ದೆಹಲಿ ಭೇಟಿ ಹಿಂದೆ ರಾಜಕೀಯ ಉದ್ದೇಶ ಇಲ್ಲ: ಶಾಸಕ ಅರವಿಂದ ಬೆಲ್ಲದ

ಬೆಂಗಳೂರು : ನಾನು ಕುಟುಂಬದ ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿಗೆ ಭೇಟಿ ನೀಡಿದ್ದು, ನನ್ನ ದೆಹಲಿ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ ಸ್ಪಷ್ಟಣೆ ನೀಡಿದ್ದಾರೆ.
ನಾನು ರಾಷ್ಟ್ರೀಯ ನಾಯಕರ ಭೇಟಿಗಾಗಿಯಾಗಲಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲು ದೆಹಲಿಗೆ ಆಗಮಿಸಿಲ್ಲ. ನಾನು ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದರೂ ಮಾಧ್ಯಮಗಳಲ್ಲಿ ರಾಜಕೀಯ ಬೆಳವಣಿಗೆಗಳ ಚರ್ಚೆಗೆ ದೆಹಲಿಗೆ ಬಂದಿದ್ದಾರೆ ಎನ್ನುವ ರೀತಿ ಸುದ್ದಿ ಹರಡಿಸಲಾಗುತ್ತಿದೆ.
ಮಾಧ್ಯಮಗಳಲ್ಲಿ ನನ್ನ ದೆಹಲಿ ಭೇಟಿಯ ಕುರಿತು ಬರುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾಗಿದೆ. ಹೀಗಾಗಿ ನನ್ನ ದೆಹಲಿ ಭೇಟಿಯ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ ಎಂದು ಮಾಧ್ಯಮ ಮಿತ್ರರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಅರವಿಂದ ಬೆಲ್ಲದ ಕೋರಿದ್ದಾರೆ.
Next Story





