ಉಡುಪಿ: ಎಚ್‌ಆರ್‌ಎಸ್‌ನಿಂದ ನೂತನ ಆ್ಯಂಬ್ಯುಲೆನ್ಸ್ ಲೋಕಾರ್ಪಣೆ

ಉಡುಪಿ, ಜೂ.10: ಉಡುಪಿಯ ಎಚ್.ಆರ್.ಎಸ್. ವತಿಯಿಂದ ಇಂದು ಅಂಬ್ಯುಲೆನ್ಸ್’ನ್ನು ಉಡುಪಿ ಜಿಲ್ಲಾಸ್ಪತ್ರೆಯ ಆವರಣದಲ್ಲಿ ವೈದ್ಯಾಧಿಕಾರಿ ಡಾ.ಚಂದ್ರಶೇಖರ್ ಅಡಿಗ ಲೋಕಾರ್ಪಣೆ ಮಾಡಿದರು.
ಬಳಿಕ ಮಾತನಾಡಿದ ಅವರು, ಕೋರೊನ ಸೋಂಕು ಈ ದೇಶದ ಜನರ ಮೇಲೆ ಬಹಳಷ್ಟು ಪರಿಣಾಮ ಬೀರಿದೆ. ಈ ಸಂದರ್ಭದಲ್ಲಿ ಎಚ್.ಆರ್.ಎಸ್ ಸಂಸ್ಥೆ ಕೈಜೋಡಿಸಿ ನಮ್ಮೊಂದಿಗೆ ಕಾರ್ಯಚರಿಸಿದೆ. ಜಿಲ್ಲೆಯಲ್ಲಿ ವೈದ್ಯಕೀಯ ಸೇವೆ ಒದಗಿಸಲು ಇದ್ದ ಒತ್ತಡವನ್ನು ಕಡಿಮೆಗೊಳಿಸುವಲ್ಲಿ ಅವರ ಪಾತ್ರ ಗಮನಾರ್ಹ. ಎಚ್‌ಆರ್‌ಎಸ್ ಕಾರ್ಯಕರ್ತರು ಮುಂಚೂಣಿ ಕಾರ್ಯಕರ್ತರಾಗಿದ್ದು ಎಲ್ಲರೂ ಕೂಡ ಕಡ್ಡಾಯವಾಗಿ ಲಸಿಕೆ ಪಡೆದುಕೊಳ್ಳಬೇಕು ಎಂದರು.
ಜಿಲ್ಲಾಸ್ಪತ್ರೆಯ ವೈದ್ಯ ಡಾ.ಸುದೇಶ್ ಕುಮಾರ್, ಎಚ್.ಆರ್.ಎಸ್ ಕ್ಯಾಪ್ಟನ್ ಅಮೀರ್ ಶುಭ ಹಾರೈಸಿದರು. ಅಝೀಜ್ ಉದ್ಯಾವರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಉಡುಪಿ ಜಾಮೀಯಾ ಮಸೀದಿಯ ಅಧ್ಯಕ್ಷ ಅರ್ಶದ್, ಎಚ್ಆರ್ಎಸ್ ಉಡುಪಿ ಜಿಲ್ಲಾ ಹೊಣೆಗಾರರಾದ ಹಸನ್ ಕೋಡಿಬೆಂಗ್ರೆ, ಜಮಾಅತೆ ಇಸ್ಲಾಮಿ ಹಿಂದ್ ಉಡುಪಿ ಜಿಲ್ಲಾಧ್ಯಕ್ಷ ಶಬ್ಬಿರ್ ಮಲ್ಪೆ, ಅನ್ವರ್ ಅಲಿ ಕಾಪು, ಮುಹಮ್ಮದ್ ರೆಹಾನ್ ಗಂಗೊಳ್ಳಿ, ಹಸನ್ ಮವಾಡ್ ಮುಂತಾದವರು ಉಪಸ್ಥಿತರಿದ್ದರು. ಯಾಸೀನ್ ಕೋಡಿಬೆಂಗ್ರೆ ಕಾರ್ಯಕ್ರಮ ನಿರೂಪಿಸಿದರು.







