ಯಡಮೊಗೆ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

ಕುಂದಾಪುರ, ಜೂ.10: ಯಡಮೊಗೆ ಉದಯ್ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಶಂಕರನಾರಾಯಣ ಪೊಲೀಸರು ಬುಧವಾರ ಬಂಧಿಸಿದ್ದು, ಈ ಮೂಲಕ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೇರಿಕೆಯಾಗಿದೆ.
ಯಡಮೊಗೆ ನಿವಾಸಿ ಮನೋಜ್ ಕುಮಾರ್(26) ಬಂಧಿತ ಆರೋಪಿ. ಈತನನ್ನು ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಜೂ.29ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದರು.
ಗ್ರಾಪಂ ಅಧ್ಯಕ್ಷ ಪ್ರಾಣೇಶ್ ಯಡಿಯಾಳ್ ಹಾಗೂ ಆತನ ತಂಡ ಉದಯ್ ಗಾಣಿಗ ಅವರ ಮೈಮೇಲೆ ಕಾರು ಹತ್ತಿಸಿ ಬಳಿಕ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿತ್ತು. ಈ ಸಂಬಂಧ ಪ್ರಾಣೇಶ್ ಯಡಿಯಾಳ್, ರಾಜೇಶ್ ಭಟ್ ಹಾಗೂ ಬಾಲಚಂದ್ರ ಭಟ್ನನ್ನು ಪೊಲೀಸರು ಬಂಧಿಸಿದ್ದರು. ಇವರೆಲ್ಲ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ.
Next Story





