ದಕ್ಷಿಣ ದಿಲ್ಲಿಯ ಶೋ ರೂಮ್ ನಲ್ಲಿ ಬೆಂಕಿ: ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಯಂತ್ರಗಳು

photo: twitter
ಹೊಸದಿಲ್ಲಿ: ದಕ್ಷಿಣ ದಿಲ್ಲಿಯ ಲಜಪತ್ ನಗರ ಸೆಂಟ್ರಲ್ ಮಾರ್ಕೆಟ್ ಪ್ರದೇಶದ ಶೋ ರೂಮ್ ನಲ್ಲಿ ಶನಿವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ದಿಲ್ಲಿ ಅಗ್ನಿಶಾಮಕ ಸೇವಾ ಅಧಿಕಾರಿಗಳು ತಿಳಿಸಿದ್ದಾರೆ.
ಅಗ್ನಿಶಾಮಕ ಇಲಾಖೆಯ ಪ್ರಕಾರ, ಬೆಳಿಗ್ಗೆ 10.20 ರ ಸುಮಾರಿಗೆ ಬೆಂಕಿ ಹತ್ತಿಕೊಂಡ ಬಗ್ಗೆ ಕರೆ ಬಂದಿದ್ದು, ಅದರ ನಂತರ 16 ಅಗ್ನಿಶಾಮಕ ಯಂತ್ರಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ.
ಅಗ್ನಿಶಾಮಕ ಕಾರ್ಯಾಚರಣೆ ನಡೆಯುತ್ತಿದೆ ಹಾಗೂ ಬೆಂಕಿಯ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ಹೇಳಿದರು.
Next Story





