Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಮ್ಮ ಮೆಟ್ರೋ, ಉಪನಗರ ರೈಲು ಯೋಜನೆಗಳ...

ನಮ್ಮ ಮೆಟ್ರೋ, ಉಪನಗರ ರೈಲು ಯೋಜನೆಗಳ ಪ್ರಗತಿ ಪರಿಶೀಲಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ9 Jun 2021 11:02 PM IST
share

ಬೆಂಗಳೂರು, ಜೂ. 9: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಬೆಂಗಳೂರು ನಮ್ಮ ಮೆಟ್ರೋ ಹಾಗೂ ಬೆಂಗಳೂರು ಉಪನಗರ ರೈಲು ಯೋಜನೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.

ಮೆಟ್ರೋ ಯೋಜನೆಯ ಮೊದಲ ಹಂತದ ಕಾಮಗಾರಿಗಳು 2011ರಲ್ಲಿ ಪ್ರಾರಂಭವಾಗಿ 2017ರಲ್ಲಿ ಪೂರ್ಣಗೊಂಡು ಪ್ರಸ್ತುತ 48.3 ಕಿ.ಮೀ ಉದ್ದದ ಮಾರ್ಗದಲ್ಲಿ ಸಾರ್ವಜನಿಕರಿಗೆ ಸೇವೆ ಲಭ್ಯವಿದೆ. 66.1 ಕಿಮೀ ಉದ್ದದ ಮೆಟ್ರೋ ರೈಲು ಮಾರ್ಗ ನಿರ್ಮಾಣದ ಹಂತದಲ್ಲಿದ್ದು, ಈವರೆಗೆ 33,070 ಕೋಟಿ ರೂ.ವೆಚ್ಚವಾಗಿದೆ. 48.3 ಕಿಮೀ ಮಾರ್ಗದಲ್ಲಿ ಸಂಚರಿಸುತ್ತಿರುವ ಮೆಟ್ರೋ ರೈಲುಗಳಿಂದಾಗಿ ವಾರ್ಷಿಕ 434 ಕೋಟಿ ರೂ. ಆದಾಯ ದೊರೆಯುತ್ತಿದ್ದು, ಈವರೆಗೆ 1,659 ಕೋಟಿ ರೂ. ಆದಾಯ ಸಂಗ್ರಹವಾಗಿದೆ.

ಮೆಟ್ರೋ ರೈಲುಗಳಲ್ಲಿ ದಿನವೊಂದರಲ್ಲಿ ಅತಿ ಹೆಚ್ಚು ಸಂಚರಿಸಿದ ಪ್ರಯಾಣಿಕರ ಸಂಖ್ಯೆ 6.1ಲಕ್ಷ ವಿದ್ದು, 1.67ಕೋಟಿ ರೂ.ಆದಾಯ ಸಂಗ್ರಹಣೆ ದಾಖಲೆಯಾಗಿದೆ. ತಿಂಗಳೊಂದಕ್ಕೆ ಸರಾಸರಿ 10.14 ಕೋಟಿ ರೂ.ಆದಾಯ ಸಂಗ್ರಹಣೆಯಾಗುತ್ತಿದೆ. 2021ರ ಎಪ್ರಿಲ್ 23ರಿಂದ ಕೋವಿಡ್ ಸಾಂಕ್ರಾಮಿಕದ ಕಾರಣ ಮೆಟ್ರೋ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ನಿರ್ಬಂಧಗಳ ಸಡಿಲಿಕೆ ನಂತರ ಮತ್ತೆ ಮೆಟ್ರೋ ಸಂಚಾರ ಪ್ರಾರಂಭಿಸಲು ಬಿಎಂಆರ್ಸಿಎಲ್ ಸನ್ನದ್ಧವಾಗಿದೆ. 

ಬೆಂಗಳೂರು ಮೆಟ್ರೋ ರೈಲು ಯೋಜನೆಗಳನ್ನು ನಗರದ ಎಲ್ಲ ಭಾಗಗಳಲ್ಲಿ ಅಳವಡಿಸಲು ಹಂತ 2, ಹಂತ 2 ಎ ಹಾಗೂ ಹಂತ 2 ಬಿಗೆ ಕೇಂದ್ರ ಸರಕಾರ ಅನುಮತಿ ನೀಡಿದೆ. ಹಂತ 2ರ ಯಲಚೇನಹಳ್ಳಿ-ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣದ ಹಸಿರು ಮಾರ್ಗದಲ್ಲಿ 6 ಕಿ.ಮೀ ಸಂಚಾರಕ್ಕೆ ಜನವರಿಯಲ್ಲಿ ಮುಕ್ತಗೊಳಿಸಿದ್ದು, ಮೈಸೂರು ರಸ್ತೆ ನಾಯಂಡಹಳ್ಳಿಯಿಂದ ಕೆಂಗೇರಿಯ ವರೆಗಿನ ಮಾರ್ಗದಲ್ಲಿ ಜುಲೈ ತಿಂಗಳಲ್ಲಿ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು.

ಪ್ರಯಾಣ ವೆಚ್ಚದ ಸಂಗ್ರಹದಿಂದ ಮಾತ್ರ ಮೆಟ್ರೋ ಲಾಭ ಗಳಿಸಲಾಗದು, ಮೆಟ್ರೋ ಮಾರ್ಗದ ವ್ಯಾಪ್ತಿಯಲ್ಲಿ ಲಭ್ಯವಿರುವ ವಾಣಿಜ್ಯ ಪ್ರದೇಶಗಳು ಹಾಗೂ ನಿಲ್ದಾಣಗಳಲ್ಲಿ ಆದಾಯಜನಕ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಮೂಲಕ ನಮ್ಮ ಮೆಟ್ರೋ ಲಾಭದತ್ತ ಸಾಗಬೇಕೆಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು. ನಿರ್ವಹಣಾ ವೆಚ್ಚವನ್ನು ಕಡಿಮೆ ಮಾಡಲು ಸಲಹೆ ಮಾಡಿದರು. ಮೆಟ್ರೋ ಯೋಜನೆಯ ಎರಡನೆ ಹಂತದ ಕಾಮಗಾರಿಗಳ ತ್ವರಿತ ಅನುಷ್ಠಾನಕ್ಕೆ ಕಾಲಬದ್ಧವಾಗಿ ಪರಿಶೀಲನಾ ಸಭೆಗಳನ್ನು ನಡೆಸಿ ವಿವಿಧ ಇಲಾಖೆಗಳ ನಡುವೆ ಸಮನ್ವಯ ಮೂಡಿಸಲು ಮುಖ್ಯಮಂತ್ರಿ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದರು.

ಸಬ್ ಅರ್ಬನ್ ರೈಲು ಯೋಜನೆಗಳು: ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸಿದ್ದಲ್ಲಿ ಸಂಚಾರದ ಮೇಲಿನ ಒತ್ತಡವನ್ನು ಗಣನೀಯವಾಗಿ ತಗ್ಗಿಸಬಹುದಾಗಿದೆ. ಬೈಯ್ಯಪ್ಪನಹಳ್ಳಿಯಿಂದ ಚಿಕ್ಕಬಾಣಾವರ ನಡುವಿನ 25.01 ಕಿಮೀ. ಉದ್ದದ ಮಾರ್ಗದ ಟೆಂಡರ್ ನ್ನು 2021ರ ಅಕ್ಟೋಬರ್ ವೇಳೆಗೆ ಪೂರ್ಣಗೊಳಿಸುವ ಉದ್ದೇಶವಿದ್ದು, ಈ ಗಡುವಿನೊಳಗೆ ಟೆಂಡರ್ ಪ್ರಕ್ರಿಯೆ ಮುಗಿಸಿ ಕಾಮಗಾರಿಗಳ ಪ್ರಾರಂಭಕ್ಕೆ ಕ್ರಮ ಕೈಗೊಳ್ಳುವಂತೆ ಸಲಹೆ ಮಾಡಿದರು.

ರೈಲ್ವೆ ಮಾರ್ಗ ದ್ವಿಪಥೀಕರಣ(ಡಬ್ಲಿಂಗ್) ಯೋಜನೆಯಡಿ ಬೈಯ್ಯಪ್ಪನಹಳ್ಳಿ-ಹೊಸೂರು(48 ಕಿ.ಮೀ), ಯಶವಂತಪುರ, ಚೆನ್ನಸಂದ್ರ(21.70 ಕಿ.ಮೀ) ಕಾಮಗಾರಿಗಳು ಅನುಷ್ಠಾನದಲ್ಲಿವೆ. 323 ಕೋಟಿ ರೂ.ಗಳಿಗೆ ಟೆಂಡರ್ ನೀಡಲಾಗಿದೆ. ಈವರೆಗೆ 45 ಲಕ್ಷ ಘನ ಮೀ.ವ್ಯಾಪ್ತಿಯಲ್ಲಿ ಭೂಮಿಯ ಕೆಲಸಗಳು ನಡೆದಿವೆ. 12 ಸೇತುವೆಗಳ ನಿರ್ಮಾಣ ಪೂರ್ಣಗೊಂಡಿದೆ. 20 ಸೇತುವೆಗಳ ಕಾಮಗಾರಿ ಪ್ರಗತಿಯಲ್ಲಿದೆ. ಈ ಎಲ್ಲಾ ಕಾಮಗಾರಿಗಳ ಅನುಷ್ಠಾನ ಕಾಲಬದ್ಧವಾಗಿ ಆಗಬೇಕು. ಆ ಕಡೆ ತೀವ್ರ ಗಮನ ಹರಿಸಿ ಕಾರ್ಯನಿರ್ವಹಿಸುವಂತೆ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X