಕ್ಷಣೆಯ ಪ್ರಮಾಣ ಕಡಿಮೆಯಾಗಬಹುದು, ಪ್ರತಿ ಪ್ರಕರಣದಲ್ಲಿ ಸೋಂಕಿನ ತೀವ್ರತೆಯ ಮೇಲೆ ಲಸಿಕೆಗಳು ಯಾವುದೇ ಪರಿಣಾಮ ಉಂಟು ಮಾಡದಿರುವುದು ಕಂಡು ಬಂದಿದೆ ಎಂದು ಎರಡೂ ಅಧ್ಯಯನಗಳು ತಿಳಿಸಿವೆ. ಆದರೆ, ಡೆಲ್ಟಾ ವೈರಸ್ ಅನ್ನು ಕೂಡ ತಟಸ್ಥಗೊಳಿಸುವ ಸಾಮರ್ಥ್ಯವನ್ನು ಭಾರತ ಬಯೋಟೆಕ್ ನ ಕೊವ್ಯಾಕ್ಸಿನ್ ಹೊಂದಿದೆ ಎಂದು ಪುಣೆಯ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್-ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ (ಐಸಿಎಂಆರ್-ಎನ್ಐವಿ)ಯ ಸಂಶೋಧಕರು ಪತ್ತೆ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X