Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊವ್ಯಾಕ್ಸಿನ್ ದುಬಾರಿ ಮಾರುಕಟ್ಟೆ...

ಕೊವ್ಯಾಕ್ಸಿನ್ ದುಬಾರಿ ಮಾರುಕಟ್ಟೆ ದರಕ್ಕೆ ತಜ್ಞರ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ12 Jun 2021 9:52 AM IST
share
ಕೊವ್ಯಾಕ್ಸಿನ್ ದುಬಾರಿ ಮಾರುಕಟ್ಟೆ ದರಕ್ಕೆ ತಜ್ಞರ ಆಕ್ಷೇಪ

ಮುಂಬೈ : ದೇಶೀಯವಾಗಿ ಭಾರತ್ ಬಯೋಟೆಕ್ ಉತ್ಪಾದಿಸುತ್ತಿರುವ ಕೊವ್ಯಾಕ್ಸಿನ್ ಕೋವಿಡ್-19 ಲಸಿಕೆಗೆ 1,410 ರೂ. ಮಾರುಕಟ್ಟೆ ದರ ನಿಗದಿಪಡಿಸಿರುವ ಬಗ್ಗೆ ತಜ್ಞರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ದರ ಸೆರಮ್ ಇನ್‌ಸ್ಟಿಟ್ಯೂಟ್, ಕೋವಿಶೀಲ್ಡ್‌ಗೆ ನಿಗದಿಪಡಿಸಿರುವ ದರದ ದುಪ್ಪಟ್ಟಾಗಿರುವುದು ಚರ್ಚೆಗೆ ಗ್ರಾಸವಾಗಿದೆ.

ಕೊವ್ಯಾಕ್ಸಿನ್ ಡೋಸ್ ಖಾಸಗಿ ಮಾರುಕಟ್ಟೆಯಲ್ಲಿ ಅತ್ಯಂತ ದುಬಾರಿ ಲಸಿಕೆಯಾಗಿದ್ದು, ರಷ್ಯಾದಿಂದ ಆಮದು ಮಾಡಿಕೊಳ್ಳುವ ಸ್ಪುಟ್ನಿಕ್‌ಗಿಂತಲೂ ದುಬಾರಿ. 1145 ರೂಪಾಯಿ ದರದಲ್ಲಿ ರಷ್ಯಾದಿಂದ ಸ್ಪುಟ್ನಿಕ್ ಲಸಿಕೆ ಆಮದು ಮಾಡಿಕೊಳ್ಳಲಾಗುತ್ತಿದೆ. ಕೊವ್ಯಾಕ್ಸಿನ್ ಲಸಿಕೆಯನ್ನು ಈಗಾಗಲೇ ಸ್ಥಾಪಿತವಾದ ತಂತ್ರಜ್ಞಾನದ ಮೂಲಕ ಹಾಗೂ ದೇಶೀಯವಾಗಿಯೇ ಉತ್ಪಾದಿಸಲಾಗುತ್ತಿದ್ದು, ಇದರ ಸಂಶೋಧನೆ ಮತ್ತು ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸಬ್ಸಿಡಿ ನೀಡಿತ್ತು. ಆದಾಗ್ಯೂ ಲಸಿಕೆಗೆ ದುಬಾರಿ ದರ ನಿಗದಿಪಡಿಸಿರುವುದು ಎಷ್ಟು ಸಮಂಜಸ ಎಂದು ತಜ್ಞರು ಪ್ರಶ್ನಿಸಿದ್ದಾರೆ.

ಇತರ ಪೋಲಿಯೊ ಹಾಗೂ ಹೆಪಟೈಟಿಸ್ ಬಿ ಲಸಿಕೆಗಳು ಇಂಥದ್ದೇ ತಂತ್ರಜ್ಞಾನ ಪ್ಲಾಟ್‌ಫಾರಂ ಬಳಸಿಕೊಂಡು ತಯಾರಾಗುತ್ತಿದ್ದು, ದೊಡ್ಡ ಪ್ರಮಾಣದಲ್ಲಿ ಉತ್ಪಾದನೆಯಾಗುವುದರಿಂದ ಕೈಗೆಟುವ ಬೆಲೆಯಲ್ಲಿವೆ. ಇದೇ ಕಾರ್ಯತಂತ್ರವನ್ನು ಆರಂಭದಿಂದಲೇ ಕೋವ್ಯಾಕ್ಸಿನ್ ವಿಚಾರದಲ್ಲೂ ಅನುಸರಿಸಬೇಕು ಎಂದು ತಜ್ಞರು ಸಲಹೆ ಮಾಡಿದ್ದಾರೆ.

ಸಾರ್ವತ್ರಿಕ ಲಸಿಕೆ ನೀತಿ ಇಲ್ಲದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಲಸಿಕೆಯ ಬೆಲೆ ಕೈಗೆಟುಕುವಂತಾಗಲು ಮತ್ತು ಲಾಭಕೋರ ನೀತಿಯನ್ನು ತಡೆಯುವ ಸಲುವಾಗಿ ಎಲ್ಲ ಲಸಿಕೆ ಉತ್ಪಾದನೆ ಕಂಪನಿಗಳ ಜತೆ ಚೌಕಾಶಿ ನಡೆಸಬೇಕು ಎಂದು ಸಾರ್ವಜನಿಕ ಆರೋಗ್ಯ ಕ್ಷೇತ್ರದ ತಜ್ಞರು ಆಗ್ರಹಿಸಿದ್ದಾರೆ.

ಕೋವ್ಯಾಕ್ಸಿನ್‌ನ ಕ್ಲಿನಿಕಲ್ ಪೂರ್ವ ಅಧ್ಯಯನದ ಮೇಲೆ ಕೇಂದ್ರ ಸರ್ಕಾರ ಹೂಡಿಕೆ ಮಾಡಿತ್ತು. ಕೋವಿಶೀಲ್ಡ್‌ನ ಕ್ಲಿನಿಕಲ್ ಪರೀಕ್ಷೆ ಮೇಲೆ ಸರ್ಕಾರ 11 ಕೋಟಿ ಹಾಗೂ ಕೋವ್ಯಾಕ್ಸಿನ್ ಪರೀಕ್ಷೆ ಮೇಲೆ 35 ಕೋಟಿ ರೂಪಾಯಿ ವೆಚ್ಚ ಮಾಡಿತ್ತು. ಕೋವ್ಯಾಕ್ಸಿನ್‌ನ ಬೌದ್ಧಿಕ ಆಸ್ತಿ ಹಕ್ಕನ್ನು ಭಾರತ್ ಬಯೋಟೆಕ್, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮತ್ತು ರಾಷ್ಟ್ರೀಯ ವೈರಾಲಜಿ ಸಂಸ್ಥೆ ಜತೆ ಹಂಚಿಕೊಂಡಿದೆ.

"ತಂತ್ರಜ್ಞಾನ ವರ್ಗಾವಣೆ ಮಾದರಿ ಮತ್ತು ಪಾಲುದಾರಿಕೆಯನ್ನು ಅನುಸರಿಸಿದಲ್ಲಿ ಪ್ರಮಾಣ ಹೆಚ್ಚುತ್ತದೆ ಹಾಗೂ ಉತ್ಪಾದನಾ ವೆಚ್ಚ ಕಡಿಮೆಯಾಗುತ್ತದೆ" ಎಂದು ಉದ್ಯಮದ ತಜ್ಞರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X